ಆಫರ್‌ಗಳ ಸುರಿಮಳೆ! ಶೇ.16 ರಷ್ಟು ಬೆಲೆ ಇಳಿಕೆ.. 3,224 ರಿಯಾಯಿತಿ.. ಅದೂ OPPO 5G ಫೋನ್
ನೀವು 25 ಸಾವಿರ ರೂ. ಬಜೆಟ್‌ನಲ್ಲಿ ಒಪ್ಪೋ ಖರೀದಿಸಲು ಬಯಸಿದರೆ, ಇಲ್ಲಿದೆ ಉತ್ತಮ ಅವಕಾಶ. ಉತ್ತಮ ವೈಶಿಷ್ಟ್ಯಗಳನ್ನು ಹೊಂದಿರುವ ಈ ಒಪ್ಪೋ ಮೊಬೈಲ್ ಕಡಿಮೆ ದರದಲ್ಲಿ ಮಾರಾಟವಾಗುತ್ತಿದೆ. ಹೌದು, ಒಪ್ಪೋ F25 ಪ್ರೊ 5G (Oppo F25 Pro 5G) ಮೊಬೈಲ್ ಇದೀಗ, ಭಾರೀ ರಿಯಾಯಿಯಿಯೊಂದಿಗೆ ಲಭ್ಯವಿದೆ. ಜೊತೆಗೆ ಬ್ಯಾಂಕ್ ಡಿಸ್ಕೌಂಟ್ ಮತ್ತು ಇಎಂಐ ಸೌಲಭ್ಯ ನೀಡಲಾಗುತ್ತಿದೆ. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಒಪ್ಪೋ F25 ಪ್ರೊ 5G ಮೊಬೈಲ್ 8GB RAM + 128GB ಸ್ಟೋರೇಜ್ ಮತ್ತು 8GB RAM + 256GB ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ ವಿಶೇಷತೆಗಳನ್ನು ನೀಡುವುದಾದರೆ, ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 64 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು 5,000mAh ಬ್ಯಾಟರಿ ಬ್ಯಾಕಪ್ ಮತ್ತು 67W ಸೂಪರ್‌ವೂಕ್ ಚಾರ್ಜಿಂಗ್ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 6.7 ಇಂಚಿನ ಡಿಸ್ಪ್ಲೇ ಹೊಂದಿದೆ.

ಒಪ್ಪೋ F25 ಪ್ರೊ 5G ಆಫರ್ ವಿವರ
ಒಪ್ಪೋ F25 ಪ್ರೊ 5G ಫೋನಿನ 8GB RAM + 256GB ಸ್ಟೋರೇಜ್ ರೂಪಾಂತರವು ಕ್ರೋಮಾದಲ್ಲಿ ಕೇವಲ 25,994 ರೂ.ಗಳಿಗೆ ಲಭ್ಯವಿದೆ. ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಶೇ.16 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಮತ್ತು 2,000 ರೂ.ಗಳ ನೇರ ರಿಯಾಯಿತಿಯೊಂದಿಗೆ ಈ ಸ್ಮಾರ್ಟ್‌ಫೋನ್ ಲಭ್ಯವಿದೆ. ಇದಲ್ಲದೆ, 1,224 ರೂ.ಗಳ ಇಎಂಐ ಮತ್ತು ಎಕ್ಸ್‌ಚೇಂಜ್ ಆಫರ್ ಸಹ ಸಿಗುತ್ತದೆ. ಇದರೊಂದಿಗೆ ನೀವು ಈ ಫೋನನ್ನು ಮತ್ತಷ್ಟು ಅಗ್ಗವಾಗಿ ಖರೀದಿಸಬಹುದು.
ಒಪ್ಪೋ F25 ಪ್ರೊ 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಒಪ್ಪೋ F25 ಪ್ರೊ 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಎಚ್‌ಡಿ ಪ್ಲಸ್ ಅಮೋಲೆಡ್ ಕರ್ವ್ಡ್ ಡಿಸ್ಪ್ಲೇ ಹೊಂದಿದೆ. ಇದು 2,412 × 1,080 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಇದರ ಜೊತೆಗೆ 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಪಾಂಡಾ ಗ್ಲಾಸ್ ರಕ್ಷಣೆಯನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಒಪ್ಪೋ F25 ಪ್ರೊ 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 6 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಇದರ ಜೊತೆಗೆ ಗ್ರಾಫಿಕ್ಸ್‌ಗಾಗಿ, ಮಾಲಿ G68 MC4 ಜಿಪಿಯು ಸಪೋರ್ಟ್ ಇದೆ. ಈ ಮೊಬೈಲ್ 8GB + 128GB ಸ್ಟೋರೇಜ್ ಹಾಗೂ 8GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಬರುತ್ತದೆ.

ಕ್ಯಾಮೆರಾ ಸೆಟಪ್
ಒಪ್ಪೋ F25 ಪ್ರೊ 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ (ಮ್ಯಾಕ್ರೋ) ತೃತೀಯ ಕ್ಯಾಮೆರಾ ಹೊಂದಿದೆ. ಇದರ ಜೊತೆಗೆ ಸೆಲ್ಫಿ ಮತ್ತುವಿಡಿಯೋ ಕರೆ ಮಾಡಲು, 32 ಮೆಗಾಪಿಕ್ಸೆಲ್ ಸೋನಿ ಸೆಲ್ಫಿ ಶೂಟರ್ ಲಭ್ಯವಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒಪ್ಪೋ F25 ಪ್ರೊ 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 67W ಸೂಪರ್‌ವೂಕ್ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಇದು ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP65 ರೇಟಿಂಗ್ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ 5G SA/NSA, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.2, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








