10,000 ಉಳಿತಾಯ! 16,999ಕ್ಕೆ OnePlus ಫೋನ್.. 37% ಡಿಸ್ಕೌಂಟ್.. ಈ ಅವಕಾಶ ಬಿಡಬೇಡಿ
ಒನ್‌ಪ್ಲಸ್ ಪ್ರಿಯರಿಗೆ ಎರಡು ಖುಷಿ ಸುದ್ದಿ ಇಲ್ಲಿದೆ. ಒಂದು.. ಬಹುನಿರೀಕ್ಷಿತ OnePlus 13 ಫೋನ್ ಶೀಘ್ರದಲ್ಲೇ ಭಾರತದಲ್ಲ ಬಿಡುಗಡೆಯಾಗಲಿದೆ. ಮತ್ತೊಂದು.. ಹೊಸ ಫೋನ್ ಬಿಡುಗಡೆಗೂ ಮೊದಲೇ, ಒನ್‌ಪ್ಲಸ್ ನಾರ್ಡ್ CE 3 5G (OnePlus Nord CE 3 5G) ಬೆಲೆ ಭಾರೀ ಇಳಿಕೆಯಾಗಿದೆ. ಪ್ರಸ್ತುತ, ಅಮೆಜಾನ್‌ನಲ್ಲಿ ಬರೋಬ್ಬರಿ 10,000 ರೂ.ಗಳ ರಿಯಾಯಿತಿ ಲಭ್ಯವಿದೆ. ಜೊತೆಗೆ, ಬ್ಯಾಂಕ್ ಡಿಸ್ಕೌಂಟ್ ಮತ್ತು ಎಕ್ಸ್‌ಚೇಂಜ್ ಆಫರ್ ಸಹ ನೀಡಲಾಗುತ್ತಿದೆ. ಬನ್ನಿ, ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಒನ್‌ಪ್ಲಸ್ ನಾರ್ಡ್ CE 3 5G ಫೋನನ್ನು ಕಳೆದ ವರ್ಷ ಜುಲೈನಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ಮೊಬೈಲ್‌ನಲ್ಲಿ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಇದೆ. ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 782G ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದೆ. ಫೋನಿನಲ್ಲಿ 120Hz ರಿಫ್ರೆಶ್ ದರದೊಂದಿಗೆ 6.7 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದರೊಂದಿಗೆ 5000mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಯಗಳನ್ನು ಒಳಗೊಂಡಿದೆ.

ಒನ್‌ಪ್ಲಸ್ ನಾರ್ಡ್ CE 3 5G ಹೊಸ ಬೆಲೆ ಮತ್ತು ಆಫರ್‌ಗಳು
ಕಂಪನಿಯು ಒನ್‌ಪ್ಲಸ್ ನಾರ್ಡ್ CE 3 5G ಫೋನಿನ 8GB RAM + 128GB ಸ್ಟೋರೇಜ್ ಆಯ್ಕೆಯ ಮೇಲೆ ರಿಯಾಯಿತಿ ಘೋಷಿಸಿದೆ. ಇದನ್ನು 26,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ ಅಮೆಜಾನ್‌ನಲ್ಲಿ 16,999 ರೂ.ಗೆ ಮಾರಾಟ ಮಾಡಲಾಗುತ್ತಿದೆ. ನೀವು 10,000 ರೂ.ಗಳನ್ನು ಉಳಿತಾಯ ಮಾಡಬಹುದು. ಮೊಬೈಲ್ ಆಕ್ವಾ ಸರ್ಜ್ ಮತ್ತು ಗ್ರೇ ಶಿಮ್ಮರ್ ಬಣ್ಣಗಳಲ್ಲಿ ಲಭ್ಯವಿದೆ. ಅಮೆಜಾನ್‌ನಲ್ಲಿ ಈ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು.
ಒನ್‌ಪ್ಲಸ್ ನಾರ್ಡ್ CE 3 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಒನ್‌ಪ್ಲಸ್ ನಾರ್ಡ್ CE 3 5G ಮೊಬೈಲ್ 6.7 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರ, 2412 x 1080 ಪಿಕ್ಸೆಲ್‌ಗಳ ರೆಸಲ್ಯೂಶನ್, 950 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ಕಂಪನಿಯು ಒನ್‌ಪ್ಲಸ್ ನಾರ್ಡ್ CE 3 5G ಸ್ಮಾರ್ಟ್‌ಫೋನ್ ಅನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 782G ಆಕ್ಟಾ ಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಇದು ಆಂಡ್ರಾಯ್ಡ್ 13.1 ಆಧಾರಿತ OxygenOS 13 ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಮೊಬೈಲ್ 256GB ಸ್ಟೋರೇಜ್ ಹೊಂದಿದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.
ಕ್ಯಾಮೆರಾ ಸೆಟಪ್
ಒನ್‌ಪ್ಲಸ್ ನಾರ್ಡ್ CE 3 5G ಫೋನ್ OIS (ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್) ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ ಪ್ರಾಥಮಿಕ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ, 8 ಮೆಗಾಪಿಕ್ಸೆಲ್ ಸೋನಿ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಕಂಪನಿಯು ಒನ್‌ಪ್ಲಸ್ ನಾರ್ಡ್ CE 3 5G ಫೋನಿನಲ್ಲಿ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ
ಇತರೆ ವೈಶಿಷ್ಟ್ಯಗಳು
ಒನ್‌ಪ್ಲಸ್ ನಾರ್ಡ್ CE 3 5G ಮೊಬೈಲ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ, ಬ್ಲೂಟೂತ್ 5.2, ಜಿಪಿಎಸ್, ಎ-ಜಿಪಿಎಸ್, ಎನ್‌ಎಫ್‌ಸಿ ಜೊತೆಗೆ ಯುಎಸ್‌ಬಿ ಪೋರ್ಟ್ ಸಿ ಹೊಂದಿದೆ.


Click it and Unblock the Notifications








