5,670 ಅಗ್ಗ! 32MP ಸೆಲ್ಫಿ ಕ್ಯಾಮೆರಾ.. ಬಿಗ್ ಬ್ಯಾಟರಿ.. ಈ OPPO ಫೋನಿನ ಬೆಲೆ ಭಾರೀ ಇಳಿಕೆ
ಒಪ್ಪೋ ತನ್ನ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಕಂಪನಿಯು ಇತ್ತೀಚೆಗೆ, ಒಪ್ಪೋ ರೆನೋ 13 (OPPO Reno 13) ಮತ್ತು ಒಪ್ಪೋ ರೆನೋ 13 ಪ್ರೊ (OPPO Reno 13 Pro) ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ ಮೊಬೈಲ್‌ಗಳು ಭಾರತಕ್ಕೆ ಬರುವ ಮೊದಲೇ, ಒಪ್ಪೋ ರೆನೋ 12 5G (Oppo Reno 12 5G) ಫೋನಿನ ಬೆಲೆಯನ್ನು ಕಡಿಮೆ ಮಾಡಿದೆ. ಅಮೆಜಾನ್‌ನಲ್ಲಿ ಬರೋಬ್ಬರಿ 5,670 ರಿಯಾಯಿತಿ ಲಭ್ಯವಿದೆ. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಕಂಪನಿಯು ಜುಲೈನಲ್ಲಿ ಒಪ್ಪೋ ರೆನೋ 12 5G ಮತ್ತು ಒಪ್ಪೋ ರೆನೋ 12 ಪ್ರೊ 5G ಮೊಬೈಲ್‌ಗಳನ್ನು ಬಿಡುಗಡೆ ಮಾಡಿತ್ತು. ಈ ಪೈಕಿ ಒಪ್ಪೋ ರೆನೋ 12 5G ಫೋನನ್ನು ಬಿಡುಗಡೆ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ. ಈ ಮೊಬೈಲ್ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಫೋನಿನಲ್ಲಿ 6.7 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ, 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಒಪ್ಪೋ ರೆನೋ 12 5G ಬೆಲೆ ಮತ್ತು ಆಫರ್‌ಗಳು
ಒಪ್ಪೋ ರೆನೋ 12 5G ಫೋನನ್ನು 8GB RAM + 256GB ಸ್ಟೋರೇಜ್ ರೂಪಾಂತರದಲ್ಲಿ ಮಾರಾಟ ಮಾಡಲಾಗುತ್ತಿದೆ. ಇದನ್ನು 32,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಈ ಫೋನ್ ಅಮೆಜಾನ್‌ನಲ್ಲಿ 27,329 ರೂ.ಗೆ ಲಭ್ಯವಿದೆ. ನೀವು, 5670 ರೂ. ರಿಯಾಯಿತಿ ಪಡೆಯಬಹುದು. ಇದು ಆಸ್ಟ್ರೋ ಸಿಲ್ವರ್, ಸನ್‌ಸೆಟ್ ಪೀಚ್ ಮತ್ತು ಮ್ಯಾಟ್ ಬ್ರೌನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನ್ ಕಂಪನಿಯ ಸೈಟ್‌ನಲ್ಲಿ 32,999 ರೂ.ಗಳ ಬಿಡುಗಡೆ ಬೆಲೆಗೆ ಮಾರಾಟವಾಗುತ್ತಿದೆ.
ಈ ಸುದ್ದಿ ಓದಿದ್ದೀರಾ?: ದೊಡ್ಡ ಬದಲಾವಣೆ! PAN 2.0 ಯೋಜನೆಗೆ ಕೇಂದ್ರ ಒಪ್ಪಿಗೆ; ಇನ್ಮುಂದೆ QR ಕೋಡ್ ಅಗತ್ಯ!
ಒಪ್ಪೋ ರೆನೋ 12 5G ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ಒಪ್ಪೋ ರೆನೋ 12 5G ಮೊಬೈಲ್ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಓಎಲ್‌ಇಡಿ ಡಿಸ್ಪ್ಲೇ ಹೊಂದಿದೆ. ಇದು 2412 × 1080 ಪಿಕ್ಸೆಲ್ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಡಿಸ್ಪ್ಲೇಯು 120Hz ರಿಫ್ರೆಶ್ ದರ, 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆಯನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಕಂಪನಿಯು ಒಪ್ಪೋ ರೆನೋ 12 5G ಫೋನನ್ನು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಎನರ್ಜಿ ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಿದೆ. ಗ್ರಾಫಿಕ್ಸ್‌ಗಾಗಿ, ಮಾಲಿ G615 ಎಂಸಿ2 ಜಿಪಿಯು ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ColorOS 14.1 ಆಪರೇಟಿಂಗ್ ಸಿಸ್ಟಮ್‌ನೊಂದಿಗೆ ಕೆಲಸ ಮಾಡುತ್ತದೆ.
ಸ್ಟೋರೇಜ್ ಆಯ್ಕೆ
ಒಪ್ಪೋ ರೆನೋ 12 5G ಸ್ಮಾರ್ಟ್‌ಫೋನ್ 8GB RAM + 256GB ಇಂಟರ್ನಲ್ ಸ್ಟೊರೇಜ್ ಆಯ್ಕೆಯನ್ನು ಹೊಂದಿದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.

ಕ್ಯಾಮೆರಾ ಸೆಟಪ್
ಒಪ್ಪೋ ರೆನೋ 12 5G ಮೊಬೈಲ್ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಹೊಂದಿದೆ. ಜೊತೆಗೆ, 8 ಮೆಗಾಪಿಕ್ಸೆಲ್ ಸೋನಿ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒಪ್ಪೋ ರೆನೋ 12 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, ಈ ಮೊಬೈಲ್ 80W ಸೂಪರ್‌ವೂಕ್ ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿದೆ.
ಇತರೆ ವೈಶಿಷ್ಟ್ಯಗಳು
ಒಪ್ಪೋ ರೆನೋ 12 5G ಸ್ಮಾರ್ಟ್‌ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP65 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ ಸಿಮ್ 5G, 4G, ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೋ ಸ್ಪೀಕರ್‌ಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








