ದೀಪಾವಳಿಗೆ ಹೊಸ ಫೋನ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!..ಇಲ್ಲಿದೆ ಬೆಸ್ಟ್ ಆಫರ್!
ಅಮೆಜಾನ್ ಇ ಕಾಮರ್ಸ್ ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ನೆಚ್ಚಿನ ಪ್ಲಾಟ್‌ಫಾರ್ಮ್ ಆಗಿದೆ. ಅದರಲ್ಲಿಯೂ ಈಗ ದೀಪಾವಳಿ ಹಬ್ಬದ ಅಂಗವಾಗಿ ಅಮೆಜಾನ್ ಭರ್ಜರಿ ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದ್ದು, ಹೀಗಾಗಿ ಖರೀದಿದಾರರಿಗೆ ಅಮೆಜಾನ್ ಫೇವರಿಟ್ ಅಡ್ಡಾ ಎನಿಸಿದೆ. ಈ ಸೇಲ್‌ನಲ್ಲಿ ಹಲವು ಮೊಬೈಲ್‌ಗಳು ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದ್ದು, ಆ ಪೈಕಿ ಒನ್‌ಪ್ಲಸ್ ಸಂಸ್ಥೆಯು ಒನ್‌ಪ್ಲಸ್ 12R (OnePlus 12R) ಮೊಬೈಲ್ ಬೊಂಬಾಟ್ ಡಿಸ್ಕೌಂಟ್ ಪಡೆದುಕೊಂಡಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಒನ್‌ಪ್ಲಸ್ 12R (OnePlus 12R) ಸ್ಮಾರ್ಟ್‌ಫೋನ್ ಶೇ. 10% ನೇರ ಡಿಸ್ಕೌಂಟ್ ದರದಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 4 GB RAM + 128 GB ವೇರಿಯಂಟ್ 35,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಗ್ರಾಹಕರು ಲಭ್ಯ ಇರುವ ಬ್ಯಾಂಕ್ ಆಫರ್ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಪಡೆದುಕೊಂಡರೆ, ಈ ಫೋನ್ ಅನ್ನು ಮತ್ತಷ್ಟು ಡಿಸ್ಕೌಂಟ್ ದರದಲ್ಲಿ ಖರೀದಿಸಬಹುದು.

ಗ್ರಾಹಕರು ಒನ್‌ಪ್ಲಸ್ ಸಂಸ್ಥೆಯ ಈ ಫೋನ್ ಅನ್ನು ಐರನ್ ಗ್ರೇ ಮತ್ತು ಕೋಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು. ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 100W SuperVOOC ವೈರ್ಡ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಅಮೆಜಾನ್ ತಾಣದಲ್ಲಿ ಒನ್‌ಪ್ಲಸ್ 12R ಅನ್ನು ಆಫರ್‌ನಲ್ಲಿ ಖರೀದಿಸಬಹುದು ಹಾಗಾದರೇ ಒನ್‌ಪ್ಲಸ್ 12R ಫೋನ್ ಇತರೆ ಯಾವೆಲ್ಲಾ ಫೀಚರ್ಸ್ ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಒನ್‌ಪ್ಲಸ್ 12R ಮೊಬೈಲ್ - ಫೀಚರ್ಸ್
ಒನ್‌ಪ್ಲಸ್ 12R ಸ್ಮಾರ್ಟ್‌ಫೋನ್ 6.78 ಇಂಚಿನ BOE X1 OLED ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇಯು 1,264 x 2,780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 120Hz ProXDR ರಿಫ್ರೆಶ್ ರೇಟ್ ಜೊತೆಗೆ LTPO 4.0 ತಂತ್ರಜ್ಞಾನವನ್ನು ಹೊಂದಿದೆ. ಇದು ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ನೊಂದಿಗೆ ಲೇಯರ್ಡ್ ಆಗಿದೆ.
ಒನ್‌ಪ್ಲಸ್ 12R ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 ಜೆನ್ 2 SoC ಪ್ರೊಸೆಸರ್ ಪವರ್ ಅನ್ನು ಒಳಗೊಂಡಿದ್ದು, ಇದು ಆಂಡ್ರಾಯ್ಡ್ 14 ಓಎಸ್ ಆಧಾರಿತ OxygenOS 14 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8GB RAM + 128GB ಹಾಗೂ 16GB RAM + 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಗಳನ್ನು ಒಳಗೊಂಡಿದೆ.
ಒನ್‌ಪ್ಲಸ್ 12R ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ 112 ಡಿಗ್ರಿ ಫೀಲ್ಡ್-ಆಫ್-ವ್ಯೂ, ದ್ವಿತೀಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ತೃತೀಯ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಫೋನ್ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ.
ಒನ್‌ಪ್ಲಸ್ 12R ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದು 100W SuperVOOC ವೈರ್ಡ್ ಚಾರ್ಜಿಂಗ್ ಅನ್ನು ಸಪೋರ್ಟ್ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್ 5.3, 5G ಬೆಂಬಲ, ವೈ-ಫೈ 6E, ಬ್ಲೂಟೂತ್ 5.3, NFC, USB-C 3.2 ಜೆನ್ 2, ಜಿಪಿಎಸ್ ಅನ್ನು ಸಪೋರ್ಟ್ ಮಾಡಲಿದೆ.
ಇದಲ್ಲದೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್, ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಪ್ರಾಕ್ಸಿಮಿಟಿ ಸೆನ್ಸಾರ್, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಇ-ಕಾಪಾಸ್ ಒಳಗೊಂಡಿದೆ.ಗ್ರಾಹಕರು ಈ ಫೋನ್ ಅನ್ನು ಐರನ್ ಗ್ರೇ ಮತ್ತು ಕೋಲ್ ಬ್ಲೂ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು.


Click it and Unblock the Notifications








