Home
Deal of the day

ದೀಪಾವಳಿ ಆಫರ್! ಕಡಿಮೆ ಬೆಲೆಗೆ OPPO 5G ಫೋನ್; ಡಿಸ್ಕೌಂಟ್ ಎಷ್ಟು?

ದೇಶದಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇತ್ತ, ಹಬ್ಬದ ಪ್ರಯುಕ್ತ ಸ್ಮಾರ್ಟ್‌ಫೋನ್ ಕಂಪನಿಗಳು ತನ್ನ ಗ್ರಾಹಕರಿಗೆ ಹಬ್ಬದ ಉಡುಗೊರೆ ನೀಡುತ್ತಿವೆ. ಹೌದು, ಪ್ರಸಿದ್ಧ ಕಂಪನಿಗಳು ತನ್ನ ಫೋನ್‌ಗಳ ಬೆಲೆಯನ್ನು ಇಳಿಕೆ ಮಾಡಿವೆ. ಅದರಂತೆ, ಒಪ್ಪೋ (Oppo) ಕಂಪನಿಯು ಒಪ್ಪೋ A3 5G (OPPO A3 5G) ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದೆ. ಜೊತೆಗೆ ಬ್ಯಾಂಕ್ ಆಫರ್‌, ಇಎಂಐ ಆಯ್ಕೆ ಮತ್ತು ಎಕ್ಸ್‌ಚೇಂಜ್ ಆಫರ್‌ ಸಹ ಲಭ್ಯವಿದೆ. ಈ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಒಪ್ಪೋ ಆಗಸ್ಟ್‌ನಲ್ಲಿ ತನ್ನ ಬಜೆಟ್ ಸ್ಮಾರ್ಟ್‌ಫೋನ್ ಒಪ್ಪೋ A3 5G ಅನ್ನು ಬಿಡುಗಡೆ ಮಾಡಿತ್ತು. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದರಲ್ಲಿ 120Hz ರಿಫ್ರೆಶ್ ದರದೊಂದಿಗೆ 6.67 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಈ ಫೋನ್ 6GB RAM + 128GB ಸ್ಟೋರೇಜ್, 50 ಮೆಗಾಪಿಕ್ಸೆಲ್ ಕ್ಯಾಮೆರಾ, 5100mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ದೀಪಾವಳಿ ಆಫರ್! OPPO A3 5G ಬೆಲೆ ಭಾರೀ ಇಳಿಕೆ; ಡಿಸ್ಕೌಂಟ್ ಎಷ್ಟು?

ಒಪ್ಪೋ A3 5G ಹೊಸ ಬೆಲೆ ಮತ್ತು ಆಫರ್‌ಗಳು

6GB RAM + 128GB ಸ್ಟೋರೇಜ್ = 15,999 ರೂ.
ಆಫರ್‌ ಬೆಲೆ = 14,499 ರೂ.
ಬ್ಯಾಂಕ್ ಡಿಸ್ಕೌಂಟ್ = 1,500 ರೂ.

ಕಂಪನಿಯು ಒಪ್ಪೋ A3 5G ಫೋನನ್ನು 6GB RAM + 128GB ಸ್ಟೋರೇಜ್‌ನಲ್ಲಿ ಬಿಡುಗಡೆ ಮಾಡಿದೆ. ಇದರ ಬೆಲೆ 15,999 ರೂ. ಆಗಿದೆ. ಪ್ರಸ್ತುತ, ಕಂಪನಿಯು ಈ ಫೋನಿನ ಖರೀದಿಯ ಮೇಲೆ ಶೇ.10 ರಷ್ಟು ಕ್ಯಾಶ್‌ಬ್ಯಾಕ್‌ ನೀಡುತ್ತಿದೆ. ಅಂದರೆ ಎಚ್‌ಡಿಎಫ್‌ಸಿ, ಎಸ್‌ಬಿಐ, ಬ್ಯಾಂಕ್ ಆಫರ್‌ ಬರೋಡ, ಫೆಡರಲ್ ಮತ್ತು ಕೊಟಕ್ ಬ್ಯಾಂಕ್‌ಗಳ ಕಾರ್ಡ್‌ಗಳಲ್ಲಿ 1500 ರೂ. ಡಿಸ್ಕೌಂಟ್ ಲಭ್ಯವಿದೆ. ಈ ಆಫರ್‌ಗಳನ್ನು ಕಂಪನಿಯ ವೆಬ್‌ಸೈಟ್ ಮತ್ತು ಆಫ್‌ಲೈನ್ ಚಿಲ್ಲರೆ ಅಂಗಡಿಗಳಲ್ಲಿ ಪಡೆಯಬಹುದು.

ಒಪ್ಪೋ A3 5G ಫೋನಿನ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಒಪ್ಪೋ A3 5G ಮೊಬೈಲ್ 6.67 ಇಂಚಿನ ಎಚ್‌ಡಿ ಪ್ಲಸ್ ಪಂಚ್ ಹೋಲ್ ಡಿಸ್ಪ್ಲೇಯನ್ನು ಹೊಂದಿದೆ. ಇದು 1604 × 720 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಡಿಸ್ಪ್ಲೇಯು 120Hz ರಿಫ್ರೆಶ್ ದರ, 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 1000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 6 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಫೋನ್ ಆಂಡ್ರಾಯ್ಡ್‌ 14 ಆಧಾರಿತ ColorOS 14.0.1 ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಕಂಪನಿಯು ಈ ಫೋನಿನಲ್ಲಿ 36 ತಿಂಗಳ ಫ್ಲೂಯೆನ್ಸಿ ಪ್ರೊಟೆಕ್ಷನ್ ಕ್ಲೈಮ್ ಮಾಡುತ್ತಿದೆ. ಇದು 3 ವರ್ಷಗಳ ಕಾಲ ಹೊಸ ಫೋನಿನಂತೆ ಕಾರ್ಯನಿರ್ವಹಿಸುತ್ತದೆ.

ಸ್ಟೋರೇಜ್ ಆಯ್ಕೆ

ಈ ಒಪ್ಪೋ ಫೋನನ್ನು 6GB RAM ನೊಂದಿಗೆ ಬಿಡುಗಡೆ ಮಾಡಲಾಗಿದೆ. ಇದು 6GB ವರ್ಚುವಲ್ RAMನ ಸೌಲಭ್ಯವನ್ನು ಹೊಂದಿದೆ. ನೀವು 12GB RAM ಶಕ್ತಿಯನ್ನು ಬಳಸಿಕೊಳ್ಳಬಹುದು. ಇದು 128GB eMMC 5.1 ಸ್ಟೋರೇಜ್‌ ಸಹ ಒಳಗೊಂಡಿದೆ.

ಕ್ಯಾಮೆರಾ ಸೆಟಪ್

ಒಪ್ಪೋ A3 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಇದೆ. ಇದು ದ್ವಿತೀಯ ಎಐ ಲೆನ್ಸ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಸ್ಮಾರ್ಟ್‌ಫೋನ್ 5 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಕಂಪನಿಯು ಒಪ್ಪೋ A3 5G ಫೋನನ್ನು 5,100mAh ಬ್ಯಾಟರಿಯೊಂದಿಗೆ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ಸೂಪರ್‌ವೂಕ್‌ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

Best Mobiles in India

English summary
OPPO A3 5G Available With huge discount: know price, discount, Specifications and more details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+