ಕೇವಲ 14,498 ರೂ.! 50MP ಕ್ಯಾಮೆರಾ.. 5000mAh ಬ್ಯಾಟರಿ.. ಈ Realme ಫೋನಿನ ಬೆಲೆ ಭಾರೀ ಇಳಿಕೆ!
ಅಮೆಜಾನ್ ತನ್ನ ಗ್ರಾಹಕರಿಗೆ ಒಂದಿಲ್ಲೊಂದು ಆಫರ್‌ಗಳನ್ನು ನೀಡುತ್ತಲೇ ಇರುತ್ತದೆ. ಇದೀಗ, ಹೊಸ ವರ್ಷ ಸಮೀಪದಲ್ಲಿ ಮೊಬೈಲ್ ಪ್ರಿಯರಿಗೆ ಸಿಹಿಸುದ್ದಿ ನೀಡಿದೆ. ಹೌದು, ರಿಯಲ್‌ಮಿ ನಾರ್ಜೊ 70 ಟರ್ಬೊ 5G (Realme Narzo 70 Turbo 5G) ಫೋನಿನ ಖರೀದಿ ಮೇಲೆ ಭಾರೀ ಡಿಸ್ಕೌಂಟ್ ನೀಡುತ್ತಿದೆ. ಪ್ರಸ್ತುತ ಅಮೆಜಾನ್ ಇಂಡಿಯಾ ವೆಬ್‌ಸೈಟ್‌ನಲ್ಲಿ 15,000 ರೂ. ಗಿಂತ ಕಡಿಮೆ ಬೆಲೆಯಲ್ಲಿ ಖರೀದಿಸಲು ಲಭ್ಯವಿದೆ. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್‌ಗಳು ಮತ್ತು ವೈಶಿಷ್ಟ್ಯಗಳನ್ನು ತಿಳಿಯೋಣ.
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನ್ ಕಳೆದ ಸೆಪ್ಟೆಂಬರ್ 2024 ರಲ್ಲಿ ಬಿಡುಗಡೆ ಮಾಡಲಾಗಿತ್ತು. ಇದು ಕಂಪನಿಯ 'Narzo' ಸರಣಿಯ ಹೊಸ 5G ಫೋನ್ ಆಗಿದೆ. ಇದು ಮಿಡಿಯಾಟೆಕ್ ಡೈಮೆನ್ಸಿಟಿ 7300 ಎನರ್ಜಿ ಪ್ರೊಸೆಸರ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಹಾಗೆಯೇ 5000mAh ಸಾಮರ್ಥ್ಯದ ಬ್ಯಾಟರಿ ಸಹ ಹೊಂದಿದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇ ಮತ್ತು 45W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ರಿಯಲ್‌ಮಿ ನಾರ್ಜೊ 70 ಟರ್ಬೊ 5G ಬೆಲೆ
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನಿನ ಮೂಲ ಮಾದರಿ 6GB RAM + 128GB ಸ್ಟೋರೇಜ್ ಆಯ್ಕೆಯನ್ನು 16,999 ರೂ.ಗೆ ಬಿಡುಗಡೆ ಮಾಡಲಾಗಿತ್ತು. ಪ್ರಸ್ತುತ, ಈ ಫೋನಿನ ಪರ್ಪಲ್ ಬಣ್ಣ ಮಾದರಿಯ ಮೇಲೆ 2,500 ರೂ. ಕೂಪನ್ ರಿಯಾಯಿತಿ ನೀಡಲಾಗುತ್ತಿದೆ. ರಿಯಾಯಿತಿಯೊಂದಿಗೆ ನೀವು ಕೇವಲ 14,498 ರೂ.ಗೆ ಖರೀದಿಸಬಹುದು. ಕಂಪನಿಯು ನೋ ಕಾಸ್ಟ್ ಇಎಂಐ ಸೌಲಭ್ಯ ಸಹ ನೀಡುತ್ತಿದೆ. ನೀವು, ಅಮೆಜಾನ್ ಸೈಟ್‌ನಲ್ಲಿ ಈ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು.
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೀಚರ್ಸ್
ಡಿಸ್ಪ್ಲೇ ಮಾಹಿತಿ
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಸ್ಮಾರ್ಟ್‌ಫೋನ್ 6.67 ಇಂಚಿನ ಸ್ಯಾಮ್‌ಸಂಗ್ E4 ಓಎಲ್‌ಇಡಿ ಡಿಸ್ಪ್ಲೇ ಹೊಂದಿದೆ. ಇದು 120 Hz ರಿಫ್ರೆಶ್ ದರ, 180Hz ಟಚ್ ಸ್ಯಾಂಪ್ಲಿಂಗ್ ದರದ ಬೆಂಬಲ ಪಡೆದಿದೆ. ಜೊತೆಗೆ, 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಮತ್ತು AG DT Star 2 ಗಾಜಿನ ರಕ್ಷಣೆಯನ್ನು ಸಹ ಹೊಂದಿದೆ.
ಮೀಡಿಯಾಟೆಕ್ ಪ್ರೊಸೆಸರ್
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಎನರ್ಜಿ 5G ಪ್ರೊಸೆಸರ್ ಅನ್ನು ಹೊಂದಿದೆ. ಇದು 4nm ಆಕ್ಟಾ ಕೋರ್ ಪ್ರೊಸೆಸರ್ ಆಗಿದೆ. ಹಾಗೆಯೇ ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ ರಿಯಲ್‌ಮಿ ಯುಐ 5.0 ನಲ್ಲಿ ಕೆಲಸ ಮಾಡುತ್ತದೆ. ಈ ಟರ್ಬೊ ಫೋನ್ 750,000 AnTuTu ಬೆಂಚ್‌ಮಾರ್ಕ್ ಅಂಕಗಳನ್ನು ಪಡೆದಿದೆ.
ಡ್ಯುಯಲ್ ಕ್ಯಾಮೆರಾ ಸೆಟಪ್
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಹಾಗೆಯೇ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಪಡೆದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೊನಿನಲ್ಲಿ 16 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾ ಲಭ್ಯವಿದೆ.
5000mAh ಸಾಮರ್ಥ್ಯದ ಬ್ಯಾಟರಿ
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದನ್ನು ವೇಗವಾಗಿ ಚಾರ್ಜ್ ಮಾಡಲು, 45W ಅಲ್ಟ್ರಾ ಫಾಸ್ಟ್ ಚಾರ್ಜಿಂಗ್ ಬೆಂಬಲ ಒದಗಿಸಲಾಗಿದೆ. ಕೇವಲ 30 ನಿಮಿಷಗಳಲ್ಲಿ ಶೇ.50 ರಷ್ಟು ಚಾರ್ಜ್ ಆಗುತ್ತದೆ. ಈ ಟರ್ಬೊ 5G ಮೊಬೈಲ್ ನೀರು ನಿರೋಧಕ IP65 ರೇಟಿಂಗ್, ಮಳೆ ನೀರಿನ ಟಚ್ ವೈಶಿಷ್ಟ್ಯ ಹೊಂದಿದೆ. ಜೊತೆಗೆ, ವೈ-ಫೈ, ಬ್ಲೂಟೂತ್ 5.4, ಡ್ಯುಯಲ್ ಸ್ಟಿರಿಯೊ, ಸ್ಪೀಕರ್, ಏರ್ ಮತ್ತು ಗೆಸ್ಚರ್, ಫ್ಲ್ಯಾಷ್ ಕ್ಯಾಪ್ಸುಲ್, ರೀಡಿಂಗ್ ಮೋಡ್ ಸೇರಿದಂತೆ ಹಲವು ಎಐ ಫೀಚರ್ಸ್‌ಗಳನ್ನು ಹೊಂದಿದೆ.


Click it and Unblock the Notifications








