ಜಸ್ಟ್ 7999 ರೂ.! 50MP ಕ್ಯಾಮೆರಾ.. 5000mAh ಬ್ಯಾಟರಿ.. ಇಷ್ಟು ಅಗ್ಗವಾಗಿ ಯಾರೂ ಕೊಡಲ್ಲ.. ಯಾವ ಫೋನ್?
ರಿಯಲ್‌ಮಿ ಮೊಬೈಲ್ ಪ್ರಿಯರಿಗೆ ಇಲ್ಲಿದೆ ಬಿಗ್ ಆಫರ್. ನೀವು, ಈ ಅಗ್ಗದ 5G ಫೋನನ್ನು ಇನ್ನಷ್ಟು ಕಡಿಮೆ ದರದಲ್ಲಿ ನಿಮ್ಮದಾಗಿಸಿಕೊಳ್ಳಬಹುದು. ಹೌದು, ರಿಯಲ್‌ಮಿ C63 5G (Realme C63 5G) ಮೊಬೈಲ್ ಬೆಲೆ ಭಾರಿ ಇಳಿಕೆಯಾಗಿದೆ. ನೀವು 8GB RAM ಹೊಂದಿರುವ ಈ ಸ್ಮಾರ್ಟ್‌ಫೋನ್ ಅನ್ನು ಕೇವಲ 7,999 ರೂ.ಗೆ ಖರೀದಿಸಬಹುದು. ಜೊತೆಗ ಬ್ಯಾಂಕ್ ಆಫರ್, ನೋ ಕಾಸ್ಟ್ ಇಎಂಐ ಮತ್ತು ಎಕ್ಸ್‌ಚೇಂಜ್ ಆಫರ್‌ಗಳ ಲಾಭ ಪಡೆಯಬಹುದು. ಬನ್ನಿ, ಈ ಫೋನಿನ ಮೂಲ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.
ರಿಯಲ್‌ಮಿ C63 5G ಮೊಬೈಲ್ ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಪ್ರಸ್ತುತ, ಈ ಫೋನ್ ಅಗ್ಗದ ಬೆಲೆಗೆ ಮಾರಾಟವಾಗುತ್ತಿದೆ. ಇದು ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಆಕ್ಟಾಕೋರ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಇದು 32MP ಮುಖ್ಯ ಕ್ಯಾಮೆರಾ ಹೊಂದಿದೆ. ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 128GB ಸ್ಟೋರೇಜ್, 5000mAh ಬ್ಯಾಟರಿ, 10W ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ರಿಯಲ್‌ಮಿ C63 5G ಬೆಲೆ ಮತ್ತು ಆಫರ್‌ಗಳು
ರಿಯಲ್‌ಮಿ C63 5G ಮೊಬೈಲ್ 4GB + 64GB ಮತ್ತು 4GB + 128GB ಸ್ಟೋರೇಜ್ ರೂಪಾಂತರಗಳಲ್ಲಿ ಲಭ್ಯವಿದೆ. ಇವುಗಳ ಬೆಲೆ ಕ್ರಮವಾಗಿ 8,499 ರೂ. ಮತ್ತು 8,999 ರೂ. ಆಗಿದೆ. ಈ ಫೋನ್ ಮೇಲೆ ಕಂಪನಿಯು ವಿಶೇಷ ಆಫರ್ ಘೋಷಿಸಿದೆ. ಈ ಸ್ಮಾರ್ಟ್‌ಫೋನ್ ಮೇಲೆ 500 ರೂ.ಗಳ ರಿಯಾಯಿತಿ ನೀಡಲಾಗುತ್ತಿದೆ. ನೀವು 500 ರೂ. ರಿಯಾಯಿತಿಯೊಂದಿಗೆ ಫೋನಿನ 64GB ಸ್ಟೋರೇಜ್ ರೂಪಾಂತರವನ್ನು 7,999 ರೂ.ಗೆ ಮತ್ತು 128GB ಸ್ಟೋರೇಜ್ ರೂಪಾಂತರವನ್ನು 8,499 ರೂ.ಗೆ ನಿಮ್ಮದಾಗಿಸಿಕೊಳ್ಳಬಹುದು. ಈ ಸ್ಮಾರ್ಟ್‌ಫೋನ್ ಲೆದರ್ ಬ್ಲೂ ಮತ್ತು ಜೇಡ್ ಗ್ರೀನ್ ಬಣ್ಣಗಳ ಆಯ್ಕೆಗಳಲ್ಲಿ ಬರುತ್ತದೆ.
ರಿಯಲ್‌ಮಿ C63 5G ವೈಶಿಷ್ಟ್ಯಗಳು
ಡಿಸ್ಲ್ಪೇ ಹೇಗಿದೆ
ರಿಯಲ್‌ಮಿ C63 5G ಮೊಬೈಲ್ 6.67 ಇಂಚಿನ ಹೆಚ್‌ಡಿ ಪ್ಲಸ್ ಡಿಸ್ಲ್ಪೇಯನ್ನು ಹೊಂದಿದೆ. ಇದು 720×1604 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಡಿಸ್ಪ್ಲೇಯು 120Hz ರಿಫ್ರೆಶ್ ದರ, 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 625 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಇದು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ.
ಪ್ರೊಸೆಸರ್ ಯಾವುದು?
ರಿಯಲ್‌ಮಿ C63 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಗ್ರಾಫಿಕ್ಸ್‌ಗಾಗಿ ಇದು ಆರ್ಮ್ ಮಾಲಿ G57 MC2 ಜಿಪಿಯು ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ ರಿಯಲ್‌ಮಿ UI 5.0 ನೊಂದಿಗೆ ಕೆಲಸ ಮಾಡುತ್ತದೆ. ಈ ರಿಯಲ್‌ಮಿ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ. ಇದು 8GB ಡೈನಾಮಿಕ್ RAM ಬೆಂಬಲದೊಂದಿಗೆ ಬರುತ್ತದೆ. ನೀವು 16GB RAM ವರೆಗೆ ಬಳಸಬಹುದು.

ಟ್ರಿಪಲ್ ಕ್ಯಾಮೆರಾ ಸೆಟಪ್
ರಿಯಲ್‌ಮಿ C63 5G ಮೊಬೈಲ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ ಇದು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 32 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿಗಳು ಮತ್ತು ವಿಡಿಯೋ ಕರೆಗಾಗಿ, 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ರಿಯಲ್‌ಮಿ C63 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 10W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಇದು ರಿವರ್ಸ್ ಚಾರ್ಜಿಂಗ್ ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP54 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 3.5 ಎಂಎಂ ಆಡಿಯೋ ಜ್ಯಾಕ್, ಹೈಬ್ರಿಡ್ ಡ್ಯುಯಲ್ ಸಿಮ್, 5G, ಡ್ಯುಯಲ್ 4G VoLTE, ವೈ-ಫೈ, ಬ್ಲೂಟೂತ್ 5.3, ಜಿಪಿಎಸ್5, ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








