Home
Deal of the day

12,000 ಉಳಿತಾಯ! OnePlus 12 ಬೆಲೆ ಭಾರೀ ಕುಸಿತ.. ಎಷ್ಟಕ್ಕೆ ಸಿಗುತ್ತೆ.. ವಿಶೇಷತೆಗಳೇನು?

ನೀವು ಹೊಸ ಒನ್‌ಪ್ಲಸ್ ಮೊಬೈಲ್ ಖರೀದಿಸಲು ಬಯಸಿದ್ದೀರಾ? ಅದರಲ್ಲೂ ಒನ್‌ಪ್ಲಸ್‌ 12 (OnePlus 12) ಫೋನಿನ ಮೇಲೆ ಕಣ್ಣಿಟ್ಟಿದ್ದರೆ, ಇದನ್ನು ಕೊಳ್ಳಲು ಇದುವೇ ಬೆಸ್ಟ್ ಟೈಮ್. ಹೌದು, ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್ ಈ ಫೋನಿನ ಖರೀದಿ ಮೇಲೆ 8,000 ರೂ.ಗಿಂತ ಹೆಚ್ಚಿನ ರಿಯಾಯಿತಿ ನೀಡುತ್ತಿದೆ. ಈ ಮೂಲಕ ತನ್ನ ಗ್ರಾಹಕರಿಗೆ ಈ ಫೋನನ್ನು ಕೈಗೆಟುಕುವಂತೆ ಬೆಲೆಗೆ ಲಭ್ಯವಾಗಿಸಿದೆ. ಜೊತೆಗೆ, ಹೆಚ್ಚುವರಿ ಬ್ಯಾಂಕ್ ರಿಯಾಯಿತಿ ಮತ್ತು ಎಕ್ಸ್‌ಚೇಂಜ್ ಆಫರ್ ಮೂಲಕ ಇದರ ಬೆಲೆಯನ್ನು ಮತ್ತಷ್ಟು ಕಡಿಮೆ ಮಾಡಬಹುದು.

ಒನ್‌ಪ್ಲಸ್‌ 12 ಮೊಬೈಲ್ ಎರಡು ಸ್ಟೋರೇಜ್‌ ಆಯ್ಕೆಯಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಈ ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 3 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 64 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 6.82 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 6GB RAM + 512GB ಸ್ಟೋರೇಜ್, 5400mAh ಬ್ಯಾಟರಿ ಮತ್ತು 100W ಚಾರ್ಜಿಂಗ್ ಸೇರಿದಂತೆ ಹಲವು ಅತ್ಯುತ್ತಮ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಪೋನಿನ ಹೊಸ ಬೆಲೆ ಮತ್ತು ಇನ್ನಷ್ಟು ವಿವರಗಳನ್ನು ತಿಳಿಯಲು ಮುಂದೆ ಓದಿ.

12,000 ಉಳಿತಾಯ! OnePlus 12 ಬೆಲೆ ಭಾರೀ ಕುಸಿತ.. ಹೊಸ ದರ, ವಿಶೇಷತೆಗಳೇನು?

ಒನ್‌ಪ್ಲಸ್‌ 12 ಸೇಲ್: ಎಷ್ಟು ಹಣ ಉಳಿಸಬಹುದು?

ಒನ್‌ಪ್ಲಸ್ 12 ಫೋನನ್ನು 64,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಅಮೆಜಾನ್‌ನಲ್ಲಿ ಬೆಲೆಯನ್ನು 56,999 ರೂ.ಗೆ ಇಳಿಕೆ ಮಾಡಿದೆ. ನೀವು ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿದರೆ ಅಥವಾ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಇಎಂಐ ವಹಿವಾಟಿನ ಮೇಲೆ, ಹೆಚ್ಚುವರಿ 4,000 ರೂ. ರಿಯಾಯಿತಿ ಪಡೆಯಬಹುದು. ಇದು ಫೋನಿನ ಬೆಲೆಯನ್ನು ಮತ್ತಷ್ಟು ಕಡಿಮೆ ಮಾಡುತ್ತದೆ. ಇದರೊಂದಿಗೆ ಎಕ್ಸ್‌ಚೇಂಜ್ ಆಫರ್ ಸಹ ಲಭ್ಯವಿದೆ. ನೀವು, ಸಿಲ್ಕಿ ಬ್ಲಾಕ್, ಫ್ಲೋವಿ ಎಮರಾಲ್ಡ್ ಮತ್ತು ಗ್ಲೇಶಿಯಲ್ ವೈಟ್ ಬಣ್ಣಗಳ ಆಯ್ಕೆಯಲ್ಲಿ ಈ ಫೋನನ್ನು ಖರೀದಿಸಬಹುದು.

ಒನ್‌ಪ್ಲಸ್ 12 ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಒನ್‌ಪ್ಲಸ್ 12 ಸ್ಮಾರ್ಟ್‌ಫೋನ್ 6.82 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು LTPO ಪ್ಲಸ್ ಕ್ವಾಡ್ ಡಿಸ್ಪ್ಲೇ ಆಗಿದೆ. ಈ ಸ್ಕ್ರೀನ್ 4500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಹಾಗೆಯೇ 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಹೊಂದಿದೆ.

ಶಕ್ತಿಶಾಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್

ಒನ್‌ಪ್ಲಸ್ 12 ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 3 ಆಕ್ಟಾ ಕೋರ್ ಪ್ರೊಸೆಸರ್‌ ಹೊಂದಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಆಕ್ಸಿಜನ್ ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಅಡ್ರಿನೊ 750 ಜಿಪಿಯು ಸಹ ಹೊಂದಿದೆ. ಗೇಮಿಂಗ್‌ಗಾಗಿ ಸುಧಾರಿತ ವೇಪರ್ ಕೂಲಿಂಗ್ ಸಿಸ್ಟಮ್ (ಆವಿ ಕೂಲಿಂಗ್ ವ್ಯವಸ್ಥೆ) ಇದೆ. ಈ ಮೊಬೈಲ್ 16GB RAM + 512GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

12,000 ಉಳಿತಾಯ! OnePlus 12 ಬೆಲೆ ಭಾರೀ ಕುಸಿತ.. ಹೊಸ ದರ, ವಿಶೇಷತೆಗಳೇನು?

ಟ್ರಿಪಲ್ ಕ್ಯಾಮೆರಾ ಸೆಟಪ್

ಒನ್‌ಪ್ಲಸ್ 12 ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 48 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.

ಬೊಂಬಾಟ್ ಬ್ಯಾಟರಿ

ಒನ್‌ಪ್ಲಸ್ 12 ಮೊಬೈಲ್‌ 5400mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 100W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದರೊಂದಿಗೆ 50W ವೈರ್‌ಲೆಸ್ ಚಾರ್ಜಿಂಗ್‌ ಸಹ ನೀಡಲಾಗಿದೆ.

Best Mobiles in India

English summary
OnePlus 12 buyers can save Up to Rs 12,000 on Amazon: here’s how
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+