ಯುಗಾದಿ ಗಿಫ್ಟ್! 108MP ಕ್ಯಾಮೆರಾ ಹೊಂದಿರುವ ಫೋನಿಗೆ ಭಾರೀ ರಿಯಾಯಿತಿ.. 3,669 ಉಳಿತಾಯ.. ಎಷ್ಟಕ್ಕೆ ಸಿಗುತ್ತೆ?
ಯುಗಾದಿಗೆ ಇದಕ್ಕಿಂತ ಒಳ್ಳೆಯ ಗಿಫ್ಟ್ ಮತ್ತೊಂದಿಲ್ಲ. ನೀವು ಹೊಸ ಒನ್‌ಪ್ಲಸ್ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ ಇಂಥಾ ಅವಕಾಶ ಕಳೆದುಕೊಳ್ಳಬೇಡಿ. ಹೌದು, ಮೊಬೈಲ್ ಪ್ರಿಯರು ಮೆಚ್ಚಿದ ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G (OnePlus Nord CE 3 Lite 5G) ಬೆಲೆ ಮತ್ತಷ್ಟು ಇಳಿಕೆಯಾಗಿದೆ. ಈ ಫೋನಿನ ಖರೀದಿ ಮೇಲೆ ಬ್ಯಾಂಕ್ ಡಿಸ್ಕೌಂಟ್ ಮತ್ತು ಎಕ್ಸ್‌ಚೇಂಜ್ ಆಫರ್ ಸಹ ನೀಡಲಾಗುತ್ತಿದೆ. ನೀವು, ಬಿಡುಗಡೆ ಬೆಲೆಗಿಂತ ಅಗ್ಗವಾಗಿ ಈ ಸೊಗಸಾದ ಫೋನನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ಫೋನಿನ ಮೂಲ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.
ನೀವು 17,000 ರೂ. ಒಳಗಡೆ ಈ ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G ಮೊಬೈಲ್ ಖರೀದಿಸಬಹುದು. ಈ ಫೋನಿನ ವಿಶೇಷತೆಗಳೆಂದರೆ, ಇದು 108 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಮೊಬೈಲ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 695 5G ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನ್ 6.72 ಇಂಚಿನ ಡಿಸ್ಪ್ಲೇ ಹೊಂದಿದೆ. ಇದರೊಂದಿಗೆ 128GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 67W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G ವೈಶಿಷ್ಟ್ಯಗಳು
ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G ಮೊಬೈಲ್ 6.72 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2,400 x 1,080 ಪಿಕ್ಸೆಲ್ ರೆಸಲ್ಯೂಶನ್ ಬೆಂಬಳ ಮತ್ತು 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5G ಪ್ರೊಸೆಸರ್ ಹೊಂದಿದೆ. ಇದು ಗ್ರಾಫಿಕ್ಸ್‌ಗಾಗಿ, ಅಡ್ರಿನೊ 619 ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 13 ಆಧಾರಿತ ಒನ್‌ಪ್ಲಸ್‌ನ Oxygen ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನ್ 8GB RAM + 128GB ಸ್ಟೋರೇಜ್ ಮತ್ತು 8GB RAM + 256GB ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ನೀವು ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ಹೆಚ್ಚಿಸಬಹುದು.
ಒನ್‌ಪ್ಲಸ್ ನಾರ್ಡ್ CE 3 ಲೈಟ್ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಈ ಫೋನ್ ಸೆಲ್ಪಿ ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ. ಈ ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 67W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಸ್ಟೀರಿಯೋ ಸ್ಪೀಕರ್‌ಗಳು ಮತ್ತು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ.

ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G ಬೆಲೆ ಮತ್ತು ಆಫರ್‌ಗಳು
ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಫೋನನ್ನು 19,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಇದು 8GB RAM + 128GB ಸ್ಟೋರೇಜ್ ರೂಪಾಂತರದ ದರವಾಗಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ 16,330 ರೂ.ಗಳಿಗೆ ಮಾರಾಟ ಮಾಡಲಾಗುತ್ತಿದೆ. ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಪಾವತಿಸಿದರೆ, ಶೇ. 5 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ನೀವು ಸುಲಭ ಕಂತುಗಳಲ್ಲಿಯೂ ಈ ಫೋನ್ ಕೊಳ್ಳಬಹುದು. ಈ ಮೊಬೈಲ್ ಕಪ್ಪು ಮತ್ತು ನೀಲಿ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ನಿಮ್ಮ ಬಜೆಟ್ ಕಡಿಮೆ ಇದ್ದರೆ, ಈ ಒನ್‌ಪ್ಲಸ್ ಫೋನ್ ನಿಮಗೆ ಉತ್ತಮ ಆಯ್ಕೆಯಾಗಲಿದೆ.


Click it and Unblock the Notifications








