Home
Deal of the day

15,000ಕ್ಕಿಂತ ಕಡಿಮೆ! 6000mAh ಬ್ಯಾಟರಿ.. 50MP ಕ್ಯಾಮೆರಾ.. ಈ Realme ಫೋನಿಗೆ ಸಖತ್ ಆಫರ್

ರಿಯಲ್‌ಮಿ ಪ್ರಿಯರಿಗೆ ಫ್ಲಿಪ್‌ಕಾರ್ಟ್‌ ಬಂಪರ್ ಆಫರ್ ನೀಡುತ್ತಿದೆ. ನೀವು ರಿಯಲ್‌ಮಿ 14x 5G (Realme 14x 5G) ಮೊಬೈಲ್ ಅನ್ನು ರಿಯಾಯಿತಿ ದರದಲ್ಲಿ ಖರೀದಿಸಬಹುದು. ಹೌದು, ಕಂಪನಿಯು ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಜೆಟ್ ಬೆಲೆಯ ರಿಯಲ್‌ಮಿ 14x 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿತ್ತು. ಇದು 15,000 ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಿದೆ. ಕಡಿಮೆ ದರವೆಂಬ ಕಾರಣಕ್ಕೆ ಫೋನಿನ ಕಾರ್ಯಕ್ಷಮತೆ ಮತ್ತು ವೈಶಿಷ್ಟ್ಯಗಳಲ್ಲಿ ಕಂಪನಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಬನ್ನಿ, ಈ ಫೋನಿನ ಮೂಲ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ರಿಯಲ್‌ಮಿ 14x 5G ಫೋನ್‌ ಎರಡು ಸ್ಟೋರೇಜ್‌ ಆಯ್ಕೆಯಲ್ಲಿ ಮಾರಾಟವಾಗುತ್ತಿದೆ. ಇದು 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಇದೆ. ಹಾಗೆಯೇ 128GB ಸ್ಟೋರೇಜ್‌, IP69 ರೇಟಿಂಗ್‌ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Realme 14x ಬೆಲೆ ಇಳಿಕೆ! 6000mAh ಬ್ಯಾಟರಿ, 50MP ಕ್ಯಾಮೆರಾ.. ಆಫರ್ ಏನಿದೆ?

ರಿಯಲ್‌ಮಿ 14x 5G ಹೊಸ ಬೆಲೆ ಮತ್ತು ಆಫರ್

ರಿಯಲ್‌ಮಿ 14x 5G ಫೋನಿನ 6GB + 128GB ಸ್ಟೋರೇಜ್‌ ರೂಪಾಂತರವನ್ನು14,999 ರೂ.ಗೆ ಬಿಡುಗಡೆ ಮಾಡಲಾಗಿದೆ. 8GB + 128GB ಸ್ಟೋರೇಜ್ ಆಯ್ಕೆಯ ಬೆಲೆ 15,999 ರೂ. ಆಗಿದೆ. ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ ಈ ಸ್ಮಾರ್ಟ್‌ಫೋನ್‌ನಲ್ಲಿ ಎಲ್ಲಾ ಬ್ಯಾಂಕ್‌ಗಳ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೇಲೆ 1000 ರೂ. ರಿಯಾಯಿತಿ ಪಡೆಯಬಹುದು. ಬಳಿಕ ಈ ಫೋನಿನ ಬೆಲೆ 13,999 ರೂ.ಗೆ ಇಳಿಕೆಯಾಗಲಿದೆ. ಹಾಗೆಯೇ ಇನ್ನೊಂದು ರೂಪಾಂತರದ ಬೆಲೆ 14,999 ರೂ.ಗೆ ಲಭ್ಯವಿದೆ. ನೀವು ಫ್ಲಿಪ್‌ಕಾರ್ಟ್ ಆಕ್ಸೆಸ್ ಬ್ಯಾಂಕ್ ಕಾರ್ಡ್ ಮೂಲಕ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಸಹ ಪಡೆಯಬಹುದು. ಈ ಫೋನ್ ಕ್ರಿಸ್ಟಲ್ ಬ್ಲಾಕ್, ಗೋಲ್ಡನ್ ಗ್ಲೋ ಮತ್ತು ಜ್ಯುವೆಲ್ ರೆಡ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.

ರಿಯಲ್‌ಮಿ 14x 5G ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ರಿಯಲ್‌ಮಿ 14x 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಪೂರ್ಣ ಎಚ್‌ಡಿ ಪ್ಲಸ್ ಐಪಿಎಸ್‌ ಎಲ್‌ಸಿಡಿ ಆಗಿದೆ. ಡಿಸ್ಪ್ಲೇಯು 720×1604 ಪಿಕ್ಸೆಲ್‌ಗಳು ರೆಸಲ್ಯೂಶನ್‌ ಮತ್ತು 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ.

ಪ್ರೊಸೆಸರ್ ಯಾವುದು?

ಕಂಪನಿಯು ರಿಯಲ್‌ಮಿ 14x 5G ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಆಕ್ಟಾಕೋರ್‌ ಪ್ರೊಸೆಸರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್‌ 14 ಆಧಾರಿತ ರಿಯಲ್‌ಮಿ ಯುಐ 5.0 ಓಎಸ್‌ನಲ್ಲಿ ಕೆಲಸ ಮಾಡುತ್ತದೆ ಗ್ರಾಫಿಕ್ಸ್‌ಗಾಗಿ, ಇದು ಆರ್ಮ್ ಮಾಲಿ G57 MC2 ಜಿಪಿಯು ಸಹ ಹೊಂದಿದೆ.

RAM ಮತ್ತು ಸ್ಟೋರೇಜ್ ಆಯ್ಕೆ

ರಿಯಲ್‌ಮಿ 14x 5G ಫೋನ್‌ 8GB ಮತ್ತು 6GB RAM ಹೊಂದಿದೆ. ಇದು 10GB ಡೈನಾಮಿಕ್ RAM ಹೊಂದಿದೆ. ಫೋನಿನಲ್ಲಿ 128GB ಸ್ಟೋರೇಜ್‌ ಆಯ್ಕೆ ಲಭ್ಯವಿದೆ. ನೀವು, ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 2TB ವರೆಗೆ ಸ್ಟೋರೇಜ್ ಹೆಚ್ಚಿಸಬಹುದು.

Realme 14x ಬೆಲೆ ಇಳಿಕೆ! 6000mAh ಬ್ಯಾಟರಿ, 50MP ಕ್ಯಾಮೆರಾ.. ಆಫರ್ ಏನಿದೆ?

ಡ್ಯುಯಲ್‌ ಕ್ಯಾಮೆರಾ ಸೆಟಪ್

ಹೊಸ ರಿಯಲ್‌ಮಿ 14x 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಲಭ್ಯವಿದೆ. ಇದು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಹಾಗೆಯೇ 2 ಮೆಗಾಪಿಕ್ಸೆಲ್‌ ದ್ವಿತೀಯ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಮೊಬೈಲ್ 8 ಮೆಗಾಪಿಕ್ಸೆಲ್‌ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ರಿಯಲ್‌ಮಿ 14x 5G ಫೋನ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಇದನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ರಿಯಲ್‌ಮಿ ಮೊಬೈಲ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 + IP69 ರೇಟಿಂಗ್ ಪಡೆದಿದೆ. ಹಾಗೆಯೇ ಸೈಡ್‌ ಮೌಂಟ್‌ ಫಿಂಗರ್‌ಫ್ರಿಂಟ್ ಸೆನ್ಸಾರ್ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್‌ ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.3, ಜಿಪಿಎಸ್‌, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳಲ್ಲಿ ಒಳಗೊಂಡಿದೆ.

Best Mobiles in India

English summary
Realme 14x 5G available with Rs.1000 discount on flipkart sale: check new price, offers, specifications and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+