Realme ಸಂಸ್ಥೆಯ ಈ ಜನಪ್ರಿಯ ಫೋನ್ ಬೆಲೆಯಲ್ಲಿ ಇಳಿಕೆ; ರೌಂಡ್ ಕ್ಯಾಮೆರಾ!
ಇ ಕಾಮರ್ಸ್ ಹಿರಿಯಣ್ಣ ಎಂದು ಗುರುತಿಸಿಕೊಂಡಿರುವ ಫ್ಲಿಪ್‌ಕಾರ್ಟ್ ಆನ್‌ಲೈನ್ ಶಾಪಿಂಗ್ ವೆಬ್‌ಸೈಟ್ ಬೊಂಬಾಟ್ ಕೊಡುಗೆಗಳ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತಾ ಮುಂದೆ ಸಾಗಿದೆ. ಮುಖ್ಯವಾಗಿ ಕೆಲವು ಆಯ್ದ ಮೊಬೈಲ್‌ಗಳಿಗೆ ಹೆಚ್ಚುವರಿ ಡಿಸ್ಕೌಂಟ್ ಕೊಡುಗೆ ತಿಳಿಸುತ್ತದೆ. ಸದ್ಯ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ 12X 5G (realme 12x 5G) ಮೊಬೈಲ್‌ಗೆ ಈಗ ದೊಡ್ಡ ರಿಯಾಯಿತಿ ಪಡೆದುಕೊಂಡಿದ್ದು, ಗ್ರಾಹಕರನ್ನು ಸೆಳೆದಿದೆ.
ಹೌದು, ರಿಯಲ್‌ಮಿ 12X 5G ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಶೇ. 29% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಲಭ್ಯ ಇದೆ. ಈ ಫೋನಿನ 4 GB RAM + 128 GB ಸ್ಟೋರೇಜ್ ವೇರಿಯಂಟ್ 11,999ರೂ. ಗಳ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯ ಇದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳ ಕೊಡುಗೆ ಅಲ್ಲದೇ ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯ ಆಗಲಿವೆ.

ಇನ್ನು ಈ ಫೋನ್ 5000 mAh ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ ಪ್ರಯೋಜನ ಹೊಂದಿದ್ದು, ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ ಇದು ಟ್ವಿಲೈಟ್ ಪರ್ಪಲ್ ಹಾಗೂ ವುಡ್‌ಲ್ಯಾಂಡ್ ಗ್ರೀನ್ ಕಲರ್ ಆಯ್ಕೆ ಲಭ್ಯ. ಇನ್ನುಳಿದಂತೆ ರಿಯಲ್‌ಮಿ 12X 5G ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ರಿಯಲ್‌ಮಿ 12X 5G - ಫೀಚರ್ಸ್
ರಿಯಲ್‌ಮಿ 12X 5G ಸ್ಮಾರ್ಟ್‌ಫೋನ್ 6.72 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ರಚನೆ ಅನ್ನು ಪಡೆದಿದ್ದು, ಹಾಗೆಯೇ 1080 x 2400 ಪಿಕ್ಸಲ್ ರೆಸಲ್ಯೂಶನ್ ವ್ಯವಸ್ಥೆ ಅನ್ನು ಪಡೆದುಕೊಂಡಿದೆ. ಅಲ್ಲದೇ ಇದು 120Hz ರಿಫ್ರೆಶ್ ರೇಟ್ ಆಯ್ಕೆ ಒಳಗೊಂಡಿದ್ದು, 91.40% ಅನುಪಾತವನ್ನು ಕೂಡಾ ಪಡೆದಿದೆ. ಹಾಗೆಯೇ ಈ ಫೋನ್ 950 nits ಬ್ರೈಟ್ನೆಸ್ ಸಪೋರ್ಟ್ ಒಳಗೊಂಡಿದೆ.
ರಿಯಲ್‌ಮಿ 12X 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6100+ SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಇದೆ. ಹಾಗೆಯೇ 4GB/6GB/8GB RAM ವೇರಿಯಂಟ್ ಆಯ್ಕೆಗಳಲ್ಲಿ ಖರೀದಿಗೆ ಲಬ್ಯ ಇದ್ದು, ಇದರೊಂದಿಗೆ 8GB ಡೈನಾಮಿಕ್ RAM ಸೌಲಭ್ಯ ಸಹ ಸಿಗಲಿದೆ.
ರಿಯಲ್‌ಮಿ 12X 5G ಸ್ಮಾರ್ಟ್‌ಫೋನ್ ಈ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದ್ದು, ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ನಲ್ಲಿದೆ. ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ರಚನೆ ಪಡೆದಿದೆ. ಇನ್ನು ಮುಂಭಾಗದಲ್ಲಿ ಈ ಫೋನ್ 8 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಸೌಲಭ್ಯವನ್ನು ಪಡೆದುಕೊಂಡಿದೆ. ಹಾಗೆಯೇ 1080P@30fps ಸಪೋರ್ಟ್‌ನಲ್ಲಿ ವಿಡಿಯೋ ರೆಕಾರ್ಡಿಂಗ್ ಮಾಡಬಹುದು.
ರಿಯಲ್‌ಮಿ 12X 5G ಸ್ಮಾರ್ಟ್‌ಫೋನ್ 5000 mAh ಬ್ಯಾಟರಿ ಬ್ಯಾಕ್‌ಅಪ್ ಪ್ರಯೋಜನ ಪಡೆದಿದ್ದು, ಇದಕ್ಕೆ ಪೂರಕವಾಗಿ 45W SuperVOOC ಚಾರ್ಜಿಂಗ್ ಸಪೋರ್ಟ್ ಪಡೆದಿದೆ. ಹಾಗೆಯೇ ಏರ್ ಗೆಸ್ಚರ್ ಸೌಲಭ್ಯ, IP54 ರೇಟಿಂಗ್ ಆಯ್ಕೆ ಹಾಗೂ ಡ್ಯುಯಲ್ ಸ್ಟಿರಿಯೋ ಸ್ಪೀಕರ್ ಸೌಲಭ್ಯದ ಆಯ್ಕೆಗಳು ಇವೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್, ವೈ-ಫೈ, ಯುಎಸ್‌ಬಿ ಸಿ ಟೈಪ್ ಆಯ್ಕೆಗಳು ಇದೆ.


Click it and Unblock the Notifications








