41,000 ಬಂಪರ್ ರಿಯಾಯಿತಿ! Oneplus Open ಬೆಲೆ ಭಾರೀ ಕುಸಿತ.. ಹೊಸ ಬೆಲೆ, ಆಫರ್ ಏನು?
ನೀವು ಫೋಲ್ಡ್ ಮೊಬೈಲ್ ಪ್ರಿಯರಾಗಿದ್ದರೆ, ನಿಮಗೆ ಒಳ್ಳೆಯ ಸುದ್ದಿ ಇದೆ. ಬರೋಬ್ಬರಿ 41 ಸಾವಿರ ರೂ. ರಿಯಾಯಿತಿಯೊಂದಿಗೆ ಒನ್‌ಪ್ಲಸ್ ಫೋನ್ ಖರೀದಿಸುವ ಸುವರ್ಣಾವಕಾಶ ಇದೆ. ಹೌದು, ಅಮೆಜಾನ್‌ನಲ್ಲಿ (Amazon Republic Day Sale 2025) ಒನ್‌ಪ್ಲಸ್ ಓಪನ್ (Oneplus Open) ಫೋಲ್ಡ್ ಫೋನಿನ ಭಾರೀ ಡಿಸ್ಕೌಂಟ್ ಲಭ್ಯವಿದೆ. ಕಂಪನಿಯು ಬ್ಯಾಂಕ್ ರಿಯಾಯಿತಿ ಮತ್ತು ಎಕ್ಸ್‌ಚೇಂಜ್ ಆಫರ್ ಸಹ ನೀಡುತ್ತಿದೆ. ಈ ಫೋನ್ ಖರೀದಿ ಮೇಲೆ ದೊಡ್ಡ ಉಳಿತಾಯ ಮಾಡಬಹುದು. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಒನ್‌ಪ್ಲಸ್ ಓಪನ್ ಫೋಲ್ಡ್ ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 48 ಮೆಗಾಪಿಕ್ಸೆಲ್, 64 ಮೆಗಾಪಿಕ್ಸೆಲ್ ಮತ್ತು 48 ಮೆಗಾಪಿಕ್ಸೆಲ್ ಕ್ಯಾಮೆರಾಗಳಿವೆ. ಇದು ಸ್ನಾಪ್‌ಡ್ರಾಗನ್ ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 7.82 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 16GB RAM + 512GB ಸ್ಟೋರೇಜ್, 4805mAh ಬ್ಯಾಟರಿ ಮತ್ತು 67W ವೇಗದ ಚಾರ್ಜಿಂಗ್ ಒಳಗೊಂಡಿದೆ. ಈ ಫೋನಿನ ಆಫರ್ ಬೆಲೆ ತಿಳಿಯಲು ಮುಂದೆ ಓದಿ.

ಒನ್‌ಪ್ಲಸ್ ಓಪನ್ ಹೊಸ ಬೆಲೆ
ಒನ್‌ಪ್ಲಸ್ ಓಪನ್ ಮೊಬೈಲ್ 16GB RAM + 512GB ಸ್ಟೋರೇಜ್ ರೂಪಾಂತರದಲ್ಲಿ ಮಾರಾಟವಾಗುತ್ತಿದೆ. ಕಂಪನಿಯು ಈ ಫೋಲ್ಡಬಲ್ ಫೋನನ್ನು 1,39,999 ರೂ.ಗೆ ಬಿಡುಗಡೆ ಮಾಡಿತ್ತು. ಪ್ರಸ್ತುತ, ಅಮೆಜಾನ್‌ನಲ್ಲಿ 99,998 ರೂ.ಗೆ ಲಭ್ಯವಿದೆ. ಜೊತೆಗೆ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ, ಶೇ.10 ರಷ್ಟು (1,000 ರೂ.) ತ್ವರಿತ ರಿಯಾಯಿತಿ ಪಡೆಯಬಹುದು. ಈ ಮೂಲಕ ಇದರ ಬೆಲೆ 98,998 ರೂ.ಗೆ ಇಳಿಕೆಯಾಗಲಿದೆ. ನೀವು, ಈ ಫೋನನ್ನು 41 ಸಾವಿರ ರೂ. ರಿಯಾಯಿತಿಯೊಂದಿಗೆ ಖರೀದಿಸಬಹುದು. ಇದು ಎಮರಾಲ್ಡ್ ಡಸ್ಕ್ ಬಣ್ಣದಲ್ಲಿ ಖರೀದಿಗೆ ಲಭ್ಯವಿದೆ.
ಒನ್‌ಪ್ಲಸ್ ಓಪನ್ ಫೀಚರ್ಸ್
ಡಿಸ್ಪ್ಲೇ ವಿವರ
ಒನ್‌ಪ್ಲಸ್ ಓಪನ್ ಸ್ಮಾರ್ಟ್‌ಫೋನ್ 7.82 ಇಂಚಿನ ಮುಖ್ಯ ಡಿಸ್ಪ್ಲೇ ಹೊಂದಿದೆ. ಇದು 2K ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 2,800 ನಿಟ್ಸ್ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಜೊತೆಗೆ 6.31 ಇಂಚಿನ ಆಂತರಿಕ ಡಿಸ್ಪ್ಲೇ ಹೊಂದಿದೆ. ಇದು 2K ರೆಸಲ್ಯೂಶನ್ ಮತ್ತು 120Hz ರಿಫ್ರೆಶ್ ದರ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಒನ್‌ಪ್ಲಸ್ ಓಪನ್ ಮೊಬೈಲ್ ಸ್ನಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್ 13 ಆಧಾರಿತ OxygenOS 13.2 ಜೊತೆಗೆ ಕೆಲಸ ಮಾಡುತ್ತದೆ. ಈ ಫೋನ್ 16GB RAM ಮತ್ತು 512GB ಸ್ಟೋರೇಜ್ ಆಯ್ಕೆ ಹೊಂದಿದೆ.
ಕ್ಯಾಮೆರಾ ಸೆಟಪ್
ಒನ್‌ಪ್ಲಸ್ ಓಪನ್ ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 48 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 64 ಮೆಗಾಪಿಕ್ಸೆಲ್ 3X ಟೆಲಿಫೋಟೋ ಜೂಮ್ ಕ್ಯಾಮೆರಾ ಮತ್ತು 48 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಕ್ಯಾಮೆರಾ ಲಭ್ಯವಿದೆ. ಜೊತೆಗೆ 32 ಮೆಗಾಪಿಕ್ಸೆಲ್ ಕವರ್ ಸ್ಕ್ರೀನ್ ಕ್ಯಾಮೆರಾ ಮತ್ತು 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒನ್‌ಪ್ಲಸ್ ಓಪನ್ ಸ್ಮಾರ್ಟ್‌ಫೋನ್ 4805mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 67W ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5G, ವೈ-ಫೈ 7, ಬ್ಲೂಟೂತ್ 5.3, ಯುಎಸ್‌ಬಿ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








