Home
Deal of the day

14,000ಕ್ಕಿಂತ ಕಡಿಮೆಗೆ ಸಿಗುತ್ತೆ! 6000mAh ಬ್ಯಾಟರಿ.. 50MP ಕ್ಯಾಮೆರಾ.. 2000 ರಿಯಾಯಿತಿ; ಯಾವ ಫೋನ್?

ನೀವು 15,000 ರೂ.ಗಿಂತ ಕಡಿಮೆ ಬೆಲೆಗೆ 5G ಫೋನ್ ಖರೀದಿಸಲು ಬಯಸಿದರೆ, ಇಲ್ಲಿದೆ ಒಳ್ಳೆಯ ಅವಕಾಶ. ಇತ್ತೀಚಿನ ಬಿಡುಗಡೆಯಾದ ರಿಯಲ್‌ಮಿ 14x 5G (Realme 14X 5G) ಸ್ಮಾರ್ಟ್‌ಫೋನ್ ಅಗ್ಗದ ಬೆಲೆಗೆ ಮಾರಾಟವಾಗುತ್ತಿದೆ. ಹೌದು, ರಿಯಲ್‌ಮಿ ಈ ಫೋನಿನ ಖರೀದಿ ಮೇಲೆ ರಿಯಾಯಿತಿ ಘೋಷಿಸಿದೆ. ಈ ಸ್ಮಾರ್ಟ್‌ಫೋನ್ ತನ್ನ ಸ್ಟೈಲಿಶ್ ಲುಕ್ ಮತ್ತು ಅತ್ಯಾಕರ್ಷಕ ವೈಶಿಷ್ಟ್ಯಗಳೊಂದಿಗೆ ಮೊಬೈಲ್ ಪ್ರಿಯರ ಗಮನ ಸೆಳೆದಿದೆ. ಬನ್ನಿ, ಈ ಹೊಸ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ರಿಯಲ್‌ಮಿ 14x 5G ಫೋ‍ನಿನ ವಿಶೇಷತೆಗಳನ್ನು ನೋಡುವುದಾದರೆ, ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಜೊತೆಗೆ 128GB ಸ್ಟೋರೇಜ್‌, IP69 ರೇಟಿಂಗ್‌ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಸ್ತುತ, ಬಿಡುಗಡೆ ಬೆಲೆಗಿಂತ ಅಗ್ಗವಾಗಿ ಈ ಮೊಬೈಲ್ ಮಾರಾಟವಾಗುತ್ತಿದೆ.

14,000ಕ್ಕಿಂತ ಕಡಿಮೆ! 2000 ರಿಯಾಯಿತಿ.. ಜಬರ್ದಸ್ತ್ ಫೀಚರ್ಸ್; ಯಾವ ಫೋನ್?

ರಿಯಲ್‌ಮಿ 14x 5G ಹೊಸ ಬೆಲೆ ಮತ್ತು ಆಫರ್

ರಿಯಲ್‌ಮಿ 14x 5G ಮೊಬೈಲ್ ಎರಡು ಸ್ಟೋರೇಜ್‌ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ 6GB RAM + 128GB ಸ್ಟೋರೇಜ್‌ ರೂಪಾಂತರದ ಬೆಲೆ 14,999 ರೂ. ಆಗಿದೆ. 8GB RAM + 128GB ಸ್ಟೋರೇಜ್ ಆಯ್ಕೆಯನ್ನು 15,999 ರೂ.ಗೆ ಬಿಡುಗಡೆ ಮಾಡಲಾಗಿದೆ. ಕಂಪನಿಯು ಎರಡು ಮಾದರಿಗಳ ಮೇಲೆ 1,000 ರೂ.ಗಳ ರಿಯಾಯಿತಿ ಘೋಷಿಸಿದೆ.

ರಿಯಲ್‌ಮಿ 14x 5G ಫೋನಿನ 8GB RAM ಮಾದರಿಯ ಖರೀದಿ ಮೇಲೆ 1,000 ರೂ.ಗಳ (ಡೆಬಿಟ್ ಕಾರ್ಡ್‌ಗಳು ಮತ್ತು ಕ್ರೆಡಿಟ್ ಕಾರ್ಡ್‌) ರಿಯಾಯಿತಿ ಲಭ್ಯವಿದೆ. ಈ ಮೊಬೈಲ್ ಮೂರು ಬಣ್ಣಗಳ ಆಯ್ಕೆಯನ್ನು ಹೊಂದಿದೆ. ನೀವು ಕ್ರಿಸ್ಟಲ್ ಬ್ಲ್ಯಾಕ್, ಗೋಲ್ಡನ್ ಗ್ಲೋ ಮತ್ತು ಜ್ಯುವೆಲ್ ರೆಡ್ ಬಣ್ಣಗಳಲ್ಲಿ ಖರೀದಿಸಬಹುದು. ಈ ಫೋನ್ ಫ್ಲಿಪ್‌ಕಾರ್ಟ್ ಮತ್ತು ಕಂಪನಿಯ ಅಧಿಕೃತ ವೆಬ್‌ಸೈಟ್ (realme.com) ಮತ್ತು ಆಫ್‌ಲೈನ್ ಸ್ಟೋರ್‌ಗಳ ಮೂಲಕ ಮಾರಾಟವಾಗುತ್ತಿದೆ.

ರಿಯಲ್‌ಮಿ 14x 5G ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ರಿಯಲ್‌ಮಿ 14x 5G ಫೋನ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಪೂರ್ಣ ಎಚ್‌ಡಿ ಪ್ಲಸ್ ಐಪಿಎಸ್‌ ಎಲ್‌ಸಿಡಿ ಆಗಿದೆ. ಈ ಡಿಸ್ಪ್ಲೇಯು 1604 x 720 ಪಿಕ್ಸೆಲ್‌ಗಳು ರೆಸಲ್ಯೂಶನ್‌ ಬೆಂಬಲದೊಂದಿಗೆ ಬರುತ್ತದೆ. ಇದರೊಂದಿಗೆ 625 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಹೊಂದಿದೆ.

ಮೀಡಿಯಾಟೆಕ್ ಪ್ರೊಸೆಸರ್

ರಿಯಲ್‌ಮಿ 14x 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಆಕ್ಟಾಕೋರ್‌ ಪ್ರೊಸೆಸರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್‌ 14 ಆಧಾರಿತ ರಿಯಲ್‌ಮಿ ಯುಐ 5.0 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಈ ಮೊಬೈಲ್ ಆರ್ಮ್ ಮಾಲಿ G57 MC2 ಜಿಪಿಯು ಸಹ ಹೊಂದಿದೆ. ಈ ಫೋನ್ 8GB ಮತ್ತು 6GB RAM ಹೊಂದಿದೆ. ಇದು 10GB ಡೈನಾಮಿಕ್ RAM ಹೊಂದಿದೆ. ಈ ಫೋನಿನಲ್ಲಿ 128GB ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ. ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 2TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.

14,000ಕ್ಕಿಂತ ಕಡಿಮೆ! 2000 ರಿಯಾಯಿತಿ.. ಜಬರ್ದಸ್ತ್ ಫೀಚರ್ಸ್; ಯಾವ ಫೋನ್?

ಡ್ಯುಯಲ್‌ ಕ್ಯಾಮೆರಾ ಸೆಟಪ್

ಹೊಸ ರಿಯಲ್‌ಮಿ 14x 5G ಮೊಬೈಲ್ ಡ್ಯುಯಲ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಇದರೊಂದಿಗೆ 2 ಮೆಗಾಪಿಕ್ಸೆಲ್‌ ದ್ವಿತೀಯ ಕ್ಯಾಮೆರಾ ಹೊಂದಿದೆ. ಈ ಮೊಬೈಲ್, ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ 8 ಮೆಗಾಪಿಕ್ಸೆಲ್‌ ಸೆಲ್ಫಿ ಶೂಟರ್ ಹೊಂದಿದೆ.

ದೊಡ್ಡ ಬ್ಯಾಟರಿ

ರಿಯಲ್‌ಮಿ 14x 5G ಸ್ಮಾರ್ಟ್‌ಫೋನ್‌ ದೊಡ್ಡ ಬ್ಯಾಟರಿ ಹೊಂದಿದೆ. ಈ ಮೊಬೈಲ್‌ 6000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರುತ್ತದೆ. ಇದನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP68 + IP69 ರೇಟಿಂಗ್ ಪಡೆದಿದೆ. ಇದು ಸೈಡ್‌ ಮೌಂಟ್‌ ಫಿಂಗರ್‌ಫ್ರಿಂಟ್ ಸೆನ್ಸಾರ್ ಸಹ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಮೊಬೈಲ್ ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.3, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Best Mobiles in India

English summary
8GB RAM with realme 14X 5G mobile Price Drop in India: Check offers, Specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+