ಜಸ್ಟ್ 10,999 ರೂ.! 108MP ಕ್ಯಾಮೆರಾ.. 5000mAh ಬ್ಯಾಟರಿ.. 5000 ಉಳಿತಾಯ; ಯಾವ ಫೋನ್?
ಪೊಕೊ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಭಾರೀ ಬೇಡಿಕೆಯಿದೆ. ಅಗ್ಗದ ಬಜೆಟ್ ಸೇರಿದಂತೆ ವಿಭಿನ್ನ ಶ್ರೇಣಿಯ ಅನೇಕ ಫೋನ್‌ಗಳು ಲಭ್ಯವಿದೆ. ಕಂಪನಿಯು ಕಡಿಮೆ ಬೆಲೆಗೆ ಅತ್ಯುತ್ತಮ ವೈಶಿಷ್ಟ್ಯಗಳೊಂದಿಗೆ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುತ್ತಿದೆ. ಈ ಮೂಲಕ ಭಾರತದಲ್ಲಿ ಬೇಡಿಕೆಯಿರುವ ಕಂಪನಿಗಳ ಸಾಲಿಗೆ ಪೊಕೊ ಕೂಡ ಸೇರಿಕೊಂಡಿದೆ. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ ಪೊಕೊ X6 ನಿಯೋ 5G (POCO X6 Neo 5G) ಸ್ಮಾರ್ಟ್‌ಫೋನ್ ರಿಯಾಯಿತಿ ಬೆಲೆಯಲ್ಲಿ ಲಭ್ಯವಿದೆ. ನೀವು 5,000 ರೂ.ಗಳ ರಿಯಾಯಿತಿ ದರದಲ್ಲಿ ಈ ಫೋನನ್ನು ಖರೀದಿಸಬಹುದು.
ಪೊಕೊ X6 ನಿಯೋ 5G ಫೋನ್ ಕಳೆದ ವರ್ಷ ಮಾರ್ಚ್‌ನಲ್ಲಿ ಭಾರತದಲ್ಲಿ ಬಿಡುಗಡೆಯಾಗಿತ್ತು. ಅಮೆಜಾನ್‌ನಲ್ಲಿ ಈ ಫೋನಿನ ಖರೀದಿ ಮೇಲೆ ಶೇ.40 ರಷ್ಟು ರಿಯಾಯಿತಿ ಲಭ್ಯವಿದೆ. ಈ ಮೊಬೈಲ್ 108 ಮೆಗಾಪಿಕ್ಸೆಲ್ ಮುಖ್ಯ ಮತ್ತು 16 ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಜೊತೆಗೆ 6.67 ಇಂಚಿನ ಡಿಸ್ಪ್ಲೇ, 128GB ಸ್ಟೋರೇಜ್ ಮತ್ತು 5000mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ನೀವು ಆಸ್ಟ್ರಲ್ ಬ್ಲ್ಯಾಕ್, ಹರೈಸನ್ ಬ್ಲೂ ಮತ್ತು ಆರೆಂಜ್ ಬಣ್ಣದಲ್ಲಿ ಖರೀದಿಸಬಹುದು.

ಪೊಕೊ X6 ನಿಯೋ 5G ಹೊಸ ಬೆಲೆ ಮತ್ತು ಆಫರ್
ಪೊಕೊ X6 ನಿಯೋ 5G ಮೊಬೈಲ್ ಎರಡು ಸ್ಟೋರೇಜ್ ಆಯ್ಕೆ ಹೊಂದಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ರೂಪಾಂತರವು 15,999 ರೂ. ಮತ್ತು 12GB RAM + 256GB ಸ್ಟೋರೇಜ್ ವೇರಿಯಂಟ್ 17,999 ರೂ.ಗೆ ಬಿಡುಗಡೆಯಾಗಿತ್ತು. ಪ್ರಸ್ತುತ, ಫ್ಲಿಪ್‌ಕಾರ್ಟ್‌ನಲ್ಲಿ ಈ ಫೋನಿನ ಖರೀದಿ ಮೇಲೆ ಭಾರೀ ರಿಯಾಯಿತಿ ನೀಡಲಾಗುತ್ತಿದೆ.
ಪೊಕೊ X6 ನಿಯೋ 5G ಪೋನಿನ 8GB RAM ರೂಪಾಂತರವು 11,999 ರೂ.ಗೆ ಮಾರಾಟವಾಗುತ್ತಿದೆ. ಅಂದರೆ ಬಿಡುಗಡೆ ಬೆಲೆಗಿಂತ 4,000 ರೂ. ಕಡಿಮೆಗೆ ಲಭ್ಯವಿದೆ. ಇದಲ್ಲದೆ, ಆಯ್ದ ಬ್ಯಾಂಕ್ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೇಲೆ 1,000 ರೂ. ಹೆಚ್ಚುವರಿ ರಿಯಾಯಿತಿ ಸಿಗುತ್ತದೆ. ನೀವು ಕೇವಲ 10,999 ರೂ.ಗೆ ಈ ಸ್ಮಾರ್ಟ್‌ಫೋನ್ ಖರೀದಿಸಬಹುದು.
ಪೊಕೊ X6 ನಿಯೋ 5G ವೈಶಿಷ್ಟ್ಯಗಳು
ಅಮೋಲೆಡ್ ಡಿಸ್ಪ್ಲೇ
ಪೊಕೊ X6 ನಿಯೋ 5G ಸ್ಮಾರ್ಟ್‌ಫೋನ್ 6.67 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1080 x 2400 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ.
ಮೀಡಿಯಾಟೆಕ್ ಪ್ರೊಸೆಸರ್
ಪೊಕೊ X6 ನಿಯೋ 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 6100+ ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ MIUI 14 ಓಎಸ್ ಜೊತೆಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 8GB ವರ್ಚುವಲ್ RAM ಮತ್ತು 16GB RAM ಹೊಂದಿದೆ. ಇದು 12GB RAM + 256GB ಸ್ಟೋರೇಜ್ ಆಯ್ಕೆಯಲ್ಲಿ ಮಾರಾಟವಾಗುತ್ತಿದೆ.

ಡ್ಯುಯಲ್ ಕ್ಯಾಮೆರಾ ಸೆಟಪ್
ಪೊಕೊ X6 ನಿಯೋ 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.
ಅದ್ಭುತ ಬ್ಯಾಟರಿ ಬ್ಯಾಕಪ್
ಪೊಕೊ X6 ನಿಯೋ 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 33W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಮೊಬೈಲ್ ಇನ್‌ಫ್ರಾರೆಡ್ ಮತ್ತು ಸೈಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್ 5G, ಯುಎಸ್‌ಬಿ ಟೈಪ್ ಸಿ, ವೈ-ಫೈ, ಬ್ಲೂಟೂತ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








