ಬಿಗ್ ಆಫರ್! 6000mAh ಬ್ಯಾಟರಿ.. 50MP + 50MP ಕ್ಯಾಮೆರಾಗಳು.. ಕಡಿಮೆ ಬೆಲೆಗೆ OnePlus 13R ಸೇಲ್
ಒನ್‌ಪ್ಲಸ್ ತನ್ನ ಪ್ರಿಯರಿಗೆ ಒಂದೊಳ್ಳೆ ಸಿಹಿಸುದ್ದಿ ನೀಡಿದೆ. ಇತ್ತೀಚೆಗೆ ಬಿಡುಗಡೆಯಾದ ಹೊಸ ಒನ್‌ಪ್ಲಸ್ ಫೋನಿನ ಖರೀದಿ ಮೇಲೆ ಸಖತ್ ಆಫರ್ ಘೋಷಿಸಿದೆ. ಹೌದು, ಇಂದಿನಿಂದ (ಮಾರ್ಚ್ 4) ಮಾರ್ಚ್ 9 ರವರೆಗೆ ಒನ್‌ಪ್ಲಸ್ ರೆಡ್ ರಶ್ ಡೇಸ್ ಸೇಲ್ (OnePlus Red Rush Days Sale) ಆಯೋಜಿಸಲಾಗಿದೆ. ಈ ವಿಶೇಷ ಮಾರಾಟದಲ್ಲಿ ಒನ್‌ಪ್ಲಸ್ 13R (OnePlus 13R) ಮೊಬೈಲ್ 3,000 ರೂ.ಗಳ ಬ್ಯಾಂಕ್ ರಿಯಾಯಿತಿ ಲಭ್ಯವಿದೆ. ಜೊತೆಗೆ 4,000 ರೂ.ಗಳ ಎಕ್ಸ್‌ಚೇಂಜ್ ಬೋನಸ್ ಮತ್ತು 24 ತಿಂಗಳ ನೋ ಕಾಸ್ಟ್ ಸೌಲಭ್ಯ ನೀಡಲಾಗುತ್ತಿದೆ. ಈ ಒನ್‌ಪ್ಲಸ್ ಫೋನಿನ ಮೂಲ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.
ಒನ್‌ಪ್ಲಸ್ 13R ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಇದು 6.78 ಇಂಚಿನ ಡಿಸ್ಪ್ಲೇ ಹೊಂದಿದೆ. ಇದರೊಂದಿಗೆ 12GB RAM + 256GB ಸ್ಟೋರೇಜ್, 6000mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದು ಒನ್‌ಪ್ಲಸ್ ರೆಡ್ ರಶ್ ಡೇಸ್ ಸೇಲ್‌ನಲ್ಲಿ ಕಡಿಮೆ ಬೆಲೆಗೆ ಲಭ್ಯವಿದೆ.

ಒನ್‌ಪ್ಲಸ್ 13R ಹೊಸ ಬೆಲೆ ಮತ್ತು ರಿಯಾಯಿತಿ
ಒನ್‌ಪ್ಲಸ್ 13R ಫೋನ್ 12GB RAM + 256GB ಸ್ಟೋರೇಜ್ ಮತ್ತು 16GB RAM + 512GB ಸ್ಟೋರೇಜ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. 256GB ಸ್ಟೋರೇಜ್ ರೂಪಾಂತರದ ಬೆಲೆ 42,998 ರೂ. ಆಗಿದೆ. 512GB ಸ್ಟೋರೇಜ್ ಆಯ್ಕೆಯು 49,998 ರೂ.ಗೆ ಮಾರಾಟವಾಗುತ್ತಿದೆ. ಪ್ರಸ್ತುತ, ಒನ್‌ಪ್ಲಸ್ ರೆಡ್ ರಶ್ ಡೇಸ್ ಸೇಲ್‌ನಲ್ಲಿ (OnePlus Red Rush Days Sale) ಈ ಫೋನ್ ಖರೀದಿಸಿದರೆ 3,000 ರೂ. ತ್ವರಿತ ಬ್ಯಾಂಕ್ ರಿಯಾಯಿತಿ ಸಿಗುತ್ತದೆ.
ಫೋನಿನ 512GB ಸ್ಟೋರೇಜ್ ಆಯ್ಕೆಯ ಬೆಲೆಯನ್ನು 2,000 ರೂ. ಇಳಿಕೆ ಮಾಡಲಾಗಿದೆ. ಇದರೊಂದಿಗೆ 24 ತಿಂಗಳವರೆಗೆ ನೋ ಕಾಸ್ಟ್ ಇಎಂಐ ಮತ್ತು 4,000 ರೂಪಾಯಿಗಳ ಎಕ್ಸ್‌ಚೇಂಜ್ ಬೋನಸ್ ಸಹ ಪಡೆಯಬಹುದು. ಈ ಫೋನ್ ನೆಬ್ಯುಲಾ ನಾಯ್ರ್ ಮತ್ತು ಆಸ್ಟ್ರಲ್ ಟ್ರೈಲ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಒನ್‌ಪ್ಲಸ್ ವೆಬ್‌ಸೈಟ್ ಮತ್ತು ಅಮೆಜಾನ್ ಹೊರತುಪಡಿಸಿ, ಕ್ರೋಮಾ, ವಿಜಯ್ ಸೇಲ್ಸ್, ರಿಲಯನ್ಸ್ ಡಿಜಿಟಲ್ ಮತ್ತು ಇತರೆ ಅಂಗಡಿಗಳಲ್ಲಿಯೂ ಈ ಮೊಬೈಲ್ ಲಭ್ಯವಿರುತ್ತದೆ.
ಒನ್‌ಪ್ಲಸ್ 13R ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಒನ್‌ಪ್ಲಸ್ 13R ಮೊಬೈಲ್ 6.78 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ, 2780 × 1264 ಪಿಕ್ಸೆಲ್ ರೆಸಲ್ಯೂಶನ್ ಮತ್ತು 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಪಡೆದಿದೆ.
ಸ್ನಾಪ್‌ಡ್ರಾಗನ್ ಪ್ರೊಸೆಸರ್
ಒನ್‌ಪ್ಲಸ್ 13R ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಜೆನ್ 3 ಪ್ರೊಸೆಸರ್ ಹೊಂದಿದೆ. ಇದು ಗ್ರಾಫಿಕ್ಸ್‌ಗಾಗಿ, ಅಡ್ರಿನೊ 750 ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ ಆಕ್ಸಿಜನ್ ಓಎಸ್ 15.0 ಜೊತೆಗೆ ಕೆಲಸ ಮಾಡುತ್ತದೆ. ಈ ಸ್ಮಾರ್ಟ್‌ಫೋನ್ 12GB RAM ಮತ್ತು16GB RAM ಹೊಂದಿದೆ. ಜೊತೆಗೆ 256GB ಮತ್ತು 512GB ಸ್ಟೋರೇಜ್ ಆಯ್ಕೆ ಲಭ್ಯವಿದೆ.
ಟ್ರಿಪಲ್ ಕ್ಯಾಮೆರಾ ಸೆಟಪ್
ಒನ್‌ಪ್ಲಸ್ 13R ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಎಲ್ಇಡಿ ಫ್ಲಾಶ್‌ನೊಂದಿಗೆ ಬರುತ್ತದೆ. ಹಾಗೆಯೇ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಇದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.
ಬೊಂಬಾಟ್ ಬ್ಯಾಟರಿ ಬ್ಯಾಕಪ್
ಒನ್‌ಪ್ಲಸ್ 13R ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಒನ್‌ಪ್ಲಸ್ 13R ಸ್ಮಾರ್ಟ್‌ಫೋನ್ ಇನ್ ಡಿಸ್ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು ಇನ್‌ಫ್ರಾರೆಡ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಯುಎಸ್‌ಬಿ ಟೈಪ್ ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ಗಳು, 5G, ಡ್ಯುಯಲ್ 4G VoLTE, ವೈ-ಫೈ 7, ಬ್ಲೂಟೂತ್ 5.4 ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








