ದೊಡ್ಡ ಸಿಹಿಸುದ್ದಿ: 9,302 ಡಿಸ್ಕೌಂಟ್.. 15000ಕ್ಕೆ Realme 5G ಫೋನ್.. ಹೇಗಿದೆ ಗೊತ್ತಾ?
ರಿಯಲ್‌ಮಿ (Realme) ಮೊಬೈಲ್‌ಗಳಿಗೆ ಭಾರತದಲ್ಲಿ ಭಾರೀ ಬೇಡಿಕೆ ಇದೆ. ಈ ಮೂಲಕ ಪ್ರಸಿದ್ಧ ಸ್ಮಾರ್ಟ್‌ಫೋನ್ ತಯಾರಕ ಕಂಪನಿಯಾಗಿ ಮನೆ ಮಾತಾಗಿದೆ. ಬಾಲಿವುಡ್‌ನ ಖ್ಯಾತ ನಟ ಶಾರುಖ್ ಖಾನ್ (Shahrukh Khan) ಸಹ ರಿಯಲ್‌ಮಿ ಮೊಬೈಲ್‌ಗಳಿಗೆ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಮಾರಾಟ ಮಾಡುವ ಫೋನ್‌ಗಳು ಎಲ್ಲ ವಯೋಮಾನದ ಗ್ರಾಹಕರನ್ನು ಆಕರ್ಷಿಸಿವೆ. ಪ್ರಸ್ತುತ, ಕಂಪನಿಯು ರಿಯಲ್‌ಮಿ 12+ 5G (Realme 12+ 5G) ಫೋನನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಹೌದು, ಕಂಪನಿಯು ರಿಯಲ್‌ಮಿ 12 ಪ್ಲಸ್ 5G ಮೊಬೈಲ್ ಖರೀದಿ ಮೇಲೆ ಶೇ.36 ರಷ್ಟು ರಿಯಾಯಿತಿ ನೀಡುತ್ತಿದೆ. ನೀವು, ಬರೋಬ್ಬರಿ 9,302 ರೂ. ಕಡಿಮೆ ಬೆಲೆಯಲ್ಲಿ ಈ ಫೋನ್ ಕೊಳ್ಳಬಹುದು. ಈ ಮೊಬೈಲ್ 50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.7 ಇಂಚಿನ ಡಿಸ್ಪ್ಲೇ, 5000mAh ಬ್ಯಾಟರಿ ಮತ್ತು 67W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳು ಲಭ್ಯವಿದೆ.

ರಿಯಲ್‌ಮಿ 12+ 5G ಬೆಲೆ ಮತ್ತು ಆಫರ್‌ಗಳು
ಕಂಪನಿಯು ರಿಯಲ್‌ಮಿ 12+ 5G ಫೋನನ್ನು 8GB RAM + 128GB ಮತ್ತು 12GB RAM + 256GB ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಮಾಡಿದೆ. ಇದು ಪಯೋನೀರ್ ಗ್ರೀನ್ ಮತ್ತು ನ್ಯಾವಿಗೇಟರ್ ಬೀಜ್ ಬಣ್ಣದಲ್ಲಿ ಖರೀದಿಗೆ ಲಭ್ಯವಿದೆ. 128GB ಸ್ಟೋರೇಜ್ ರೂಪಾಂತರವನ್ನು 20,999 ರೂ. ಪರಿಚಯಿಸಲಾಗಿತ್ತು. ಪ್ರಸ್ತುತ, ಅಮೆಜಾನ್‌ನಲ್ಲಿ ಇದು ಕೇವಲ 16,695 ರೂ.ಗೆ ಮಾರಾಟವಾಗುತ್ತಿದೆ. ಕಂಪನಿಯು 1,252 ರೂ. ತ್ವರಿತ ರಿಯಾಯಿತಿ ನೀಡುತ್ತಿದೆ. ನೀವು, 15,856 ರೂ.ಗೆ ಈ ಫೋನನ್ನು ಕೊಳ್ಳಬಹುದು.
ರಿಯಲ್‌ಮಿ 12+ 5G ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ರಿಯಲ್‌ಮಿ 12+ 5G ಮೊಬೈಲ್ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ದರ, 2400 × 1080 ಪಿಕ್ಸೆಲ್ ರೆಸಲ್ಯೂಶನ್ ಮತ್ತು 2000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಜೊತೆಗೆ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಸಹ ಹೊಂದಿದೆ.
ಪ್ರೊಸೆಸರ್ ಸಾಮರ್ಥ್ಯ
ಕಂಪನಿಯು ರಿಯಲ್‌ಮಿ 12 ಪ್ಲಸ್ 5G ಫೋನನ್ನು ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಆಕ್ಟಾ ಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಿದೆ. ಈ ಪ್ರೊಸೆಸರ್ ಅನ್ನು 6 ನ್ಯಾನೋಮೀಟರ್‌ನಲ್ಲಿ ತಯಾರಿಸಲಾಗಿದೆ. ಗ್ರಾಫಿಕ್ಸ್‌ಗಾಗಿ, ಮಾಲಿG68 MC4 ಜಿಪಿಯು ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ ರಿಯಲ್‌ಮಿ UI 5 ನೊಂದಿಗೆ ಕೆಲಸ ಮಾಡುತ್ತದೆ.

ಕ್ಯಾಮೆರಾ ಸೆಟಪ್
ರಿಯಲ್‌ಮಿ 12+ 5G ಮೊಬೈಲ್ ಟ್ರಿಪಲ್ ರಿಯರ್ ಸೆಟಪ್ ಹೊಂದಿದೆ. ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಎಲ್‌ಇಡಿ ಫ್ಲಾಶ್‌ನೊಂದಿಗೆ ಬರುತ್ತದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಕಂಪನಿಯು ರಿಯಲ್‌ಮಿ 12 ಪ್ಲಸ್ 5G ಫೋನನ್ನು 5000mAh ಸಾಮರ್ಥ್ಯ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 67W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ.
ಇತರೆ ವೈಶಿಷ್ಟ್ಯಗಳು
ರಿಯಲ್‌ಮಿ 12+ 5G ಮೊಬೈಲ್ ಧೂಳು ಮತ್ತು ಸ್ಪ್ಲಾಶ್ ನಿರೋಧಕ IP54 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಯುಎಸ್‌ಬಿ ಟೈಪ್ ಸಿ ಆಡಿಯೊ, ಸ್ಟಿರಿಯೊ ಸ್ಪೀಕರ್‌ಗಳು, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.3, ಜಿಪಿಎಸ್, ಯುಎಸ್‌ಬಿ ಟೈಪ್ ಸಿ ಮತ್ತು ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








