Home
Deal of the day

ಕೇವಲ 16,999 ರೂ.! 5G ಫೋನ್.. 512GB ಸ್ಟೋರೇಜ್.. ಖರೀದಿ ಎಲ್ಲಿ?

ಪ್ರಸಿದ್ಧ ಆನ್‌ಲೈನ್ ಶಾಪಿಂಗ್ ಸೆಟ್ ಫ್ಲಿಪ್‌ಕಾರ್ಟ್‌ ತನ್ನ ಗ್ರಾಹಕರಿಗೆ ಭರ್ಜರಿ ಆಫರ್‌ ನೀಡುತ್ತಿದೆ. ಈಗಾಗಲೇ, ಅಕ್ಟೋಬರ್ 21 ರಂದು ಫ್ಲಿಪ್‌ಕಾರ್ಟ್‌ ಬಿಗ್ ದೀಪಾವಳಿ ಸೇಲ್ (Flipkart Big Diwali Sale 2024) ಶುರುವಾಗಿತ್ತು. ಇದರಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಭಾರೀ ರಿಯಾಯಿತಿಯೊಂದಿಗೆ ಮಾರಾಟ ಮಾಡಲಾಗಿದೆ. ತನ್ನ ಗ್ರಾಹಕರಿಗೆ ಎಸ್‌ಬಿಐ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳ ಮೇಲೆ ಶೇ.10ರಷ್ಟು ಡಿಸ್ಕೌಂಟ್ ನೀಡಲಾಗಿದೆ. ಅದರಂತೆ, ಈ ಫ್ಲಿಪ್‌ಕಾರ್ಟ್ ವಿಶೇಷ ಮಾರಾಟದಲ್ಲಿ ಪೊಕೊ X6 5G (Poco X6 5G) ಅನ್ನು ಭರ್ಜರಿ ರಿಯಾಯಿತಿಯೊಂದಿಗೆ ಖರೀದಿಸುವ ಅವಕಾಶ ನೀಡಲಾಗಿದೆ.

ಕಂಪನಿಯು ಪೊಕೊ X6 5G ಫೋನನ್ನು ಜನವರಿಯಲ್ಲಿ ಮಾರುಕಟ್ಟೆಗೆ ಪರಿಚಯಿಸಿತು. ಪ್ರಸ್ತುತ, ಪೊಕೊ X6 5G ಮೊಬೈಲ್‌ 8GB RAM + 256GB ಸ್ಟೋರೇಜ್ ವೇರಿಯಂಟ್, 12GB RAM + 256GB ಸ್ಟೋರೇಜ್ ಮತ್ತು 12GB RAM + 512GB ಸ್ಟೋರೇಜ್ ರೂಪಾಂತರಗಳಲ್ಲಿ ಲಭ್ಯವಿದೆ. ಫೋನಿನ 8GB RAM ರೂಪಾಂತರದ 21,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಇದನ್ನು ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ 16,999 ರೂ.ಗೆ ಖರೀದಿಸಬಹುದು.

ಕೇವಲ 16,999 ರೂ.! 5G ಫೋನ್.. 512GB ಸ್ಟೋರೇಜ್.. ಖರೀದಿ ಎಲ್ಲಿ?

ಫೋನಿನ 12GB RAM + 256GB ಸ್ಟೋರೇಜ್ ರೂಪಾಂತರವನ್ನು 17,999 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇನ್ನೂ ಟಾಪ್ ವೇರಿಯಂಟ್ 12GB RAM + 512GB ಸ್ಟೋರೇಜ್ ರೂಪಾಂತರದ ಬೆಲೆ 18,999 ರೂ. ಇದೆ. ಇದಲ್ಲದೇ, ಫ್ಲಿಪ್‌ಕಾರ್ಟ್‌ನ ದೀಪಾವಳಿ ಸೇಲ್ ಅಂಗವಾಗಿ, ಎಸ್‌ಬಿಐ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳೊಂದಿಗೆ ಖರೀದಿಸಿದರೆ, ನೀವು ಶೇ.10 ರಷ್ಟು ರಿಯಾಯಿತಿಯನ್ನು ಪಡೆಯಬಹುದು. ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ ಎಲ್ಲಾ ಆಫರ್‌ಗಳನ್ನು ಪಡೆಯಬಹುದು.

ಪೊಕೊ X6 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ಪೊಕೊ X6 5G ಮೊಬೈಲ್ 6.67 ಇಂಚಿನ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರ, 1800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್, 240Hz ಟಚ್ ಸ್ಯಾಂಪ್ಲಿಂಗ್ ದರದ ಬೆಂಬಲ ಪಡೆದಿದೆ. ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆಯನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ಪೊಕೊ 5G ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 7S ಜೆನ್ 2 ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ HyperOS ನಲ್ಲಿ ಕೆಲಸ ಮಾಡುತ್ತದೆ. ಈ ಫೋನ್ ಮೂರು ಆಂಡ್ರಾಯ್ಡ್ ನವೀಕರಣಗಳನ್ನು ಮತ್ತು ನಾಲ್ಕು ವರ್ಷಗಳ ಭದ್ರತಾ ನವೀಕರಣಗಳನ್ನು ಪಡೆಯಲಿದೆ ಎಂದು ಕಂಪನಿ ಹೇಳಿದೆ.

ಈ ಸುದ್ದಿ ಓದಿದ್ದೀರಾ?: Samsung: ದೀಪಾವಳಿ ಧಮಾಕಾ! 9,000 ಬೆಲೆ ಇಳಿಕೆ.. 15% ಡಿಸ್ಕೌಂಟ್.. ಯಾವ ಫೋನ್?

ಕ್ಯಾಮೆರಾ ಸೆಟಪ್

ಪೊಕೊ X6 5G ಸ್ಮಾರ್ಟ್‌ಫೋನ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್‌ನೊಂದಿಗೆ (OIS) 64 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಕ್ಯಾಮೆರಾ, 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಈ ಫೋನ್ 5100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್‌ ಮಾಡಲು, ಫೋನಿನಲ್ಲಿ 67W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ಪೊಕೊ X6 5G ಮೊಬೈಲ್ ಡಾಲ್ಬಿ ಅಟ್ಮಾಸ್ ಬೆಂಬಲದೊಂದಿಗೆ ಡ್ಯುಯಲ್ ಸ್ಟೀರಿಯೋ ಸ್ಪೀಕರ್‌ಗಳನ್ನು ಹೊಂದಿದೆ. ಭದ್ರತೆಗಾಗಿ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಲಭ್ಯವಿದೆ. ಧೂಳು ಮತ್ತು ಸ್ಪ್ಲಾಶ್ ನಿರೋಧಕ IP54 ರೇಟಿಂಗ್‌ ಪಡೆದಿದೆ. ಜೊತೆಗೆ ಬ್ಲೂಟೂತ್ 5.2, ವೈಫೈ 5 ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best Mobiles in India

English summary
poco x6 5g smartphone gets huge price drop on flipkart big diwali sale 2024: know full details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+