Home
Deal of the day

WOW..! 19,000 ರಿಯಾಯಿತಿ.. OnePlus 12 ಬೆಲೆ ಭಾರೀ ಕುಸಿತ.. ಖರೀದಿ ಎಲ್ಲಿ?

ಹೊಸ ಒನ್‌ಪ್ಲಸ್‌ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಇದು ಸೂಕ್ತ ಸಮಯ. ಕಂಪನಿಯು ಈ ಸೊಗಸಾದ ಫೋನಿನ ಬೆಲೆಯನ್ನು ಭಾರೀ ಇಳಿಕೆ ಮಾಡಿದೆ. ಹೌದು, ನೀವು ಒನ್‌ಪ್ಲಸ್‌ 12 (OnePlus 12) ಮೊಬೈಲ್ ಖರೀದಿಸಲು ಬಯಸಿದರೆ, ನಿಮ್ಮ ಆಸೆಯನ್ನು ನನಸು ಮಾಡಿಕೊಳ್ಳಲು ಸೂಕ್ತ ಸಮಯ. ಈ ಒನ್‌ಪ್ಲಸ್‌ 12 ಫೋನ್ ಬರೋಬ್ಬರಿ 19,000 ರೂ.ಗಳ ವರೆಗೆ ರಿಯಾಯಿತಿಯೊಂದಿಗೆ ಮಾರಾಟವಾಗುತ್ತಿದೆ. ನೀವು ಬಿಡುಗಡೆ ಬೆಲೆಗಿಂತ ಅಗ್ಗದ ದರದಲ್ಲಿ ಕೊಳ್ಳಬಹುದು. ಈ ಫೋನಿನ ಮೂಲ ಬೆಲೆ, ಆಫರ್‌ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ.

ಒನ್‌ಪ್ಲಸ್‌ 12 ಮೊಬೈಲ್ ಸಿಲ್ಕಿ ಬ್ಲಾಕ್, ಫ್ಲೋವಿ ಎಮರಾಲ್ಡ್ ಮತ್ತು ಗ್ಲೇಶಿಯಲ್ ವೈಟ್ ಬಣ್ಣಗಳಲ್ಲಿ ಬರುತ್ತದೆ. ನೀವು ಈ ಫೋನನ್ನು ಎರಡು ಸ್ಟೋರೇಜ್‌ ಆಯ್ಕೆಯಲ್ಲಿ ಖರೀದಿಸಬಹುದು. ಈ ಫೋನಿನ ವಿಶೇಷತೆಗಳೆಂದರೆ, ಇದು 64 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಹೊಂದಿದೆ. ಈ ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 3 ಪ್ರೊಸೆಸರ್ ಜೊತೆಗೆ ಬರುತ್ತದೆ. ಈ ಫೋನ್ 6.82 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ. ಇದರೊಂದಿಗೆ 5400mAh ಬ್ಯಾಟರಿ, 100W ಚಾರ್ಜಿಂಗ್, 6GB RAM + 512GB ಸ್ಟೋರೇಜ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

WOW..! 19,000 ರಿಯಾಯಿತಿ.. OnePlus 12 ಬೆಲೆ ಭಾರೀ ಕುಸಿತ.. ಖರೀದಿ ಎಲ್ಲಿ?

ಒನ್‌ಪ್ಲಸ್ 12 ಹೊಸ ಬೆಲೆ, ಖರೀದಿ ಎಲ್ಲಿ?

ಒನ್‌ಪ್ಲಸ್ 12 ಫೋನಿನ 12GB RAM + 256GB ಸ್ಟೋರೇಜ್ ರೂಪಾಂತರವನ್ನು ಪ್ರಸ್ತುತ ಅಮೆಜಾನ್‌ನಲ್ಲಿ 51,998 ರೂ.ಗೆ ಪಟ್ಟಿ ಮಾಡಲಾಗಿದೆ. ಇದನ್ನು 64,999 ರೂ. ಬೆಲೆಗೆ ಬಿಡುಗಡೆ ಮಾಡಲಾಗಿತ್ತು. ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಪಾವತಿ ಮೇಲೆ ಹೆಚ್ಚುವರಿ 6,000 ರೂ. ರಿಯಾಯಿತಿ ನೀಡಲಾಗುವುದು. ಈ ಮೂಲಕ ಇದರ ಬೆಲೆ 45,998 ರೂ.ಗೆ ಇಳಿಕೆಯಾಗಲಿದೆ. ಇನ್ನು 16GB RAM + 512GB ಸ್ಟೋರೇಜ್ ಆಯ್ಕೆಯು 69,999 ರೂ.ಗೆ ಬಿಡುಗಡೆಯಾಗಿತ್ತು. ಪ್ರಸ್ತುತ ಇದು 56,998 ರೂ.ಗೆ ಲಭ್ಯವಿದೆ. ನೀವು ಐಸಿಐಸಿಐ ಬ್ಯಾಂಕ್ ಆಫರ್ ಬಳಸಿಕೊಂಡು 50,998 ರೂ.ಗೆ ಖರೀದಿಸಬಹುದು.

ಒನ್‌ಪ್ಲಸ್ 12 5G ವೈಶಿಷ್ಟ್ಯಗಳು

ಒನ್‌ಪ್ಲಸ್ 12 5G ಫೋನ್ 6.82 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು LTPO ಪ್ಲಸ್ ಕ್ವಾಡ್ ಡಿಸ್ಪ್ಲೇ ಆಗಿದೆ. ಈ ಸ್ಕ್ರೀನ್ 4500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ. ಇದಲ್ಲದೆ 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಹೊಂದಿದೆ. ಈ ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 3 ಆಕ್ಟಾ ಕೋರ್ ಪ್ರೊಸೆಸರ್‌ ಹೊಂದಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಆಕ್ಸಿಜನ್ ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಗ್ರಾಫಿಕ್ಸ್‌ಗಾಗಿ ಇದು, ಅಡ್ರಿನೊ 750 ಜಿಪಿಯು ಸಹ ಹೊಂದಿದೆ. ಗೇಮಿಂಗ್‌ಗಾಗಿ ಸುಧಾರಿತ ವೇಪರ್ ಕೂಲಿಂಗ್ ಸಿಸ್ಟಮ್ ಇದೆ.

WOW..! 19,000 ರಿಯಾಯಿತಿ.. OnePlus 12 ಬೆಲೆ ಭಾರೀ ಕುಸಿತ.. ಖರೀದಿ ಎಲ್ಲಿ?

ಒನ್‌ಪ್ಲಸ್ 12 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 48 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 16GB RAM + 512GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

ಒನ್‌ಪ್ಲಸ್ 12 ಮೊಬೈಲ್‌ 5400mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 100W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದರೊಂದಿಗೆ 50W ವೈರ್‌ಲೆಸ್ ಚಾರ್ಜಿಂಗ್‌ ಸಹ ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ಡ್ಯುಯಲ್ ಸಿಮ್, ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
OnePlus 12 smartphone Now Available With Up to Rs 19,000 Discount in India; Where to Buy?
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+