ಜಸ್ಟ್ 7,749 ರೂ.! ಈ POCO 5G ಫೋನಿನ ಬೆಲೆ ಕುಸಿತ.. 4,250 ಉಳಿತಾಯ.. ಮಸ್ತ್ ಫೀಚರ್ಸ್
ಫ್ಲಿಪ್‌ಕಾರ್ಟ್ ಸದಾ ಒಂದಿಲ್ಲೊಂದು ಆಫರ್‌ಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿದೆ. ಇದೀಗ, ಅಗ್ಗದ ಬೆಲೆಯಲ್ಲಿ ಹೊಸ ಫೋನ್ ಖರೀದಿಸುವವರಿಗೆ ಫ್ಲಿಪ್‌ಕಾರ್ಟ್ ಗುಡ್ ನ್ಯೂಸ್ ನೀಡಿದೆ. ಹೌದು, ಪೊಕೋ M6 5G (POCO M6 5G) ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ರಿಯಾಯಿತಿ ದರದಲ್ಲಿ ಲಭ್ಯವಿದೆ. ಈ ಪೊಕೋ M6 5G ಮೊಬೈಲ್ ಖರೀದಿಯ ಮೇಲೆ ಶೇ.29 ರಷ್ಟು ಆಫರ್ ನೀಡಲಾಗುತ್ತಿದೆ. ಜೊತೆಗೆ ಬ್ಯಾಂಕ್ ಆಫರ್, ಇಎಂಐ ಸೌಲಭ್ಯ ಮತ್ತು ಕ್ಯಾಶ್‌ಬ್ಯಾಕ್ ಸಹ ಲಭ್ಯವಿದೆ. ಬನ್ನಿ, ಈ ಫೋನಿನ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.
ಪೊಕೋ M6 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು 6.74 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತಗೆ 8GB RAM + 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್ ಸೇರಿದಂತೆ ವಿವಿಧ ಅತ್ಯುತ್ತಮ ವೈಶಿಷ್ಟ್ಯಗಳೊಂದಿಗೆ ಬಿಡುಗಡೆ ಮಾಡಲಾಗಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ ಈ ಮೊಬೈಲ್ ಅಗ್ಗದ ಬೆಲೆಗೆ ಮಾರಾಟವಾಗುತ್ತಿದೆ. ಈ ಫೋನಿನ ಖರೀದಿ ಮೇಲೆ ಹೆಚ್ಚು ಹಣ ಉಳಿತಾಯ ಮಾಡಬಹುದು.

ಪೊಕೋ M6 5G ಬೆಲೆ ಮತ್ತು ಆಫರ್‌ಗಳು
ಪೊಕೋ M6 5G ಫೋನಿನ 4GB RAM + 64GB ಸ್ಟೋರೇಜ್ ರೂಪಾಂತರವು ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ಶೇ.29 ರಷ್ಟು ರಿಯಾಯಿತಿಯೊಂದಿಗೆ ಮಾರಾಟ ಮಾಡಲಾಗುತ್ತಿದೆ. ಅಂದರೆ, ನೀವು 8,499 ರೂ. ಬೆಲೆಗೆ ಖರೀದಿಸಬಹುದು. ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಈ ಫೋನ್ ಖರೀದಿಸಿದರೆ, ಹೆಚ್ಚುವರಿಯಾಗಿ 750 ರೂ.ಗಳ ರಿಯಾಯಿತಿ ಕೂಡ ಸಿಗುತ್ತದೆ. ಈ ಮೂಲಕ ನೀವು, ಈ ಫೋನನ್ನು ಕೇವಲ 7,749 ರೂ. ಬೆಲೆಗೆ ಕೊಳ್ಳಬಹುದು.
ಪೊಕೋ M6 5G ಫೋನಿನ ವೈಶಿಷ್ಟ್ಯಗಳು
ದೊಡ್ಡ ಡಿಸ್ಪೇ
ಪೊಕೋ M6 5G ಮೊಬೈಲ್ 90Hz ರಿಫ್ರೆಶ್ ದರದೊಂದಿದೆ 6.74 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಸಾಮರ್ಥ್ಯದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಹೊಂದಿದೆ.
ಶಕ್ತಿಶಾಲಿ ಪ್ರೊಸೆಸರ್
ಪೊಕೋ M6 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಶನ್ 6100+ ಪ್ರೊಸೆಸರ್ ಹೊಂದಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 13 ಆಧಾರಿತ MIUI 14 ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ ಈ ಫೋನ್, ಆರ್ಮ್ ಮಾಲಿ G57 MC2 ಜಿಪಿಯು ಸಹ ಹೊಂದಿದೆ. ಈ ಫೋನ್ 8GB RAM + 256GB ಸ್ಟೋರೇಜ್ ಆಯ್ಕೆ ಹೊಂದಿದೆ. ಇದು RAM ಹೆಚ್ಚಿಸಲು ಟರ್ಬೊ ಬೆಂಬಲ ಸಹ ಹೊಂದಿದೆ. ನೀವು ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ವಿಸ್ತರಿಸಬಹುದು.

ಡ್ಯುಯಲ್ ಕ್ಯಾಮೆರಾ ಸೆಟಪ್
ಪೊಕೋ M6 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು ಎಐ ಕ್ಯಾಮೆರಾ ಇದೆ. ಈ ಫೋನ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 5 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಅದ್ಭುತ ಬ್ಯಾಟರಿ ಬ್ಯಾಕಪ್
ಪೊಕೋ M6 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಪೊಕೋ M6 5G ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ ಸಿಮ್ 5G, 4G, ಬ್ಲೂಟೂತ್, ವೈ-ಫೈ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.


Click it and Unblock the Notifications








