Home
Deal of the day

45W ಫಾಸ್ಟ್‌ ಚಾರ್ಜಿಂಗ್‌ ಇರುವ ಈ ಮೊಬೈಲ್‌ ಬೆಲೆಯಲ್ಲಿ ಈಗ ಸಖತ್‌ ಇಳಿಕೆ!

ಆನ್‌ಲೈನ್‌ ಶಾಪಿಂಗ್‌ ಪ್ರಿಯರ ಪ್ರಮುಖ ಅಡ್ಡಾ ಎಂದೇ ಬಿಂಬಿತವಾಗಿರುವ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಏನಾದರೊಂದು ಸ್ಪೆಷಲ್‌ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯುವ ಪ್ರಯತ್ನ ಮಾಡುತ್ತದೆ. ಇದೀಗ ಫ್ಲಿಪ್‌ಕಾರ್ಟ್‌ ರಿಯಲ್‌ಮಿ C63 (Realme C63) ಮೊಬೈಲ್‌ಗೆ ಭರ್ಜರಿ ರಿಯಾಯಿತಿ ಘೋಷಿಸಿದ್ದು, ಅಗ್ಗದ ಫೋನ್‌ ಖರೀದಿಸುವ ಗ್ರಾಹಕರಿಗೆ ದೊಡ್ಡ ಖುಷಿ ನೀಡಿದೆ. ಅಂದಹಾಗೆ ರಿಯಲ್‌ಮಿ C63 ಮೊಬೈಲ್‌ ಎಂಟ್ರಿ ಲೆವೆಲ್ ಫೋನ್‌ ಆದರೂ, ಉತ್ತಮ ಫೀಚರ್ಸ್ ಪಡೆದಿದೆ.

ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಇದೀಗ ರಿಯಲ್‌ಮಿ ಕಂಪನಿಯ ರಿಯಲ್‌ಮಿ C63 ಫೋನ್‌ ಶೇ. 13% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 4 GB RAM + 128 GB ಸ್ಟೋರೇಜ್‌ ವೇರಿಯಂಟ್‌ 8,999ರೂ. ಗಳ ರಿಯಾಯಿತಿ ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ ಆಯ್ದ ಬ್ಯಾಂಕ್‌ ಕಾರ್ಡ್ ಮೂಲಕ ಸಹ ರಿಯಾಯಿತಿ ದೊರೆಯುತ್ತದೆ.

45W ಫಾಸ್ಟ್‌ ಚಾರ್ಜಿಂಗ್‌ ಇರುವ ಈ ಮೊಬೈಲ್‌ ಬೆಲೆಯಲ್ಲಿ ಈಗ ಸಖತ್‌ ಇಳಿಕೆ!

ಅಂದಹಾಗೆ ಈ ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯವನ್ನು ಪಡೆದಿದ್ದು, ಇದರ ಜೊತೆಗೆ 45W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಈ ಫೋನ್‌ ಜೇಡ್ ಗ್ರೀನ್ ಮತ್ತು ಲೆದರ್ ಬ್ಲೂ ಆಯ್ಕೆಯಲ್ಲಿ ಈ ಫೋನ್‌ ಖರೀದಿಗೆ ಲಭ್ಯ ಆಗಲಿದೆ. ಆಕ್ಟಾ ಕೋರ್ Unisoc T612 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಪಡೆದಿದೆ. ಇನ್ನುಳಿದಂತೆ ರಿಯಲ್‌ಮಿ C63 ಮೊಬೈಲ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ರಿಯಲ್‌ಮಿ C63 - ಫೀಚರ್ಸ್‌

ರಿಯಲ್‌ಮಿ C63 ಮೊಬೈಲ್‌ 6.74 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದ್ದು, 90Hz ರಿಫ್ರೆಶ್ ರೇಟ್‌ ಸಹ ಪಡೆದಿದೆ. ಹಾಗೆಯೇ ಅತ್ಯುತ್ತಮ ಬ್ರೈಟ್‌ನೆಸ್‌ ಆಯ್ಕೆ ಪಡೆದುಕೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇಯು ವಾಟರ್‌ ಡ್ರಾಪ್‌ ಕಟೌಟ್ ಪಡೆದುಕೊಂಡಿದೆ.

ರಿಯಲ್‌ಮಿ C63 ಮೊಬೈಲ್‌ ಆಕ್ಟಾ ಕೋರ್ Unisoc T612 ಚಿಪ್‌ಸೆಟ್‌ ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 14 ಓಎಸ್‌ ಸಪೋರ್ಟ್‌ ಇದೆ. ಇದರೊಂದಿಗೆ 4 GB + 128 GB ಆಂತರೀಕ ಸ್ಟೋರೇಜ್‌ ಆಯ್ಕೆ ಅನ್ನು ಈ ಫೋನ್‌ ಪಡೆದಿದೆ.

ರಿಯಲ್‌ಮಿ C63 ಮೊಬೈಲ್‌ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಪಡೆದುಕೊಂಡಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸರ್‌ ಸಾಮರ್ಥ್ಯದಲ್ಲಿ ಇದೆ. ಅಲ್ಲದೇ ದ್ವಿತೀಯ ಕ್ಯಾಮೆರಾವು ಬೇಸಿಕ್ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಇದರೊಂದಿಗೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್ ಸೆಲ್ಫಿ ಶೂಟರ್ ಸೌಲಭ್ಯವನ್ನು ಪಡೆದುಕೊಂಡಿದೆ. ಅಲ್ಲದೇ ಅಗತ್ಯ ಬೇಸಿಕ್ ಎಡಿಟಿಂಗ್ ಆಯ್ಕೆಗಳು ಇವೆ.

ರಿಯಲ್‌ಮಿ C63 ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಪಡೆದುಕೊಂಡಿದ್ದು, ಇದರೊಂದಿಗೆ 45W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್‌ಗೆ ಸೌಲಭ್ಯ ಸಹ ಇದರಲ್ಲಿ ಕಾಣಬಹುದಾಗಿದೆ. ಹಾಗೆಯೇ ರಿಯಲ್‌ಮಿ C63 ಫೋನ್ 5G ವೈ-ಫೈ ಮತ್ತು ಬ್ಲೂಟೂತ್ ಸೌಲಭ್ಯ ಪಡೆದಿದ್ದು, ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP54 ರೇಟಿಂಗ್ ಸೌಲಭ್ಯ ಪಡೆದುಕೊಂಡಿದೆ.

ಅಲ್ಲದೇ ರಿಯಲ್‌ಮಿ C63 ಫೋನ್‌ ಏರ್ ಗೆಸ್ಚರ್‌ಗಳಂತಹ AI ಬೆಂಬಲಿತ ಆಯ್ಕೆಗಳನ್ನು ಕೂಡಾ ಪಡೆದುಕೊಂಡಿದೆ. ಅಂದಹಾಗೆ ರಿಯಲ್‌ಮಿ C63 ಮೊಬೈಲ್‌ ಜೇಡ್ ಗ್ರೀನ್ ಮತ್ತು ಲೆದರ್ ಬ್ಲೂ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಆಗಲಿದೆ.

Best Mobiles in India

English summary
Realme C63 available at Biggest Discount Price Tag. check offer and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+