ಎಂಥಾ ಅವಕಾಶ! 17000ಕ್ಕಿಂತ ಕಡಿಮೆ ಬೆಲೆ.. ಈ OnePlus ಫೋನ್ ಬೆಲೆ ಕುಸಿತ.. ರಾಶಿ ಫೀಚರ್ಸ್
ಅಮೆಜಾನ್ ಬೊಂಬಾಟ್ ಆಫರ್ ಮೂಲಕ ಒನ್‌ಪ್ಲಸ್ ಪ್ರಿಯರ ಗಮನ ಸೆಳೆದಿದೆ. ಈ ಸೊಗಸಾದ ಒನ್‌ಪ್ಲಸ್ ಸ್ಮಾರ್ಟ್‌ಫೋನ್ ಖರೀದಿ ಮೇಲೆ ಭರ್ಜರಿ ರಿಯಾಯಿತಿ ಘೋಷಿಸಿದೆ. ಹೌದು, ಗ್ರಾಹಕರ ಮೆಚ್ಚುಗೆ ಪಡೆದ ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G (OnePlus Nord CE 4 Lite 5G) ಸ್ಮಾರ್ಟ್‌ಫೋನ್ ಅಮೆಜಾನ್‌ನಲ್ಲಿ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ಇದು ಸ್ಟೈಲಿಶ್ ಲುಕ್ ಜೊತೆಗೆ ಅತ್ಯುತ್ತಮ ವೈಶಿಷ್ಟ್ಯಗಳನ್ನು ಹೊಂದಿದೆ. ಬನ್ನಿ, ಈ ಫೋನಿನ ಮೂಲ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯೋಣ ಬನ್ನಿ.
ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಇದು 6.6 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 8GB + 256GB ಸ್ಟೋರೇಜ್, 5500mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಸ್ತುತ, ಈ ಒನ್‌ಪ್ಲಸ್ ಮೊಬೈಲ್ ಆಕರ್ಷಕ ರಿಯಾಯಿತಿ ಪಡೆದಿದೆ. ಇದನ್ನು ಖರೀದಿಸುವ ಗ್ರಾಹಕರು ಹೆಚ್ಚು ಹಣ ಉಳಿತಾಯ ಮಾಡಬಹುದು.

ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಹೊಸ ಬೆಲೆ
ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವನ್ನು 19,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಅಮೆಜಾನ್‌ನಲ್ಲಿ ಶೇ.14 ರಷ್ಟು ರಿಯಾಯಿತಿಯೊಂದಿಗೆ ಮಾರಾಟವಾಗುತ್ತಿದೆ. ಅಂದರೆ ನೀವು 17,998 ರೂ.ಗೆ ಈ ಫೋನ್ ಖರೀದಿಸಬಹುದು. ಆಯ್ದ ಕೆಲವು ಬ್ಯಾಂಕ್ ಕಾರ್ಡ್‌ಗಳ ಪಾವತಿ ಮೇಲೆ 1,000 ರೂ. ಬ್ಯಾಂಕ್ ಡಿಸ್ಕೌಂಟ್ ಸಿಗುತ್ತದೆ. ಇದರೊಂದಿಗೆ ಈ ಫೋನಿನ ಬೆಲೆ 16,998 ರೂ.ಗೆ ಇಳಿಕೆಯಾಗಲಿದೆ. ಅಮೆಜಾನ್ ಹೊರತಾಗಿ ಒನ್‌ಪ್ಲಸ್ ಅಧಿಕೃತ ವೆಬ್‌ಸೈಟ್ ಮೂಲಕವೂ ಈ ಫೋನನ್ನು ರಿಯಾಯಿತಿ ದರದಲ್ಲಿ ಖರೀದಿಸಬಹುದು.
ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಸ್ಮಾರ್ಟ್‌ಫೋನ್ 6.6 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1080 × 2400 ಪಿಕ್ಸೆಲ್ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 2100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.
ಸ್ನಾಪ್‌ಡ್ರಾಗನ್ ಪ್ರೊಸೆಸರ್
ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 695 ಪ್ರೊಸೆಸರ್ ಹೊಂದಿದೆ. ಇದನ್ನು 6 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಈ ಸ್ಮಾರ್ಟ್‌ಫೋನನ್ನು ಆಂಡ್ರಾಯ್ಡ್ 14 ಆಧಾರಿತ OxygenOS 14.0 ನಲ್ಲಿ ಕೆಲಸ ಮಾಡುತ್ತದೆ.
ಸ್ಟೋರೇಜ್ ಆಯ್ಕೆ
ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಮೊಬೈಲ್ 8GB RAM ಹೊಂದಿದೆ. ಜೊತೆಗೆ 8GB ವರ್ಚುವಲ್ RAM ಸಹ ಹೊಂದಿದೆ. ಈ ಫೋನಿನಲ್ಲಿ 256GB ಸ್ಟೋರೇಜ್ ಇದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್ ಮುಲಕ 2TB ವರೆಗೆ ಸ್ಟೋರೇಜ್ ಹೆಚ್ಚಿಸಬಹುದು.
ಡ್ಯುಯಲ್ ಕ್ಯಾಮೆರಾ ರಚನೆ
ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಮತ್ತು EIS ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಇದೆ. ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒನ್‌ಪ್ಲಸ್ ನಾರ್ಡ್ CE 4 ಲೈಟ್ 5G ಫೋನ್ 5500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಹಾಗೆಯೇ 5W ರಿವರ್ಸ್ ಚಾರ್ಜಿಂಗ್ ಸಹ ಲಭ್ಯವಿದೆ. ಈ ಫೋನ್ IP54 ರೇಟಿಂಗ್ ಪಡೆದಿದೆ. ಸ್ಟೀರಿಯೊ ಸ್ಪೀಕರ್‌ಗಳನ್ನು ಸಹ ಹೊಂದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್, ಡ್ಯುಯಲ್ ನ್ಯಾನೋ ಸಿಮ್ ಸ್ಲಾಟ್ ಮತ್ತು 3.5 ಎಂಎಂ ಆಡಿಯೊ ಜ್ಯಾಕ್ ಒಳಗೊಂಡಿದೆ.


Click it and Unblock the Notifications








