Home
Deal of the day

Valentine Day Offer: 3000 ಡಿಸ್ಕೌಂಟ್! ಕಡಿಮೆ ಬೆಲೆಗೆ POCO 5G ಫೋನ್ ಲಭ್ಯ.. ಹೊಸ ಬೆಲೆ ಎಷ್ಟು?

ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ಫ್ಲಿಪ್‌ಕಾರ್ಟ್‌ ಬೊಂಬಾಟ್ ಆಫರ್‌ ಘೊಷಿಸಿದೆ. ನೀವು, ಹೊಸ ಪೊಕೊ ಫೋನನ್ನು ಕಡಿಮೆ ಬೆಲೆಯಲ್ಲಿ ಖರೀದಿಸಬಹುದು. ಹೌದು, ಮಧ್ಯಮ ಶ್ರೇಣಿಯ POCO X7 ಸರಣಿಯನ್ನು ಜನವರಿಯಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ಸರಣಿಯಲ್ಲಿ POCO X7 ಮತ್ತು POCO X7 Pro ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಾಗಿತ್ತು. ಪ್ರಸ್ತುತ, ಫ್ಲಿಪ್‌ಕಾರ್ಟ್‌ನ ವ್ಯಾಲೆಂಟೈನ್ಸ್ ಸೇಲ್‌ನಲ್ಲಿ ಬ್ಯಾಂಕ್ ಆಫರ್‌ಗಳ ಮೂಲಕ ಪೊಕೊ X7 ಪ್ರೊ 5G (Poco X7 Pro 5G) ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್‌ ಮತ್ತು ವಿಶೇಷತೆಗಳನ್ನು ತಿಳಿಯೋಣ.

ಪೊಕೊ X7 ಪ್ರೊ 5G ಫೋನ್‌ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 8400 ಅಲ್ಟ್ರಾ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 20 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 12GB RAM + 256GB ಸ್ಟೋರೇಜ್, 6550mAh ಬ್ಯಾಟರಿ ಮತ್ತು 90W ವೇಗದ ಚಾರ್ಜಿಂಗ್ ಲಭ್ಯವಿದೆ. ನೀವು ಈ ಮೊಬೈಲ್ ಖರೀದಿಸಿದರೆ, 3000 ರೂ. ಉಳಿತಾಯ ಮಾಡಬಹುದು.

3000 ರಿಯಾಯಿತಿ! ಕಡಿಮೆ ಬೆಲೆಗೆ POCO 5G ಫೋನ್ ಸೇಲ್; ಹೊಸ ಬೆಲೆ ಎಷ್ಟು?

ಪೊಕೊ X7 ಪ್ರೊ 5G ಆಫರ್‌ಗಳು

ಪೊಕೊ X7 ಪ್ರೊ 5G ಫೋನಿನ 8GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ 27,999 ರೂ. ಆಗಿದೆ. ಹಾಗೆಯೇ 12GB RAM + 512GB ಸ್ಟೋರೇಜ್ ವೇರಿಯಂಟ್ 29,999 ರೂ.ಗೆ ಬಿಡುಗಡೆಯಾಗಿತ್ತು. ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ ಇದರ ಬೆಲೆಯನ್ನು 3,000 ರೂ.ಗಳಷ್ಟು ಕಡಿಮೆ ಮಾಡಲಾಗಿದೆ. ಎಸ್‌ಬಿಐ ಮತ್ತು ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಪಾವತಿ ಮೇಲೆ 2,000 ರೂ. ತ್ವರಿತ ರಿಯಾಯಿತಿ ಲಭ್ಯವಿದೆ.

ಇದಲ್ಲದೆ 'ಬೈ ಮೋರ್, ಸೇವ್ ಮೋರ್ ಬೈ' ಆಫರ್ ಅಡಿಯಲ್ಲಿ 1,000 ರೂ.ಗಳ ಹೆಚ್ಚುವರಿ ಡಿಸ್ಕೌಂಟ್ ಸಿಗುತ್ತದೆ. ಈ ರಿಯಾಯಿತಿಯೊಂದಿಗೆ ಪೊಕೊ X7 ಪ್ರೊ 5G ಫೋನಿನ ಎರಡೂ ರೂಪಾಂತರಗಳನ್ನು 24,999 ರೂ. ಮತ್ತು 26,999 ರೂ.ಗೆ ಖರೀದಿಸಬಹುದು. ಈ ಆಫರ್ ಫೆಬ್ರವರಿ 19 ರವರೆಗೆ ಮಾತ್ರ ಇರುತ್ತದೆ. ಈ ಮೊಬೈಲ್ ನೆಬ್ಯುಲಾ ಗ್ರೀನ್, ಅಬ್ಸಿಡಿಯನ್ ಕಪ್ಪು ಮತ್ತು ಹಳದಿ ಬಣ್ಣಗಳಲ್ಲಿ ಮಾರಾಟವಾಗುತ್ತಿದೆ.

ಪೊಕೊ X7 ಪ್ರೊ 5G ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ಪೊಕೊ X7 ಪ್ರೊ 5G ಮೊಬೈಲ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2712 × 1220 ಪಿಕ್ಸೆಲ್‌ ರೆಸಲ್ಯೂಶನ್, 120Hz ರಿಫ್ರೆಶ್ ದರ ಮತ್ತು 3200 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಹೊಂದಿದೆ.

ಮೀಡಿಯಾಟೆಕ್ ಪ್ರೊಸೆಸರ್

ಪೊಕೊ X7 ಪ್ರೊ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8400 ಅಲ್ಟ್ರಾ ಪ್ರೊಸೆಸರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್‌ 15 ಆಧಾರಿತ ಹೈಪರ್ ಓಎಸ್‌ 2 ಜೊತೆಗೆ ಕೆಲಸ ನಿರ್ವಹಿಸುತ್ತದೆ. ಈ ಮೊಬೈಲ್ 8GB ಮತ್ತು 12GB RAM ಹೊಂದಿದೆ. ಇದು 256GB ಮತ್ತು 512GB ಸ್ಟೋರೇಜ್‌ ಆಯ್ಕೆಯೊಂದಿಗೆ ಬರುತ್ತದೆ.

3000 ರಿಯಾಯಿತಿ! ಕಡಿಮೆ ಬೆಲೆಗೆ POCO 5G ಫೋನ್ ಸೇಲ್; ಹೊಸ ಬೆಲೆ ಎಷ್ಟು?

ಡ್ಯುಯಲ್ ಕ್ಯಾಮೆರಾ ಸೆಟಪ್

ಪೊಕೊ X7 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆಕೆಂಡರಿ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 20 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ದೊಡ್ಡ ಬ್ಯಾಟರಿ

ಪೊಕೊ X7 ಪ್ರೊ ಮೊಬೈಲ್ 6550mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 90W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.ಈ ಸ್ಮಾರ್ಟ್‌ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಮತ್ತು ಇನ್ಫ್ರಾರೆಡ್ ಸಂವೇದಕ ಹೊಂದಿದೆ. ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ 4G VoLTE, ಯುಎಸ್‌ಬಿ ಟೈಪ್ ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ಗಳು, ಬ್ಲೂಟೂತ್ 6.0, ವೈ-ಫೈ 6 ಮತ್ತು ಜಿಪಿಎಸ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Best Mobiles in India

English summary
POCO X7 Pro Available With 3,000 discount on Flipkart Valentines Day Sale: check new price, offers, specs and more details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+