Realme 7th Anniversary: Realme GT 7 Pro ಬೆಲೆ ಭಾರೀ ಇಳಿಕೆ.. ಏನೆಲ್ಲಾ ಆಫರ್ ಲಭ್ಯ? ವಿಶೇಷತೆಗಳೇನು?
ರಿಯಲ್‌ಮಿ ತನ್ನ 7ನೇ ವಾರ್ಷಿಕೋತ್ಸವದ (Realme 7th Anniversary) ಸಂಭ್ರಮದಲ್ಲಿದೆ. ಇದನ್ನು ರಿಯಲ್‌ಮಿ ವಾರ್ಷಿಕೋತ್ಸವ ಮಾರಾಟದೊಂದಿಗೆ ಮತ್ತಷ್ಟು ಮೆರಗುಗೊಳಿಸಿದೆ. ಹೌದು, ರಿಯಲ್‌ಮಿ ಈಗಾಗಲೇ ಭಾರತದಲ್ಲಿ 100 ಮಿಲಿಯನ್‌ಗಿಂತಲೂ ಹೆಚ್ಚು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಈ ಪೈಕಿ ಕಳೆದ ವರ್ಷ ರಿಯಲ್‌ಮಿ GT 7 ಪ್ರೊ (Realme GT 7 Pro) ಫೋನಿಗೆ ಭಾರೀ ರಿಯಾಯಿತಿ ಘೋಷಿಸಿದೆ. ಈ ಆಫರ್ ತ್ವರಿತ ಬ್ಯಾಂಕ್ ರಿಯಾಯಿತಿಗಳು, ಪ್ಲಾಟ್‌ಫಾರ್ಮ್ ಕೂಪನ್‌ಗಳು ಮತ್ತು ಕ್ರೆಡಿಟ್ ಕಾರ್ಡ್ ಇಎಂಐ ಆಯ್ಕೆಗಳ ಮೂಲಕ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಲಭ್ಯವಿದೆ. ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳ ಬಗ್ಗೆ ಇಲ್ಲಿದೆ ಮಾಹಿತಿ.
ರಿಯಲ್‌ಮಿ GT 7 ಪ್ರೊ ಫೋನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ಇದು ಮಾರ್ಸ್ ಆರೆಂಜ್ ಮತ್ತು ಗ್ಯಾಲಕ್ಸಿ ಗ್ರೇ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಫೋನಿನ ವಿಶೇಷತೆಗಳೆಂದರೆ, ಇದು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50MP + 50MP + 16MP ಟ್ರಿಪಲ್ ಕ್ಯಾಮೆರಾ ಅಳವಡಿಸಲಾಗಿದೆ. ಈ ಮೊಬೈಲ್ 6.78 ಇಂಚಿನ ಡಿಸ್ಪ್ಲೇಯೊಂದಿಗೆ ಬರುತ್ತದೆ. ಇದರೊಂದಿಗೆ 512GB ಸ್ಟೋರೇಜ್ ಮತ್ತು 5800mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳಿವೆ. ಈ ಫೋನಿಗೆ ಯಾವೆಲ್ಲಾ ಆಫರ್ ಲಭ್ಯವಿದೆ ಎನ್ನುವುದನ್ನುತಿಳಿಯಲು ಮುಂದೆ ಓದಿ.

ರಿಯಲ್‌ಮಿ GT 7 ಪ್ರೊ ಹೊಸ ಬೆಲೆ
ರಿಯಲ್‌ಮಿ GT 7 ಪ್ರೊ ಮೊಬೈಲ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. 12GB RAM + 256GB ಸ್ಟೋರೇಜ್ ಹೊಂದಿರುವ ಫೋನನ್ನು 59,999 ರೂ.ಗೆ ಬಿಡುಗಡೆ ಮಾಡಲಾಗಿದೆ. 16GB RAM + 512GB ಸ್ಟೋರೇಜ್‌ನ ಮೊಬೈಲ್ ಅನ್ನು 65,999 ರೂ.ಗೆ ಪರಿಚಯಿಸಲಾಗಿತ್ತು. ಪ್ರಸ್ತುತ ರಿಯಲ್‌ಮಿ ವಾರ್ಷಿಕೋತ್ಸವ ಮಾರಾಟದಲ್ಲಿ (Realme 7th Anniversary sale) ಫೋನಿನ 12GB RAM ರೂಪಾಂತರದ ಬೆಲೆ 3,750 ರೂ. ಇಳಿಕೆಯಾಗಿದೆ. ಇದಲ್ಲದೆ ಹೆಚ್ಚುವರಿಯಾಗಿ 1,250 ರೂ. ಬ್ಯಾಂಕ್ ಆಫರ್ ಸಹ ಲಭ್ಯವಿದೆ. ಈ ರಿಯಾಯಿತಿಯೊಂದಿಗೆ ನೀವು, ಕೇವಲ 49,999 ರೂ.ಗೆ ಈ ಫೋನನ್ನು ಖರೀದಿಸಬಹುದು. ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ಹೊಸ ಬೆಲೆಯಲ್ಲಿ ಈ ಫೋನನ್ನು ಕೊಳ್ಳಬಹುದು.
ರಿಯಲ್‌ಮಿ GT 7 ಪ್ರೊ ಫೀಚರ್ಸ್
ರಿಯಲ್‌ಮಿ GT 7 ಪ್ರೊ ಸ್ಮಾರ್ಟ್‌ಫೋನ್ 6.78 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು 2780 x 1264 ಪಿಕ್ಸೆಲ್‌ಗಳ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಇದರೊಂದಿಗೆ 120Hz ರಿಫ್ರೆಶ್ ದರ ಮತ್ತು 6500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಫೋನ್ ಅಲ್ಟ್ರಾಸಾನಿಕ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಸಹ ಹೊಂದಿದೆ. ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್ ಹೊಂದಿದೆ. ಇದನ್ನು 3 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಗ್ರಾಫಿಕ್ಸ್‌ಗಾಗಿ, ಈ ಫೋನ್ ಅಡ್ರಿನೊ 830 ಜಿಪಿಯು ಹೊಂದಿದೆ.

ರಿಯಲ್‌ಮಿ GT7 ಪ್ರೊ ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಅಳವಡಿಸಲಾಗಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ. ಈ ಸ್ಮಾರ್ಟ್‌ಫೋನ್ 5800mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು, 120W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ನೀವು ಕೇವಲ 11 ನಿಮಿಷಗಳಲ್ಲಿ ಶೇ.50 ರಷ್ಟು ಬ್ಯಾಟರಿಯನ್ನು ಚಾರ್ಜ್ ಮಾಡಬಹುದು.
ರಿಯಲ್‌ಮಿ GT 7 ಪ್ರೊ ಮೊಬೈಲ್ 16GB RAM ಹೊಂದಿದೆ. ಇದು 512GB ಸ್ಟೋರೇಜ್ ಆಯ್ಕೆಯೊಂದಿಗೆ ಬರುತ್ತದೆ. ಮೂಲ ರೂಪಾಂತರವು 12GB RAM + 256GB ಸ್ಟೋರೇಜ್ ಒಳಗೊಂಡಿದೆ. ಈ ಫೋನ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ವೈ-ಫೈ, ಬ್ಲೂಟೂತ್ 5.4 ಮತ್ತು ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








