Home
Deal of the day

ಕೇವಲ 10,999 ರೂ.! 5000mAh ಬ್ಯಾಟರಿ.. 50MP ಕ್ಯಾಮೆರಾ.. ಈ Realme 5G ಫೋನಿನ ಬೆಲೆ ಕುಸಿತ!

ರಿಯಲ್‌ಮಿ ತನ್ನ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ನೀಡಿದೆ. ನೀವು 10,000 ರೂ. ಬಜೆಟ್‌ನಲ್ಲಿ ಅತ್ಯುತ್ತಮ 5G ಫೋನ್ ಖರೀದಿಸಬಹುದು. ಹೌದು, ಕಂಪನಿಯು ತನ್ನ ರಿಯಲ್‌ಮಿ C65 5G (Realme C65 5G) ಬೆಲೆಯನ್ನು ಕಡಿಮೆ ಮಾಡಿದೆ. ನೀವು ಈ ಮೊಬೈಲ್ ಖರೀದಿಸಿದರೆ, 1000 ರೂ. ಡಿಸ್ಕೌಂಟ್ ಸಹ ಲಭ್ಯವಿದೆ. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ರಿಯಲ್‌ಮಿ C65 5G ಮೊಬೈಲ್ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ 6.67 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 6300 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಜೊತೆಗೆ 6GB ಡೈನಾಮಿಕ್ RAM, 5000mAh ಬ್ಯಾಟರಿ ಮತ್ತು 15W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Realme C65 5G ಬೆಲೆ ಇಳಿಕೆ; 5000mAh ಬ್ಯಾಟರಿ, 50MP ಕ್ಯಾಮೆರಾ; ಆಫರ್ ಏನಿದೆ?

ರಿಯಲ್‌ಮಿ C65 5G ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ರಿಯಲ್‌ಮಿ C65 5G ಸ್ಮಾರ್ಟ್‌ಫೋನ್ 6.67 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಎಲ್‌ಸಿಡಿ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 720 x 1604 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಹಾಗೆಯೇ 120Hz ರಿಫ್ರೆಶ್ ದರ ಮತ್ತು 625 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಹೊಂದಿದೆ.

ಪ್ರೊಸೆಸರ್ ಯಾವುದು

ರಿಯಲ್‌ಮಿ C65 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಶನ್ 6300 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 6 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಗ್ರಾಫಿಕ್ಸ್‌ಗಾಗಿ, ಈ ಫೋನ್ ಮಾಲಿ G57 MC2 ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್‌ 14 ಆಧಾರಿತ ರಿಯಲ್‌ಮಿ ಯುಐ 5.0 ಓಎಸ್‌ ಜೊತೆಗೆ ಕೆಲಸ ನಿರ್ವಹಿಸುತ್ತದೆ.

ಸ್ಟೋರೇಜ್ ಆಯ್ಕೆ

ರಿಯಲ್‌ಮಿ C65 5G ಫೋನ್ 6GB ಡೈನಾಮಿಕ್ RAM ತಂತ್ರಜ್ಞಾನ ಹೊಂದಿದೆ. ಇದರಿಂದ RAM ಅನ್ನು 14GB RAM ವರೆಗೆ ಹೆಚ್ಚಿಸಬಹುದು. ಈ ಫೋನ್‌ 128GB ಸ್ಟೋರೇಜ್ ಹೊಂದಿದೆ. ನೀವು ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಸ್ಟೋರೇಜ್ ಹೆಚ್ಚಿಸಬಹುದು.

ಡ್ಯುಯಲ್ ಕ್ಯಾಮೆರಾ ಸೆಟಪ್‌

ರಿಯಲ್‌ಮಿ C65 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು ಎಐ ಸೆಕೆಂಡರಿ ಲೆನ್ಸ್‌ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 8 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

Realme C65 5G ಬೆಲೆ ಇಳಿಕೆ; 5000mAh ಬ್ಯಾಟರಿ, 50MP ಕ್ಯಾಮೆರಾ; ಆಫರ್ ಏನಿದೆ?

ಬೊಂಬಾಟ್ ಬ್ಯಾಟರಿ

ರಿಯಲ್‌ಮಿ C65 5G ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 15W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ರಿಯಲ್‌ಮಿ C65 5G ಬೆಲೆ

4GB RAM + 128GB ಸ್ಟೋರೇಜ್ = 11,499 ರೂ.
ಆಫರ್‌ ಬೆಲೆ = 10,999 ರೂ.

6GB RAM + 128GB ಸ್ಟೋರೇಜ್ = 12,499 ರೂ.
ಆಫರ್ ಬೆಲೆ = 11,999 ರೂ.

8GB RAM + 128GB ಸ್ಟೋರೇಜ್ = 13,999 ರೂ.
ಆಫರ್ ಬೆಲೆ = 11,999 ರೂ.

ರಿಯಲ್‌ಮಿ C65 5G ಫೋನ್ ಮೂರು ಸ್ಟೋರೇಜ್‌ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ಕಂಪನಿಯು ಫೋನಿನ 4GB ಮತ್ತು 6GB ರೂಪಾಂತರಗಳ ಬೆಲೆಯನ್ನು 500 ರೂ. ಮತ್ತು 8GB RAM ಮಾದರಿಯ ಬೆಲೆಯನ್ನು 1,000 ರೂ. ಇಳಿಕೆ ಮಾಡಿದೆ. ಬೆಲೆ ಇಳಿಕೆಯ ಬಳಿಕ ಈ ಫೋನನ್ನು ಕ್ರಮವಾಗಿ 10,999 ರೂ., 11,999 ರೂ. ಮತ್ತು 12,999 ರೂ.ಗೆ ಖರೀದಿಸಬಹುದು.

Best Mobiles in India

English summary
Realme C65 5G price cut in india: Check Price and Specifications and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+