ಭಾರೀ ಕುಸಿತ! 4000 ರಿಯಾಯಿತಿ.. 30,000ಕ್ಕಿಂತ ಕಡಿಮೆ ಬೆಲೆಗೆ OnePlus ಫೋನ್ ಲಭ್ಯ.. ಯಾವುದು, ವಿಶೇಷತೆಗಳೇನು?
ಒನ್‌ಪ್ಲಸ್ ತನ್ನ ಒನ್‌ಪ್ಲಸ್ ನಾರ್ಡ್ 4 5G (OnePlus Nord 4 5G) ಸ್ಮಾರ್ಟ್‌ಫೋನ್ ಮೇಲೆ ಭಾರೀ ರಿಯಾಯಿತಿ ಘೋಷಿಸಿದೆ. ನೀವು ಪ್ರಸ್ತುತ, ಇ-ಕಾಮರ್ಸ್ ಸೈಟ್ ಅಮೆಜಾನ್‌ನಲ್ಲಿ ವಿಶೇಷ ಆಫರ್‌ಗಳೊಂದಿಗೆ ಖರೀದಿಸಬಹುದು. ಹೌದು, ಒನ್‌ಪ್ಲಸ್ ನಾರ್ಡ್ 4 5G ಫೋನಿನ ಬೆಲೆಯನ್ನು ಶೇ.18 ರಷ್ಟು ಇಳಿಕೆ ಮಾಡಲಾಗಿದೆ. ಜೊತೆಗೆ ಬ್ಯಾಂಕ್ ಆಫರ್, ಇಎಂಐ ಸೌಲಭ್ಯ ಮತ್ತು ಎಕ್ಸ್‌ಚೇಂಜ್ ಆಫರ್ ಮೇಲೆ ಭಾರೀ ಡಿಸ್ಕೌಂಟ್ ಸಹ ನೀಡಲಾಗುತ್ತಿದೆ. ಬನ್ನಿ, ಅಮೆಜಾನ್‌ನಲ್ಲಿ ಯಾವೆಲ್ಲಾ ಆಫರ್‌ಗಳು ಲಭ್ಯವಿದೆ, ಈ ಫೋನಿನ ಮೂಲ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಒನ್‌ಪ್ಲಸ್ ನಾರ್ಡ್ 4 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7+ ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಲಭ್ಯವಿದೆ. ಇದು 6.74 ಇಂಚಿನ ಡಿಸ್ಪ್ಲೇ ಹೊಂದಿದೆ. ಹಾಗೆಯೇ 5500mAh ಬ್ಯಾಟರಿ ಮತ್ತು 100W ವೇಗದ ಚಾರ್ಜಿಂಗ್ ಸಪೋರ್ಟ್ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 12GB RAM + 256GB ಸ್ಟೋರೇಜ್ ಸೇರಿದಂತೆ ಹಲವು ಅತ್ಯುತ್ತಮ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ನೀವು ಅಮೆಜಾನ್ ಮೂಲಕ ಈ ಫೋನನ್ನು ಬಿಡುಗಡೆ ಬೆಲೆಗಿಂತ ಕಡಿಮೆಗೆ ನಿಮ್ಮದಾಗಿಸಿಕೊಳ್ಳಬಹುದು.

ಒನ್‌ಪ್ಲಸ್ ನಾರ್ಡ್ 4 5G ಹೊಸ ಬೆಲೆ
ಒನ್‌ಪ್ಲಸ್ ನಾರ್ಡ್ 4 5G ಫೋನಿನ 8GB RAM + 256GB ಸ್ಟೋರೇಜ್ ರೂಪಾಂತರವನ್ನು 32,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್‌ನಲ್ಲಿ ರಿಯಾಯಿತಿಯೊಂದಿಗೆ 29,999 ರೂ. ಬೆಲೆಯಲ್ಲಿ ಈ ಮೊಬೈಲ್ ಮಾರಾಟ ಮಾಡಲಾಗುತ್ತಿದೆ. ಇದಲ್ಲದೆ, ಆಯ್ದ ಬ್ಯಾಂಕ್ ಕಾರ್ಡ್‌ಗಳ ಮೂಲಕ ಈ ಸ್ಮಾರ್ಟ್‌ಫೋನ್ ಖರೀದಿಸಿದರೆ, 4000 ರೂ.ಗಳ ವರೆಗೆ ರಿಯಾಯಿತಿ ನೀಡಲಾಗುತ್ತಿದೆ.
ಇದಲ್ಲದೆ, ಒನ್‌ಪ್ಲಸ್ ನಾರ್ಡ್ 4 5G ಫೋನಿನ 12GB + 256GB ಸ್ಟೋರೇಜ್ ರೂಪಾಂತರವನ್ನು 32,999 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಜೊತೆಗೆ ಎಕ್ಸ್‌ಚೇಂಜ್ ಆಫರ್ ಅಡಿಯಲ್ಲಿ 27,350 ರೂ.ಗಳ ವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಈ ಫೋನ್ ಓಯಸಿಸ್ ಗ್ರೀನ್, ಮರ್ಕ್ಯುರಿಯಲ್ ಸಿಲ್ವರ್ ಮತ್ತು ಅಬ್ಸಿಡಿಯನ್ ಬ್ಲಾಕ್ ಬಣ್ಣಗಳ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.
ಒನ್‌ಪ್ಲಸ್ ನಾರ್ಡ್ 4 ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಒನ್‌ಪ್ಲಸ್ ನಾರ್ಡ್ 4 5G ಸ್ಮಾರ್ಟ್‌ಫೋನ್ 6.74 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2,772 × 1,240 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಹಾಗೆಯೇ 120Hz ರಿಫ್ರೆಶ್ ದರ ಮತ್ತು 2,150 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಒನ್‌ಪ್ಲಸ್ ನಾರ್ಡ್ 4 5G ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಪ್ಲಸ್ ಜೆನ್ 3 ಪ್ರೊಸೆಸರ್ ಹೊಂದಿದೆ. ಈ ಪ್ರೊಸೆಸರ್ 4 ನ್ಯಾನೋಮೀಟರ್‌ಗಳ ಮೇಲೆ ತಯಾರಾಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ OxygenOS 14.0 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಒನ್‌ಪ್ಲಸ್ ಫೋನ್ 8GB + 12GB RAM, 128GB + 256GB ಸ್ಟೋರೇಜ್ ಆಯ್ಕೆಗಳಲ್ಲಿ ಲಭ್ಯವಿದೆ. ಈ ಫೋನ್ ವರ್ಚುವಲ್ RAM ವೈಶಿಷ್ಟ್ಯವನ್ನು ಸಹ ಹೊಂದಿದೆ.
ಕ್ಯಾಮೆರಾ ಸೆಟಪ್
ಒನ್‌ಪ್ಲಸ್ ನಾರ್ಡ್ 4 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು OIS ಮತ್ತು EIS ಬೆಂಬಲದೊಂದಿಗೆ ಬರುತ್ತದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಇದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒನ್‌ಪ್ಲಸ್ ನಾರ್ಡ್ 4 5G ಮೊಬೈಲ್ 5500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು, 100W ಸೂಪರ್‌ವೂಕ್ ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಮತ್ತು ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ ಸಿಮ್, 5G, 4G, ಬ್ಲೂಟೂತ್ 5.4, ವೈ-ಫೈ 6, ಅಲರ್ಟ್ ಸ್ಲೈಡರ್, ಯುಎಸ್‌ಬಿ ಟೈಪ್ ಸಿ 2.0, ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








