ಸಸ್ತಾ ಬೆಲೆ! 50MP ಸೋನಿ ಕ್ಯಾಮೆರಾ.. 5110mAh ಬ್ಯಾಟರಿ.. ಹೊಸ POCO ಫೋನಿಗೆ ಬಂಪರ್ ಆಫರ್
ಪೊಕೊ ಬಜೆಟ್ ಬೆಲೆಯ ಫೋನ್‌ಗಳ ಮೂಲಕ ಸದ್ದು ಮಾಡುತ್ತಿದೆ. ಆಗಾಗ್ಗೆ ಈ ಫೋನ್‌ಗಳ ಮೇಲೆ ರಿಯಾಯಿತಿ ನೀಡುವ ಮೂಲಕ ಗ್ರಾಹಕರನ್ನು ಸೆಳೆಯುತ್ತಿದೆ. ಅದರಂತೆ, ಪೊಕೊ M7 ಪ್ರೊ 5G (POCO M7 Pro 5G) ಫೋನಿನ ಮೇಲೆ ಬೊಂಬಾಟ್ ಆಫರ್ ಘೋಷಿಸಿದೆ. ಹೌದು, ಫ್ಲಿಪ್‌ಕಾರ್ಟ್‌ನಲ್ಲಿ ಈ ಫೋನ್ ಶೇ.26 ರಷ್ಟು ರಿಯಾಯಿತಿ ಪಡೆದಿದೆ. ನೀವು 14 ಸಾವಿರ ರೂ. ಬಜೆಟ್‌ನಲ್ಲಿ ಹೊಸ ಫೋನ್ ಖರೀದಿಸಲು ಬಯಸಿದರೆ, ಇದು ಉತ್ತಮ ಆಯ್ಕೆಯಾಗಿದೆ. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಪೊಕೊ M7 ಪ್ರೊ ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗಲಿದೆ. ಇದು ಹಲವು ಎಐ (AI) ವೈಶಿಷ್ಟ್ಯಗಳನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಲಭ್ಯವಿದೆ. ಇದು 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 5110mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಈ ಫೋನಿನ ಆಫರ್ ತಿಳಿಯಲು ಮುಂದೆ ಓದಿ.

ಪೊಕೊ M7 ಪ್ರೊ ಬೆಲೆ ಮತ್ತು ಆಫರ್‌ಗಳು
ಪೊಕೊ M7 ಪ್ರೊ ಫೋನಿನ 6GB + 128GB ಸ್ಟೋರೇಜ್ ರೂಪಾಂತರವನ್ನು 14,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಇನ್ನು 8GB + 256GB ಸ್ಟೋರೇಜ್ ರೂಪಾಂತರದ ಬೆಲೆ 16,999 ರೂ. ಆಗಿದೆ. ಪ್ರಸ್ತುತ 6GB RAM ಮತ್ತು 128GB ಸ್ಟೋರೇಜ್ ಆಯ್ಕೆಯು ಫ್ಲಿಪ್‌ಕಾರ್ಟ್‌ನಲ್ಲಿ ಶೇ.26 ರಷ್ಟು ರಿಯಾಯಿತಿಯೊಂದಿಗೆ ಮಾರಾಟವಾಗುತ್ತಿದೆ. ನೀವು 13,999 ರೂ. ಬೆಲೆಗೆ ಖರೀದಿಸಬಹುದು.
ಆಯ್ದ ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಈ ಫೋನ್ ಖರೀದಿಸಿದರೆ, 750 ರೂ.ಗಳ ರಿಯಾಯಿತಿ ಪಡೆಯಬಹುದು. ಇದರೊಂದಿಗೆ ಈ ಪೋಕೊ ಫೋನಿನ ಬೆಲೆ 13,249 ರೂ.ಗೆ ಇಳಿಕೆಯಾಗಲಿದೆ. ಈ ಮೊಬೈಲ್ ಲೂನಾರ್ ಡಸ್ಟ್, ಲ್ಯಾವೆಂಡರ್ ಫ್ರಾಸ್ಟ್ ಮತ್ತು ಆಲಿವ್ ಟ್ವಿಲೈಟ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಈ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು.
ಪೊಕೊ M7 ಪ್ರೊ ವೈಶಿಷ್ಟ್ಯಗಳು
ದೊಡ್ಡ ಡಿಸ್ಪ್ಲೇ
ಪೊಕೊ M7 ಪ್ರೊ ಸ್ಮಾರ್ಟ್‌ಫೋನ್ 6.67 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ, 1080 × 2400 ಪಿಕ್ಸೆಲ್ ರೆಸಲ್ಯೂಶನ್ ಮತ್ತು 2100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆ ಹೊಂದಿದೆ.
ಮೀಡಿಯಾಟೆಕ್ ಪ್ರೊಸೆಸರ್
ಕಂಪನಿಯು ಪೊಕೊ M7 ಪ್ರೊ ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 7025 ಅಲ್ಟ್ರಾ ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ಹೈಪರ್ ಓಎಸ್‌ನಲ್ಲಿ ಕೆಲಸ ನಿರ್ವಹಿಸುತ್ತದೆ. ಈ ಮೊಬೈಲ್ 16GB RAM ಹೊಂದಿದೆ. ಇದು 128GB ಮತ್ತು 256GB ಸ್ಟೋರೇಜ್ ಆಯ್ಕೆ ಹೊಂದಿದೆ.
50MP ಸೋನಿ ಕ್ಯಾಮೆರಾ
ಪೊಕೊ M7 ಪ್ರೊ ಫೋನ್ 50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಹೊಂದಿದೆ. ಹಾಗೆಯೇ, ಎಲ್‌ಇಡಿ ಫ್ಲಾಷ್‌ನೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 20 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ದೊಡ್ಡ ಬ್ಯಾಟರಿ
ಪೊಕೊ M7 ಪ್ರೊ ಸ್ಮಾರ್ಟ್‌ಫೋನ್ 5110mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ಪೊಕೊ M7 ಪ್ರೊ ಮೊಬೈಲ್ ಸ್ಪ್ಲಾಶ್ ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಇದು ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಸಹ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








