ಒಪ್ಪೋದ ಈ ಅಗ್ಗದ ಮೊಬೈಲ್‌ಗೆ ಬಿಗ್ ಡಿಸ್ಕೌಂಟ್; ಈ ಆಫರ್ ಬಿಡಬೇಡಿ!
ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಮೊಬೈಲ್‌ಗಳಿಗೆ ಅತ್ಯುತ್ತಮ ಆಫರ್ ನೀಡುವ ಮೂಲಕ ಆನ್‌ಲೈನ್ ಶಾಪಿಂಗ್ ಪ್ರಿಯರನ್ನು ಸೆಳೆಯುತ್ತ ಸಾಗಿದೆ. ಮುಖ್ಯವಾಗಿ ಈ ತಾಣದಲ್ಲಿ ಎಲ್ಲ ಮಾದರಿಯ ಫೋನ್‌ಗಳಿಗೂ ಕೂಡಾ ವಿಶೇಷ ಡಿಸ್ಕೌಂಟ್ ಲಭ್ಯ ಇರುತ್ತದೆ. ಇದೀಗ ಒಪ್ಪೋ ಸಂಸ್ಥೆಯ ಒಪ್ಪೋ A17 (OPPO A17) ಸ್ಮಾರ್ಟ್‌ಫೋನ್ ಸಹ ಸಖತ್ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದ್ದು, ಖರೀದಿದಾರರಿಗೆ ಸಂತಸ ಎನಿಸಿದೆ. ಇನ್ನು ಒಪ್ಪೋದ ಈ ಮೊಬೈಲ್ ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ.
ಹೌದು, ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್ ನಲ್ಲಿ ಒಪ್ಪೋ A17 ಮೊಬೈಲ್ ಶೇ. 33% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಫೋನಿನ 4 GB RAM + 64 GB ಸ್ಟೋರೇಜ್ ವೇರಿಯಂಟ್ ಈಗ ಆಫರ್‌ನಲ್ಲಿ 9,999ರೂ. ಬೆಲೆಯಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದರ ಜೊತೆಗೆ ಬ್ಯಾಂಕ್ ಕೊಡುಗೆ ಹಾಗೂ ನೋ ಕಾಸ್ಟ್ ಇಎಮ್‌ಐ ಸಹ ಲಭ್ಯ ಆಗಲಿದೆ.

ಅಂದಹಾಗೆ ಈ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಹಾಗೆಯೇ 4GB RAM ಮತ್ತು 64GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದಿದೆ. ಹಾಗಾದರೆ ಒಪ್ಪೋ A17 ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ A17 ಫೀಚರ್ಸ್ ಮಾಹಿತಿ
ಒಪ್ಪೋ A17 ಮೊಬೈಲ್ 6.56 ಇಂಚಿನ ಹೆಚ್‌ಡಿ ಪ್ಲಸ್ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಅನ್ನು ಪಡೆದಿದ್ದು, 100% DCI-P3 ಕಲರ್ ಗ್ಯಾಮಟ್ ರೇಂಜ್ ಅನ್ನು ಹೊಂದಿದೆ. ಇದು ವಾಟರ್ ಡ್ರಾಪ್ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಒಳಗೊಂಡಿದೆ.
ಒಪ್ಪೋ A17 ಫೋನ್ ಮೀಡಿಯಾ ಟೆಕ್ ಹಿಲಿಯೊ G35 ಪ್ರೊಸೆಸರ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಅನ್ನು ಹೊಂದಿದ್ದು, ಇದರೊಂದಿಗೆ 4GB RAM ಮತ್ತು 64GB ಆಂತರೀಕ ಸ್ಟೋರೇಜ್ ಅನ್ನು ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 256 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಸಹ ನೀಡಲಾಗಿದೆ.
ಒಪ್ಪೋ A17 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಹೊಂದಿದೆ. ಇದಲ್ಲದೆ ವೀಡಿಯೋ ಕರೆಗಳು ಹಾಗೂ ಸೆಲ್ಫಿಗಾಗಿ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಅಲ್ಲದೇ ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, 360 ಡಿಗ್ರಿ ಫಿಲ್ ಲೈಟ್, ಪೋರ್ಟ್ರೇಟ್ ರಿಟೌಚಿಂಗ್, HDR ಅನ್ನು ಆಯ್ಕೆಗಳನ್ನು ಪಡೆದಿದೆ.
ಒಪ್ಪೋ A17 ಮೊಬೈಲ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಅನ್ನು ಹೊಂದಿದೆ. ಇದು ಸೂಪರ್ ಪವರ್ ಸೇವಿಂಗ್ ಮೋಡ್ ಮತ್ತು ಸೂಪರ್ ನೈಟ್‌ಟೈಮ್ ಸ್ಟ್ಯಾಂಡ್‌ಬೈ ಅನ್ನು ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, USB-C ಅನ್ನು ಹೊಂದಿದೆ. ಇದಲ್ಲದೆ ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಆಕ್ಸಿಲೆರೋಮೀಟರ್ ಅನ್ನು ಕಾಣಬಹುದಾಗಿದೆ.


Click it and Unblock the Notifications








