OnePlus: ಈ 5G ಫೋನ್ ಬೆಲೆ ಇಳಿಕೆ: 3,000 ಅಗ್ಗ.. 1,299 ರೂ.ನ ನೆಕ್‌ಬ್ಯಾಂಡ್ ಉಚಿತ!
ಒನ್‌ಪ್ಲಸ್ ಮೊಬೈಲ್ ಖರೀದಿಸಲು ಬಯಸುವವರಿಗೆ ಶುಭ ಸುದ್ದಿ ಇದೆ. ಪ್ರಸ್ತುತ, ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G (OnePlus Nord CE 4 Lite 5G) ರಿಯಾಯಿತಿ ಬೆಲೆಯಲ್ಲಿ ಲಭ್ಯವಿದೆ. ಈ ಒನ್‌ಪ್ಲಸ್ ಸ್ಮಾರ್ಟ್‌ಫೋನ್ ಅಮೇಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್-2024 ನಲ್ಲಿ (Amazon Great Indian Festival-2024) ಬಿಡುಗಡೆ ಬೆಲೆಗಿಂತ ಕಡಿಮೆಗೆ ಮಾರಾಟವಾಗುತ್ತಿದೆ. ಜೊತೆಗೆ, 1,299 ರೂ.ಗಳ ನೆಕ್‌ಬ್ಯಾಂಡ್ ಅನ್ನು ಉಚಿತವಾಗಿ ನೀಡಲಾಗುತ್ತಿದೆ. ಬ್ಯಾಂಕ್ ಡಿಸ್ಕೌಂಟ್, ಎಕ್ಸ್‌ಚೇಂಜ್ ಆಫರ್ ಮತ್ತು ಇಎಂಐನಂತಹ ಆಯ್ಕೆಗಳೂ ಲಭ್ಯವಿದೆ.
ಹೌದು, ಒನ್‌ಪ್ಲಸ್ ಪ್ರಿಯರಿಗೆ 'ನಾರ್ಡ್' ಸರಣಿಯ ಸ್ಮಾರ್ಟ್‌ಫೋನ್‌ಗಳು ಅಚ್ಚುಮೆಚ್ಚು. ಮತ್ತು ಹೆಚ್ಚು ಹಣವನ್ನು ಖರ್ಚು ಮಾಡಲು ಬಯಸದ ಜನರಿಗೆ ಉತ್ತಮ ಆಯ್ಕೆಯಾಗಿವೆ. ಈ ಸಾಲಿಗೆ ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಕೂಡ ಸೇರುತ್ತದೆ. ಇದು ಕಡಿಮೆ ಬೆಲೆಯಲ್ಲಿ ಆಕರ್ಷಕ ವಿನ್ಯಾಸ ಮತ್ತು ಉತ್ತಮ ಗುಣಮಟ್ಟದ ವೈಶಿಷ್ಟ್ಯಗಳನ್ನು ಹೊಂದಿದೆ. 19,999 ರೂ.ಗಳ ಈ ಫೋನನ್ನು ನೀವು, ಇನ್ನಷ್ಟು ಅಗ್ಗದ ಬೆಲೆಗೆ ಖರೀದಿಸಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಬೆಲೆ ಮತ್ತು ಆಫರ್‌ಗಳು
ಬಿಡುಗಡೆ ಬೆಲೆ = 19,999 ರೂ.
ಆಫರ್ ಬೆಲೆ = 16,999 ರೂ.
ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಅನ್ನು 8GB RAM + 128GB ಸ್ಟೋರೇಜ್ ಆಯ್ಕೆಯನ್ನು 19,999 ರೂ.ಗೆ ಬಿಡುಗಡೆ ಮಾಡಲಾಗಿದೆ. ಆಫರ್‌ನ ಅಡಿಯಲ್ಲಿ ನೀವು 3,000 ರೂ.ಗಳ ಕಡಿಮೆ ಬೆಲೆಗೆ ಖರೀದಿಸಬಹುದು. ಇದರೊಂದಿಗೆ ಈ ಫೋನ್ ಕೇವಲ 16,999 ರೂ.ಗಳಿಗೆ ಲಭ್ಯವಾಗಲಿದೆ. ಇದು ಕೂಪನ್ ರಿಯಾಯಿತಿಗಳು ಮತ್ತು ಬ್ಯಾಂಕ್ ಕಾರ್ಡ್ ರಿಯಾಯಿತಿ ಕೊಡುಗೆಗಳನ್ನು ಸಹ ಒಳಗೊಂಡಿದೆ.
ಶಾಪಿಂಗ್ ಸೈಟ್ ಅಮೇಜಾನ್‌ನಲ್ಲಿ ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಖರೀದಿ ಮೇಲೆ 3,000 ರೂ.ಗಳ ರಿಯಾಯಿತಿಯನ್ನು ನೀಡಲಾಗುತ್ತಿದೆ. ಈ ಒನ್‌ಪ್ಲಸ್ ಸ್ಮಾರ್ಟ್‌ಫೋನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ 2024 ನಲ್ಲಿ ಅಗ್ಗದ ದರದಲ್ಲಿ ಮಾರಾಟವಾಗಲಿದೆ. ಈ ಗೇಟ್ ಇಂಡಿಯನ್ ಫೆಸ್ಟಿವಲ್ ಸೇಲ್ ಸೆಪ್ಟೆಂಬರ್ 27 ರಿಂದ ಪ್ರಾರಂಭವಾಗುತ್ತದೆ. ನೀವು, ಸೆಪ್ಟೆಂಬರ್ 26 ರಿಂದ ಇದರ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುತ್ತದೆ.
ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ: ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇದು 1080 × 2400 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲಿಸುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 2100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಬೆಂಬಲಿಸುವ ಅಮೋಲೆಡ್ ಪ್ಯಾನೆಲ್‌ನಲ್ಲಿ ನಿರ್ಮಿಸಲಾಗಿದೆ.
ಪ್ರೊಸೆಸರ್: ಕಂಪನಿಯು ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಅನ್ನು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಇದು 6 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳ ಮೇಲೆ ನಿರ್ಮಿಸಲಾದ ಮೊಬೈಲ್ ಚಿಪ್‌ಸೆಟ್ ಆಗಿದೆ. ಈ ಸ್ಮಾರ್ಟ್‌ಫೋನನ್ನು ಆಂಡ್ರಾಯ್ಡ್ 14 ನಲ್ಲಿ ಬಿಡುಗಡೆ ಮಾಡಲಾಗಿದೆ. ಇದು OxygenOS 14.0 ನಲ್ಲಿ ಕಾರ್ಯನಿರ್ವಹಿಸುತ್ತದೆ.
ಸ್ಟೋರೇಜ್: ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಅನ್ನು 8GB RAM ನೊಂದಿಗೆ ಬಿಡುಗಡೆ ಮಾಡಲಾಗಿದೆ. ಈ ಫೋನ್ 8GB ವರ್ಚುವಲ್ RAM ಅನ್ನು ಹೊಂದಿದ್ದು, ಅದು ಭೌತಿಕ RAM ಜೊತೆಗೆ 16GB ಯ ಶಕ್ತಿಯನ್ನು ನೀಡುತ್ತದೆ. ಈ ಸ್ಮಾರ್ಟ್‌ಫೋನ್ 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಇದರೊಂದಿಗೆ 2TB MicroSD ಕಾರ್ಡ್ ಬೆಂಬಲವೂ ಲಭ್ಯವಿದೆ.
ಕ್ಯಾಮೆರಾ: ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಮೊಬೈಲ್ ಡ್ಯುಯಲ್ ಹಿಂಬದಿಯ ಕ್ಯಾಮೆರಾ ಸೆಟಪ್ ಹೊಂದಿದೆ. ಇದು OIS ಮತ್ತು EIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ LYT-600 ಮುಖ್ಯ ಕ್ಯಾಮೆರಾ ಹೊಂದಿದೆ. ಜೊತೆಗೆ, 2 ಮೆಗಾಪಿಕ್ಸೆಲ್ ಮೊನೊ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾವನ್ನು ಹೊಂದಿದೆ.
ಬ್ಯಾಟರಿ: ಕಂಪನಿಯು ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಅನ್ನು 5,500mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಿದೆ. ಇದು 80W ಸೂಪರ್‌ವೋಕ್ ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಹೊಂದಿದೆ. 52 ನಿಮಿಷಗಳಲ್ಲಿ 1% ರಿಂದ 100% ವರೆಗೆ ಫೋನನ್ನು ಸಂಪೂರ್ಣವಾಗಿ ಚಾರ್ಜ್ ಮಾಡಬಹುದು. ಈ ಒನ್‌ಪ್ಲಸ್ ಮೊಬೈಲ್ 5W ರಿವರ್ಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ.


Click it and Unblock the Notifications








