ಜಸ್ಟ್ 7,999 ರೂ.! 50MP ಕ್ಯಾಮೆರಾ.. 5000mAh ಬ್ಯಾಟರಿ.. ಅಗ್ಗದ ಬೆಲೆಗೆ POCO 5G ಫೋನ್
ಫ್ಲಿಪ್‌ಕಾರ್ಟ್ ತನ್ನ ಗ್ರಾಹಕರಿಗೆ ದೊಡ್ಡ ಆಫರ್ ನೀಡುತ್ತಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್ ಬಿಗ್ ಬಚಾತ್ ಸೇಲ್ (Flipkart Big Bachat Days sale) ನಡೆಯುತ್ತಿದೆ. ಈ ವಿಶೇಷ ಮಾರಾಟದಲ್ಲಿ ಹಲವು ಫೋನ್‌ಗಳ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಿಸಿದೆ. ಅದರಂತೆ, ಪೊಕೋ M6 5G (POCO M6 5G) ಮೊಬೈಲ್ ಖರೀದಿಯ ಮೇಲೆ ಶೇ.29 ರಷ್ಟು ರಿಯಾಯಿತಿ ನೀಡುತ್ತದೆ. ಜೊತೆಗೆ ಬ್ಯಾಂಕ್ ಆಫರ್, ನೋ ಕಾಸ್ಟ್ ಇಎಂಐ ಮತ್ತು ಕ್ಯಾಶ್‌ಬ್ಯಾಕ್ ಸಹ ಲಭ್ಯವಿದೆ. ಬನ್ನಿ, ಈ ಫೋನಿನ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.
ಪೊಕೋ M6 5G ಮೊಬೈಲ್ 6.74 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಶನ್ 6100+ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 8GB RAM + 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 18W ವೇಗದ ಚಾರ್ಜಿಂಗ್ ಒಳಗೊಂಡಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ ಈ ಮೊಬೈಲ್ ಅಗ್ಗದ ಬೆಲೆಗೆ ಮಾರಾಟವಾಗುತ್ತಿದೆ. ನೀವು, ಈ ಫೋನಿನ ಖರೀದಿ ಮೇಲೆ 3500 ರೂ. ಉಳಿತಾಯ ಮಾಡಬಹುದು. ಈ ಫೋನಿನ ಹೊಸ ಬೆಲೆ ತಿಳಿಯಲು ಮುಂದೆ ಓದಿ.

ಪೊಕೋ M6 5G ಫೋನಿನ ವೈಶಿಷ್ಟ್ಯಗಳು
ಡಿಸ್ಪೇ ಹೇಗಿದೆ
ಪೊಕೋ M6 5G ಸ್ಮಾರ್ಟ್‌ಫೋನ್ 6.74 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 90Hz ರಿಫ್ರೆಶ್ ದರ ಮತ್ತು 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಹೊಂದಿದೆ.
ಮೀಡಿಯಾಟೆಕ್ ಪ್ರೊಸೆಸರ್
ಪೊಕೋ M6 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಶನ್ 6100+ ಪ್ರೊಸೆಸರ್ ಹೊಂದಿದೆ. ಇದು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾದ ಆಕ್ಟಾಕೋರ್ ಪ್ರೊಸೆಸರ್ ಆಗಿದೆ. ಈ ಫೋನ್ ಗ್ರಾಫಿಕ್ಸ್‌ಗಾಗಿ, ಆರ್ಮ್ ಮಾಲಿ G57 MC2 ಜಿಪಿಯು ಸಹ ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್ 13 ಆಧಾರಿತ MIUI 14 ಓಎಸ್‌ನಲ್ಲಿ ಕೆಲಸ ಮಾಡುತ್ತದೆ.
ಸ್ಟೋರೇಜ್ ಆಯ್ಕೆ
ಪೊಕೋ M6 5G ಫೋನ್ 8GB RAM + 256GB ಸ್ಟೋರೇಜ್ ಆಯ್ಕೆ ಹೊಂದಿದೆ. ಇದು RAM ಹೆಚ್ಚಿಸಲು ಟರ್ಬೊ ಬೆಂಬಲ ಸಹ ಹೊಂದಿದೆ. ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ಹೆಚ್ಚಿಸಬಹುದು.
ಎರಡು ಬೊಂಬಾಟ್ ಕ್ಯಾಮೆರಾಗಳು
ಪೊಕೋ M6 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಎಐ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 5 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್
ಪೊಕೋ M6 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಪೊಕೋ M6 5G ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ ಸಿಮ್ 5G, 4G, ಬ್ಲೂಟೂತ್, ವೈ-ಫೈ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಪೊಕೋ M6 5G ಬೆಲೆ ಮತ್ತು ಆಫರ್‌ಗಳು
ಪೊಕೋ M6 5G ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್‌ನ ವಿಶೇಷ ಮಾರಾಟದಲ್ಲಿ ಶೇ.29 ರಷ್ಟು ರಿಯಾಯಿತಿ ಪಡೆದಿದೆ. ಈ ಫೋನಿನ 4GB RAM + 64GB ಸ್ಟೋರೇಜ್ ಬೆಲೆ 8,499 ರೂ. ಆಗಿದೆ. ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿ ಈ ಫೋನ್ ಖರೀದಿಸಿದರೆ, 500 ರೂ. ರಿಯಾಯಿತಿ ಸಿಗುತ್ತದೆ. ಜೊತೆಗೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಸಹ ಲಭ್ಯವಿದೆ. ಡಿಸ್ಕೌಂಟ್ ಬಳಿಕ ನೀವು, ಈ ಫೋನನ್ನು 7,999 ರೂ.ಗೆ ಖರೀದಿಸಬಹುದು.


Click it and Unblock the Notifications








