Home
Deal of the day

Realme: ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ಗೆ ದೊಡ್ಡ ಆಫರ್! 128 GB ಸ್ಟೋರೇಜ್‌...

ರಿಯಲ್‌ಮಿ ಸ್ಮಾರ್ಟ್‌ಫೋನ್‌ಗಳು (Realme smartphones) ವಿವಿಧ ಸುಧಾರಿತ ಫೀಚರ್ಸ್‌ ಆಯ್ಕೆಯ ಮೂಲಕ ಬಳಕೆದಾರರಿಗೆ ವಿವಿಧ ರೀತಿಯಲ್ಲಿ ಪ್ರಯೋಜನ ಕಲ್ಪಿಸಿಕೊಡುತ್ತವೆ. ಈ ನಡುವೆ ಬಹುಬೇಡಿಕೆ ಇರುವ ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ಗೆ (Realme C53 smartphone) ಆಫರ್ ನೀಡಲಾಗಿದೆ.

ಹೌದು, ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ಗೆ ಇದೀಗ ಭರ್ಜರಿ ಆಫರ್ ನೀಡಲಾಗಿದೆ. ಈ ಸ್ಮಾರ್ಟ್‌ಫೋನ್ 128 GB ಸ್ಟೋರೇಜ್‌ ಆಯ್ಕೆ ಪಡೆದಿದ್ದು, 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾದೊಂದಿಗೆ ಡ್ಯುಯಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಆಫರ್ ಮಾಹಿತಿ ಹಾಗೂ ಇದರ ಪ್ರಮುಖ ಫೀಚರ್ಸ್‌ ಏನು ಅನ್ನೋದನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ಗೆ ದೊಡ್ಡ ಆಫರ್! 128 GB ಸ್ಟೋರೇಜ್‌...

ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಆಫರ್ ಮಾಹಿತಿ: ಈ ಸ್ಮಾರ್ಟ್‌ಫೋನ್ 13,999 ರೂ.ಗಳ ಸಾಮಾನ್ಯ ಬೆಲೆ ಹೊಂದಿದ್ದು, ನೀವೀಗ ಇದನ್ನು 10,499 ರೂ.ಗಳ ಆಫರ್ ಬೆಲೆಗೆ ಖರೀದಿ ಮಾಡಬಹುದಾಗಿದೆ. ಯಾಕೆಂದರೆ ಈ ಫೋನ್‌ಗೆ ಪ್ರಮುಖ ಇ-ಕಾಮರ್ಸ್ ಸೈಟ್‌ ಆಗಿರುವ ಫ್ಲಿಪ್‌ಕಾರ್ಟ್‌ ಇದಕ್ಕೆ 25% ರಿಯಾಯಿತಿ ನೀಡಲಾಗಿದೆ. ಆದರೂ ಸಹ ನೀವು ಬ್ಯಾಂಕ್‌ ಆಫರ್ ಮೂಲಕ ಇನ್ನೂ ಕಡಿಮೆ ದರದಲ್ಲಿ ಈ ಫೋನ್‌ ಅನ್ನು ಖರೀದಿ ಮಾಡಬಹುದಾಗಿದೆ.

ಫ್ಲಿಪ್‌ಕಾರ್ಟ್‌ ಆಕ್ಸಿಸ್ ಬ್ಯಾಂಕ್‌ ಕಾರ್ಡ್‌ ಮೂಲಕ ಖರೀದಿ ಮಾಡಿದ್ರೆ 5% ಕ್ಯಾಶ್‌ಬ್ಯಾಕ್, ಫ್ಲಿಪ್‌ಕಾರ್ಟ್‌ ಯುಪಿಐನಲ್ಲಿ ತ್ವರಿತ ರಿಯಾಯಿತಿ ಸಿಗಲಿದೆ. ಇದರೊಂದಿಗೆ FreebieSpotify ಪ್ರೀಮಿಯಂ ಸೌಲಭ್ಯ. ಕಾಂಬೊ ಮೊಬೈಲ್ ಮತ್ತು ಕೇಸ್‌ ಕವರ್‌ನಲ್ಲಿ ಹೆಚ್ಚುವರಿ 10% ರಿಯಾಯಿತಿ ಸೌಲಭ್ಯಗಳಿದ್ದು, ಈ ಮೂಲಕ ಈ ಫೋನ್‌ ಅನ್ನು ಕಡಿಮೆ ದರದಲ್ಲಿ ಖರೀದಿ ಮಾಡಬಹುದಾಗಿದೆ.

ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.74 ಇಂಚಿನ IPS LCD ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 90Hz ರಿಫ್ರೆಶ್‌ ರೇಟ್‌ ಆಯ್ಕೆ ಹಾಗೂ 560 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದುಕೊಂಡಿದೆ. ಇದರ ಜೊತೆಗೆ 85.5% ಸ್ಕ್ರೀನ್-ಟು-ಬಾಡಿ ಅನುಪಾತ, 390 ppi ಸಾಂದ್ರತೆ ಪಡೆದುಕೊಂಡಿದೆ.

ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ಗೆ ದೊಡ್ಡ ಆಫರ್! 128 GB ಸ್ಟೋರೇಜ್‌...

ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಪ್ರೊಸೆಸರ್ ವಿವರ: ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 13, ರಿಯಲ್‌ಮಿ ಯುಐ ಟಿ ಓಎಸ್‌ ಅನ್ನು ರನ್‌ ಮಾಡಲಿದ್ದು, ಯುನಿಸಾಕ್ ಟೈಗರ್ T612 (12 nm) ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಮಾಲಿ-G57 ಜಿಪಿಯು ಬಲ ಪಡೆದಿದ್ದು, 6GB RAM ಹಾಗೂ 128GB ಇಂಟರ್‌ ಸ್ಟೋರೇಜ್‌ ಆಯ್ಕೆಯಲ್ಲಿ ಲಭ್ಯ ಇದೆ. ಇದರೊಂದಿಗೆ ಎಸ್‌ಡಿ ಕಾರ್ಡ್‌ ಮೂಲಕ ಸ್ಟೋರೇಜ್‌ ಅನ್ನು ಹೆಚ್ಚಿಗೆ ಮಾಡಿಕೊಳ್ಳಬಹುದಾಗಿದೆ.

ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಕ್ಯಾಮೆರಾ ರಚನೆ: ಈ ಫೋನ್ ಡ್ಯುಯಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದಿದ್ದು, 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ, 0.3 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸರ್ ಆಯ್ಕೆ ಪಡೆದುಕೊಂಡಿದೆ. ಈ ಸೆನ್ಸರ್‌ಗಳು ಎಲ್‌ಇಡಿ ಫ್ಲ್ಯಾಶ್, ಹೆಚ್‌ಡಿಆರ್, ಪನೋರಮಾ ಫೀಚರ್ಸ್ ಅನ್ನು ಹೊಂದಿದೆ. ಅಲ್ಲದೆ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ 8 ಮೆಗಾಪಿಕ್ಸೆಲ್‌ ಕ್ಯಾಮೆರಾ ಆಯ್ಕೆ ನೀಡಲಾಗಿದೆ.

ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ಗೆ ದೊಡ್ಡ ಆಫರ್! 128 GB ಸ್ಟೋರೇಜ್‌...

ರಿಯಲ್‌ಮಿ C53 ಸ್ಮಾರ್ಟ್‌ಫೋನ್‌ ಬ್ಯಾಟರಿ ಹಾಗೂ ಇತರೆ: ಈ ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 33W ವೈರ್ಡ್ ಚಾರ್ಜಿಂಗ್ ಬೆಂಬಲ ಪಡೆದಿದೆ. ಈ ಮೂಲಕ ಫೋನ್‌ ಅನ್ನು 31 ನಿಮಿಷದಲ್ಲಿ 50% ಚಾರ್ಜ್‌ ಮಾಡಬಹುದಾಗಿದೆ. ಉಳಿದಂತೆ ಈ ಫೋನ್ ವೈ-ಫೈ 802.11 a/b/g/n/ac, ಡ್ಯುಯಲ್-ಬ್ಯಾಂಡ್, ಬ್ಲೂಟೂತ್ ಆವೃತ್ತಿ 5.0, A2DP, ಎಲ್‌ಇ, ಜಿಪಿಎಸ್, ಗ್ಲೋನಾಸ್, ಗೆಲಿಲಿಯೋ ಸ್ಥಾನೀಕರಣ, ಯುಎಸ್‌ಬಿ ಟೈಪ್-ಸಿ 2.0 ಕನೆಕ್ಟಿವಿಟಿ ಬೆಂಬಲ ಪಡೆದಿದೆ.

Best Mobiles in India

English summary
Realme C53 smartphone is now on a great offer. This smartphone has a 128 GB storage option and a dual rear camera option and 50 megapixel main camera.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+