OPPO: ಬರೋಬ್ಬರಿ 17000 ಬೆಲೆ ಇಳಿಕೆ.. 50MP + 50MP + 50MP ಕ್ಯಾಮೆರಾಗಳು.. ಯಾವ ಫೋನ್? ಎಷ್ಟಕ್ಕೆ ಸಿಗುತ್ತೆ?
ಒಪ್ಪೋ ಮೂರು ಹೊಸ ಫೋನ್‌ಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಇವುಗಳನ್ನು Oppo Find X8 (ಒಪ್ಪೋ ಫೈಂಡ್ X8) ಸರಣಿಯ ಅಡಿಯಲ್ಲಿ ಪರಿಚಯಿಸುತ್ತಿದೆ. ಹೌದು, ಇದೇ ಏಪ್ರಿಲ್ 10 ರಂದು ಒಪ್ಪೋ ಫೈಂಡ್ X8s, ಒಪ್ಪೋ ಫೈಂಡ್ X8s ಪ್ಲಸ್ ಮತ್ತು ಒಪ್ಪೋ ಫೈಂಡ್ X8 ಅಲ್ಟ್ರಾ ಮೊಬೈಲ್‌ಗಳು ಅಧಿಕೃತವಾಗಿ ಲಾಂಚ್ ಆಗಲಿವೆ. ಈ ಫೋನ್‌ಗಳ ಬಿಡುಗಡೆಗೂ ಮೊದಲೇ, ಕಂಪನಿಯು ಒಪ್ಪೋ ರೆನೋ 12 ಪ್ರೊ 5G (Oppo Reno12 Pro 5G) ಫೋನಿನ ಬೆಲೆಯನ್ನು ಇಳಿಕೆ ಮಾಡಿದೆ. ಈ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಹೌದು, ಒಪ್ಪೋ ಮೂರು ಹೊಸ ಒಪ್ಪೋ ಫೈಂಡ್ X8 ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲಿದೆ. ಮೊಬೈಲ್ ಪ್ರಿಯರು ಈ ಮೊಬೈಲ್‌ಗಳ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ವಿಶೇಷವೆಂದರೆ, ಈಗಾಗಲೇ ಭಾರತದಲ್ಲಿ OPPO Find X8 ಮತ್ತು OPPO Find X8 Pro ಫೋನ್‌ಗಳು ಬಿಡುಗಡೆಯಾಗಿವೆ. OPPO Find X8 ಫೋನ್ 65,999 ರೂ. ಮತ್ತು OPPO Find X8 Pro ಮೊಬೈಲ್ 99,999 ರೂ.ಗೆ ಲಭ್ಯವಿದೆ. ಇದೀಗ, ಒಪ್ಪೋ ರೆನೋ 12 ಪ್ರೊ 5G ಫೋನಿನ ಖರೀದಿ ಮೇಲೆ ಭಾರೀ ರಿಯಾಯಿತಿ ಘೋಷಿಸಿದೆ.

ಶೇ.31 ರಷ್ಟು ನೇರ ರಿಯಾಯಿತಿ
ಒಪ್ಪೋದ ಮತ್ತೊಂದು ಪ್ರಮುಖ ಸ್ಮಾರ್ಟ್‌ಫೋನ್ ಸರಣಿಯಾದ ರೆನೋ ಸರಣಿಯ ಅಡಿಯಲ್ಲಿ ಒಪ್ಪೋ ರೆನೋ 12 ಪ್ರೊ 5G ಅನ್ನು ಬಿಡುಗಡೆ ಮಾಡಲಾಗಿದೆ. ಇದು ಪ್ರಸ್ತುತ ಭಾರೀ ರಿಯಾಯಿತಿಯಲ್ಲಿ ಖರೀದಿಗೆ ಲಭ್ಯವಿದೆ. ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ ಒಪ್ಪೋ ರೆನೋ 12 ಪ್ರೊ 5G ಮೊಬೈಲ್ ಶೇ.31 ರಷ್ಟು ನೇರ ರಿಯಾಯಿತಿಯೊಂದಿಗೆ ಮಾರಾಟವಾಗುತ್ತಿದೆ. ಇದನ್ನು 53,999 ರೂ. ಬೆಲೆಗೆ ಬಿಡುಗಡೆ ಮಾಡಲಾಗಿತ್ತು. ನೀವು ಈ ಫೋನನ್ನು ಬಿಡುಗಡೆ ಬೆಲೆಗಿಂತ ಅಗ್ಗದ ದರದಲ್ಲಿ, ಅಂದರೆ ಕೇವಲ 36,999 ರೂ.ಗೆ ಖರೀದಿಸಬಹುದು.
ಒಪ್ಪೋ ರೆನೋ 12 ಪ್ರೊ 5G ವೈಶಿಷ್ಟ್ಯಗಳು
ಡಿಸ್ಲ್ಪೇ ವಿವರ
ಒಪ್ಪೋ ರೆನೋ 12 ಪ್ರೊ 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಎಚ್‌ಡಿ ಪ್ಲಸ್ ಕ್ವಾಡ್ ಕರ್ವ್ಡ್ ಅಮೋಲೆಡ್ ಡಿಸ್ಲ್ಪೇ ಹೊಂದಿದೆ. ಇದು 120Hz ರಿಫ್ರೆಶ್ ದರದೊಂದಿಗೆ ಬರುತ್ತದೆ. ಇದರೊಂದಿಗೆ 94ppi ಪಿಕ್ಸೆಲ್ ಸಾಂದ್ರತೆ, 20:9 ಅನುಪಾತ, HDR10+ ಬೆಂಬಲ ಮತ್ತು 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಫೋನಿನ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 2 ರಕ್ಷಣೆಯನ್ನು ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಒಪ್ಪೋ ರೆನೋ 12 ಪ್ರೊ 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಎನರ್ಜಿ ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಆಧಾರದ ಮೇಲೆ ನಿರ್ಮಿಸಲಾಗಿದೆ. ಇದು ಗ್ರಾಫಿಕ್ಸ್‌ಗಾಗಿ ಆರ್ಮ್ ಮಾಲಿ G615 ಜಿಪಿಯು ಸಹ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 14 ಆಧಾರಿತ ColorOS 14.1 ಓಎಸ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಇದು 12GB RAM ಮತ್ತು 512GB ಆಂತರಿಕ ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ಅನ್ನು ವಿಸ್ತರಿಸಬಹುದು.

ಕ್ಯಾಮೆರಾ ಸೆಟಪ್
ಒಪ್ಪೋ ರೆನೋ 12 ಪ್ರೊ 5G ಫೋನಿನಲ್ಲಿ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅಳವಡಿಸಲಾಗಿದೆ. ಈ ಮೊಬೈಲ್ OIS (ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್) ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಹೊಂದಿದೆ. ಇದರೊಂದಿಗೆ ಎರಡನೇ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಪೋಟ್ರೇಟ್ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾವು 8 ಮೆಗಾಪಿಕ್ಸೆಲ್ ಸೋನಿ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್‌ನೊಂದಿಗೆ ಬರುತ್ತದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನ್ 50 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ. ಇದು ಆಟೋಫೋಕಸ್ ಮತ್ತು ಪೋಟ್ರೇಟ್ ಮೋಡ್ ಎರಡನ್ನೂ ಬೆಂಬಲಿಸುತ್ತದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಒಪ್ಪೋ ರೆನೋ 12 ಪ್ರೊ 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 180W SuperVOOC ವೇಗದ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.4, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








