Home
Deal of the day

Realme GT 7 Pro ಬೆಲೆ ಭಾರೀ ಕುಸಿತ! 3000 ರಿಯಾಯಿತಿ.. ಹೊಸ ಬೆಲೆ, ವಿಶೇಷತೆಗಳೇನು?

ರಿಯಲ್‌ಮಿ ಸ್ಮಾರ್ಟ್‌ಫೋನ್‌ಗಳಿಗೆ ಭಾರತದಲ್ಲಿ ಭಾರೀ ಬೇಡಿಕೆಯಿದೆ. ಗ್ರಾಹಕರು ಇಷ್ಟಪಟ್ಟು ರಿಯಲ್‌ಮಿ ಮೊಬೈಲ್‌ಗಳನ್ನು ಖರೀದಿಸುತ್ತಿದ್ದಾರೆ. ಕಂಪನಿಯು ಕಳೆದ ವರ್ಷ ರಿಯಲ್‌ಮಿ GT 7 ಪ್ರೊ (Realme GT 7 Pro) ಫೋನನ್ನು ಬಿಡುಗಡೆಯ ಮಾಡಿತ್ತು. ವಿಶೇಷವೆಂದರೆ, ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾದ ಭಾರತದ ಮೊದಲ ಸ್ಮಾರ್ಟ್‌ಫೋನ್ ಆಗಿದೆ. ಈ ಮೊಬೈಲ್ ಬಿಡುಗಡೆಯಾದ ಕೆಲವೇ ತಿಂಗಳಲ್ಲೇ, ಕಂಪನಿಯು ಬೊಂಬಾಟ್ ಆಫರ್ ಫೋಷಿಸಿದೆ. ನೀವು ಆಫ್‌ಲೈನ್ ಮಾರುಕಟ್ಟೆಯಲ್ಲಿ 3,000 ರೂ.ಗಳ ರಿಯಾಯಿತಿಯೊಂದಿಗೆ ಖರೀದಿಸಬಹುದು. ಈ ಫೋನಿನ ಹೊಸ ಬೆಲೆ, ಆಫರ್ ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.

ರಿಯಲ್‌ಮಿ GT 7 ಪ್ರೊ ಮೊಬೈಲ್ ಎರಡು ಸ್ಟೋರೇಜ್‌ ಆಯ್ಕೆಗಳಲ್ಲಿ ಬಿಡುಗಡೆ ಮಾಡಿದೆ. ನೀವು ಮಾರ್ಸ್ ಆರೆಂಜ್ ಮತ್ತು ಗ್ಯಾಲಕ್ಸಿ ಗ್ರೇ ಬಣ್ಣಗಳಲ್ಲಿ ಖರೀದಿಸಬಹುದು. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಟ್ರಿಪಲ್ ಕ್ಯಾಮೆರಾ ಲಭ್ಯವಿದೆ. ಇದ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನೊಂದಿದೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.78 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 512GB ಸ್ಟೋರೇಜ್, 5800mAh ಬ್ಯಾಟರಿ ಮತ್ತು 120W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಮಾರಾಟವಾಗುತ್ತಿದೆ.

Realme GT 7 Pro ಬೆಲೆ ಕುಸಿತ! 3000 ರಿಯಾಯಿತಿ.. ಹೊಸ ಬೆಲೆ, ವಿಶೇಷತೆಗಳೇನು?

ರಿಯಲ್‌ಮಿ GT 7 ಪ್ರೊ ಆಫರ್ ಬೆಲೆ

12GB RAM + 256GB ಸ್ಟೋರೇಜ್ ಬೆಲೆ = 59,999 ರೂ.
ಆಫರ್ ಬೆಲೆ = 56,999 ರೂ.

16GB RAM + 512GB ಸ್ಟೋರೇಜ್ ಬೆಲೆ = 65,999 ರೂ.
ಆಫರ್ ಬೆಲೆ = 62,999 ರೂ.

ರಿಯಲ್‌ಮಿ GT 7 ಪ್ರೊ ಫೋನಿನ ಎಲ್ಲಾ ರೂಪಾಂತರಗಳ ಬೆಲೆಯನ್ನು 3,000 ರೂ. ಕಡಿಮೆಗೆ ಮಾರಾಟ ಮಾಡಲಾಗಿದೆ. ಈ ಆಫರ್ ಮಾರ್ಚ್ 31 ರವರೆಗೆ ಮಾತ್ರ ಲಭ್ಯವಿರುತ್ತದೆ. 12GB RAM ರೂಪಾಂತರವು 3,000 ರೂ.ಗಳ ರಿಯಾಯಿತಿ ಮತ್ತು 16GB RAM ರೂಪಾಂತರವು 6,000 ರೂ.ಗಳ ರಿಯಾಯಿತಿಯೊಂದಿಗೆ ಮಾರಾಟವಾಗುತ್ತಿದೆ. ನೀವು ಈ ಎರಡೂ ರೂಪಾಂತರಗಳನ್ನು ಕ್ರಮವಾಗಿ 56,999 ಮತ್ತು 62,999 ರೂ.ಗಳಿಗೆ ಖರೀದಿಸಬಹುದು.

ರಿಯಲ್‌ಮಿ GT 7 ಪ್ರೊ ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ರಿಯಲ್‌ಮಿ GT 7 ಪ್ರೊ ಮೊಬೈಲ್ 6.78 ಇಂಚಿನ 1.5k ಡಿಸ್ಪ್ಲೇ ಹೊಂದಿದೆ. ಇದು ಪಂಚ್ ಹೋಲ್ ಶೈಲಿಯ ಕ್ವಾಡ್ ಕರ್ವ್ಡ್ ಡಿಸ್ಪ್ಲೇ ಆಗಿದೆ. ಈ ಡಿಸ್ಪ್ಲೇಯು 2,780 x 1,264 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಹಾಗೆಯೇ 120Hz ರಿಫ್ರೆಶ್ ದರ ಮತ್ತು 6500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಮೊಬೈಲ್‌ನಲ್ಲಿ ಅಲ್ಟ್ರಾಸಾನಿಕ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಸಹ ಹೊಂದಿದೆ.

ಸ್ನಾಪ್‌ಡ್ರಾಗನ್ ಪ್ರೊಸೆಸರ್

ರಿಯಲ್‌ಮಿ GT 7 ಪ್ರೊ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ ಹೊಂದಿದೆ. ಇದನ್ನು 3 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಗ್ರಾಫಿಕ್ಸ್‌ಗಾಗಿ, ಈ ಫೋನ್ ಅಡ್ರಿನೊ 830 ಜಿಪಿಯು ಹೊಂದಿದೆ. ಈ ಫೋನ್ 16GB RAM ಹೊಂದಿದೆ. ಇದು 512GB ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ. ಮೂಲ ರೂಪಾಂತರವು 12GB RAM + 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

ಟ್ರಿಪಲ್ ಕ್ಯಾಮೆರಾ ಸೆಟಪ್

ರಿಯಲ್‌ಮಿ GT7 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಸೋನಿ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬೊಂಬಾಟ್ ಬ್ಯಾಟರಿ ಬ್ಯಾಕಪ್

ರಿಯಲ್‌ಮಿ GT 7 ಪ್ರೊ ಮೊಬೈಲ್ 5800mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು, 120W ವೇಗದ ಚಾರ್ಜಿಂಗ್ ಸೌಲಭ್ಯ ನೀಡಲಾಗಿದೆ. ಕೇವಲ 11 ನಿಮಿಷಗಳಲ್ಲಿ ಈ ಬ್ಯಾಟರಿಯನ್ನು ಶೇ.50 ರಷ್ಟು ಚಾರ್ಜ್ ಮಾಡಬಹುದು.

ಇತರೆ ವೈಶಿಷ್ಟ್ಯಗಳು

ರಿಯಲ್‌ಮಿ GT 7 ಪ್ರೊ ಸ್ಮಾರ್ಟ್‌ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ ವೈ-ಫೈ, ಬ್ಲೂಟೂತ್ 5.4 ಮತ್ತು ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಹೊಂದಿದೆ.

Best Mobiles in India

English summary
Realme GT7 Pro available with Rs 3000 discount in india: know new price, offers and specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+