Home
Deal of the day

ಒನ್‌ಪ್ಲಸ್‌ ಸಂಸ್ಥೆಯ ಈ ದೈತ್ಯ ಫೋನ್‌ ಬೆಲೆಯಲ್ಲಿ ಜಬರ್ದಸ್ತ್‌ ಇಳಿಕೆ; ನೀವು ವಾರೆ ವ್ಹಾ ಅಂತೀರಾ!

ಜನಪ್ರಿಯ ಮೊಬೈಲ್‌ ಬ್ರ್ಯಾಂಡ್‌ಗಳ ಪಟ್ಟಿಯಲ್ಲಿ ಒನ್‌ಪ್ಲಸ್‌ (OnePlus) ಕೂಡಾ ಮುಂದಿನ ಸಾಲಿನಲ್ಲಿ ಸ್ಥಾನ ಪಡೆದುಕೊಂಡಿದ್ದು, ಭಾರತೀಯ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ ಉತ್ತಮ ಬೇಡಿಕೆ ಪಡೆದುಕೊಂಡಿವೆ. ಸದ್ಯ ನೀವೇನಾದರೂ ನೂತನ ಒನ್‌ಪ್ಲಸ್‌ ಮೊಬೈಲ್‌ ಖರೀದಿಸಬೇಕು ಎಂದುಕೊಂಡಿದ್ದರೆ, ನಿಮಗೆ ಗುಡ್‌ನ್ಯೂಸ್‌ ಇಲ್ಲಿದೆ. ಒನ್‌ಪ್ಲಸ್‌ ಕಂಪನಿಯು ಅಮೆಜಾನ್‌ನಲ್ಲಿ ಒನ್‌ಪ್ಲಸ್‌ ಕಮ್ಯೂನಿಟಿ ಸೇಲ್‌ (OnePlus Community sale) ಶುರು ಮಾಡಿದ್ದು, OnePlus 12 ಫೋನ್‌ ಆಕರ್ಷಕ ಡಿಸ್ಕೌಂಟ್‌ ಪಡೆದಿದೆ.

ಹೌದು, ಅಮೆಜಾನ್‌ ತಾಣದಲ್ಲಿ ಇದೀಗ ಒನ್‌ಪ್ಲಸ್‌ ಕಮ್ಯೂನಿಟಿ ಸೇಲ್‌ (OnePlus Community sale) ಪ್ರಾರಂಭ ಆಗಿದೆ. ಈ ಮಾರಾಟದಲ್ಲಿ ಒನ್‌ಪ್ಲಸ್‌ 12 (OnePlus 12) ಫೋನ್‌ ಶೇ. 9% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 12GB RAM + 256GB ಸ್ಟೋರೇಜ್‌ ವೇರಿಯಂಟ್‌ 58,999ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದಲ್ಲದೇ ಇತರೆ ಬ್ಯಾಂಕ್‌ ಆಫರ್‌ ಸಹ ಪಡೆಯಬಹುದು.

ಒನ್‌ಪ್ಲಸ್‌ ಸಂಸ್ಥೆಯ ಈ ಫೋನ್‌ ಬೆಲೆಯಲ್ಲಿ ಜಬರ್ದಸ್ತ್‌ ಇಳಿಕೆ; ವಾರೆ ವ್ಹಾ ಅಂತೀರ

ಅಂದಹಾಗೆ ಒನ್‌ಪ್ಲಸ್‌ 12 ಮೊಬೈಲ್‌ ಸ್ನ್ಯಾಪ್‌ಡ್ರಾಗನ್ 8 ಜೆನ್‌ 3 SoC ಪ್ರೊಸೆಸರ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 5400mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಅಲ್ಲದೇ 12GB RAM + 256GB ಹಾಗೂ 16GB RAM + 512GB ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಅಮೆಜಾನ್‌ನಲ್ಲಿ ಒನ್‌ಪ್ಲಸ್‌ 12 ಅನ್ನು ಆಫರ್‌ನಲ್ಲಿ ಖರೀದಿಸಬಹುದು. ಹಾಗಾದರೇ ಒನ್‌ಪ್ಲಸ್‌ 12 ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆಯ ಮಾಹಿತಿ

ಒನ್‌ಪ್ಲಸ್‌ 12 ಮೊಬೈಲ್‌ 6.82 ಇಂಚಿನ QHD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1440 x 3168 ಪಿಕ್ಸೆಲ್‌ ಸ್ಕ್ರೀನ್‌ ಸೂಪರ್ ಕ್ರಿಸ್ಪ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು LTPO ProXDR 10-ಬಿಟ್ ಅನ್ನು ಒದಗಿಸಲಿದ್ದು, 120Hz ರಿಫ್ರೆಶ್ ರೇಟ್‌ ಬೆಂಬಲವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಹೊಂದಿದೆ.

ವೇಗದ ಪ್ರೊಸೆಸರ್‌ ಪವರ್‌

OnePlus 12 ಮೊಬೈಲ್‌ ಕ್ವಾಲ್ಕಾಮ್ ಸ್ನ್ಯಾಪ್‌ಡ್ರಾಗನ್ 8 ಜೆನ್‌ 3 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 14 ಓಎಸ್‌ ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM + 256GB ಹಾಗೂ 16GB RAM + 512GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಗಳನ್ನು ಪಡೆದಿದೆ.

ಕ್ಯಾಮೆರಾ ಸೆನ್ಸಾರ್‌ ಸೌಲಭ್ಯ

OnePlus 12 ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸಲ್‌ನ ಸೋನಿ LYT 808 ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 64 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ, ಮೂರನೇ ಕ್ಯಾಮೆರಾ 48 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್‌ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಹಾಗೂ ಇತರೆ

OnePlus 12 ಮೊಬೈಲ್‌ 5400mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 100W ಸೂಪರ್‌ವೂಕ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರಿಂದ ಸ್ಮಾರ್ಟ್‌ಫೋನ್‌ ಅನ್ನು ಕೇವಲ 25 ನಿಮಿಷಗಳಲ್ಲಿ 0 ರಿಂದ 100% ವರೆಗೆ ಚಾರ್ಜ್‌ ಮಾಡಬಹುದಾಗಿದೆ. ಹಾಗೆಯೇ ಈ ಮೊಬೈಲ್‌ 50W AIRVOOC ರಿವರ್ಸ್ ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಅಲ್ಲದೇ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್‌, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಇ-ಕಂಪಾಸ್‌ ಒಳಗೊಂಡಿದೆ.

Best Mobiles in India

English summary
OnePlus 12 Now Even More Affordable with Amazon website. check out offers, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+