Home
Deal of the day

ಗೇಮಿಂಗ್‌ ಪ್ರಿಯರಿಗೆ ಸಿಹಿಸುದ್ದಿ! 50MP ಕ್ಯಾಮೆರಾ.. 5000mAh ಬ್ಯಾಟರಿ.. 2,000 ರಿಯಾಯಿತಿ.. ಈ ಫೋನಿನ ಬೆಲೆ ಭಾರೀ ಇಳಿಕೆ

ರಿಯಲ್‌ಮಿ ಸ್ಮಾರ್ಟ್‌ಫೋರ್ಟ್‌ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಾರೆ. ಹೀಗಾಗಿ, ಭಾರತದಲ್ಲಿ ರಿಯಲ್‌ಮಿ ಮೊಬೈಲ್‌ಗಳಿಗೆ ಹೆಚ್ಚು ಬೇಡಿಕೆ ಇದೆ. ರಿಯಲ್‌ಮಿ ನಾರ್ಜೊ 70 ಟರ್ಬೊ 5G (Realme Narzo 70 Turbo 5G) ಫೋನ್ ಸಹ ಹಲವು ಉತ್ತಮ ಗಣಮಟ್ಟದ ಫೀಚರ್ಸ್‌ಗಳಿಂದ ಭಾರೀ ಸದ್ದು ಮಾಡಿದೆ. ಪ್ರಸ್ತುತ, ಈ ಸ್ಮಾರ್ಟ್‌ಫೋನ್ ಖರೀದಿ ಮೇಲೆ ಭರ್ಜರಿ ರಿಯಾಯಿತಿ ಲಭ್ಯವಿದೆ. ಈ ಮೂಲಕ ರಿಯಲ್‌ಮಿ ಪ್ರಿಯರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ನೀವು 15,000 ರೂ. ಗಿಂತ ಕಡಿಮೆ ಬೆಲೆಗೆ ಹೊಸ ಫೋನ್ ಖರೀದಿಸಲು ಬಯಸಿದರೆ, ಇದು ನಿಮಗೆ ಉತ್ತಮ ಆಯ್ಕೆಯಾಗಿದೆ. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನನ್ನು ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆ ಆಗಿತ್ತು. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಇದು ಮಿಡಿಯಾಟೆಕ್ ಡೈಮೆನ್ಸಿಟಿ 7300 ಎನರ್ಜಿ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 5000mAh ಬ್ಯಾಟರಿ ಮತ್ತು 45W ಫಾಸ್ಟ್ ಚಾರ್ಜಿಂಗ್‌ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಸ್ತುತ ಈ ಫೋನನ್ನು ಬಿಡುಗಡೆ ಬೆಲೆಗಿಂತ ಕಡಿಮೆಗೆ ಖರೀದಿಸಬಹುದು.

2,000 ಅಗ್ಗ! 50MP ಕ್ಯಾಮೆರಾ, 5000mAh ಬ್ಯಾಟರಿ; ಕಡಿಮೆ ಬೆಲೆಗೆ ಗೇಮಿಂಗ್ ಫೋನ್

ರಿಯಲ್‌ಮಿ ನಾರ್ಜೊ 70 ಟರ್ಬೊ 5G ಬೆಲೆ

6GB RAM + 128GB ಸ್ಟೋರೇಜ್ = 16,999 ರೂ.
ಆಫರ್‌ ಬೆಲೆ = 14,999 ರೂ.

8GB RAM + 128GB ಸ್ಟೋರೇಜ್ = 17,999 ರೂ.
ಆಫರ್‌ ಬೆಲೆ = 15,999 ರೂ.

12GB RAM + 256GB ಸ್ಟೋರೇಜ್ = 20,999 ರೂ.
ಆಫರ್‌ ಬೆಲೆ = 18,999 ರೂ.

ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನಿನ 6GB RAM + 128GB ಸ್ಟೋರೇಜ್‌ ರೂಪಾಂತರವನ್ನು 16,999 ರೂ.ಗೆ ಪರಿಚಯಿಸಲಾಗಿತ್ತು. ಪ್ರಸ್ತುತ, ಈ ಫೋನಿನ ಖರೀದಿ ಮೇಲೆ 2,000 ರೂ. ರಿಯಾಯಿತಿ ಲಭ್ಯವಿದೆ. ನೀವು ಕೇವಲ 14,999 ರೂ.ಗೆ ಖರೀದಿಸಬಹುದು. 8GB RAM + 128GB ಸ್ಟೋರೇಜ್ ಆಯ್ಕೆಯನ್ನು 17,999 ರೂ.ಗೆ ಬಿಡುಗಡೆಯಾಗಿತ್ತು. ಪ್ರಸ್ತುತ ಇದು 15,999 ರೂ.ಗೆ ಮಾರಾಟವಾಗುತ್ತಿದೆ.

ಹಾಗೆಯೇ 12GB RAM + 256GB ಸ್ಟೋರೇಜ್ ಆಯ್ಕೆಯು 20,999 ರೂ.ಗೆ ಬಿಡುಗಡೆಯಾಗಿತ್ತು. ನೀವು ಆಫರ್‌ನೊಂದಿಗೆ 18,999 ರೂ.ಗೆ ಖರೀದಿಸಬಹುದು. ಈ ರಿಯಾಯಿತಿಯ ಲಾಭ ಪಡೆಯಲು ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನ ಅಗತ್ಯವಿಲ್ಲ. ನೀವು ಕಂಪನಿಯ ವೆಬ್‌ಸೈಟ್ ಮತ್ತು ಶಾಪಿಂಗ್ ಸೈಟ್ ಅಮೆಜಾನ್‌ನಲ್ಲಿ (Amazon) ಈ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು. ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಈ ಫೋನ್‌ ಇನ್ನು ಕಡಿಮೆ ಬೆಲೆಗೆ ಕೊಳ್ಳಬಹುದು.

ರಿಯಲ್‌ಮಿ ನಾರ್ಜೊ 70 ಟರ್ಬೊ 5G ವೈಶಿಷ್ಟ್ಯಗಳು

ಡಿಸ್ಪ್ಲೇ ಹೇಗಿದೆ

ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನ್ 6.67 ಇಂಚಿನ ಸ್ಯಾಮ್‌ಸಂಗ್ E4 ಓಎಲ್‌ಇಡಿ ಡಿಸ್ಪ್ಲೇ ಹೊಂದಿದೆ. ಇದು 120 Hz ರಿಫ್ರೆಶ್ ದರ, 180Hz ಟಚ್ ಸ್ಯಾಂಪ್ಲಿಂಗ್ ದರದ ಬೆಂಬಲ ಪಡೆದಿದೆ. ಜೊತೆಗೆ, 1200 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಮತ್ತು AG DT Star 2 ಗಾಜಿನ ರಕ್ಷಣೆ ಹೊಂದಿದೆ.

ಪ್ರೊಸೆಸರ್‌ ಯಾವುದು?

ರಿಯಲ್‌ಮಿ ನಾರ್ಜೊ 70 ಟರ್ಬೊ 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 7300 ಎನರ್ಜಿ 5G ಪ್ರೊಸೆಸರ್‌ ಹೊಂದಿದೆ. ಇದು 4nm ಆಕ್ಟಾಕೋರ್ ಪ್ರೊಸೆಸರ್‌ ಆಗಿದೆ. ಈ ಮೊಬೈಲ್ ಆಂಡ್ರಾಯ್ಡ್‌ 14 ಆಧಾರಿತ ರಿಯಲ್‌ಮಿ ಯುಐ 5.0 ಓಎಸ್‌ನಲ್ಲಿ ಕೆಲಸ ಮಾಡುತ್ತದೆ.

ಎರಡು ಅದ್ಭುತ ಕ್ಯಾಮೆರಾಗಳು

ರಿಯಲ್‌ಮಿ ನಾರ್ಜೊ 70 ಟರ್ಬೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಈ ಫೊನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್‌ ಕ್ಯಾಮೆರಾ ಲಭ್ಯವಿದೆ.

ಅದ್ಭುತ ಬ್ಯಾಟರಿ ಬ್ಯಾಕಪ್

ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ಅಲ್ಟ್ರಾ ಫಾಸ್ಟ್ ಚಾರ್ಜಿಂಗ್‌ ಬೆಂಬಲ ಒದಗಿಸಲಾಗಿದೆ. ನೀವು ಕೇವಲ 30 ನಿಮಿಷಗಳಲ್ಲಿ ಶೇ.50 ರಷ್ಟು ಚಾರ್ಜ್ ಮಾಡಬಹುದು.

ಇತರೆ ವೈಶಿಷ್ಟ್ಯಗಳು

ರಿಯಲ್‌ಮಿ ನಾರ್ಜೊ 70 ಟರ್ಬೊ 5G ಮೊಬೈಲ್‌ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP65 ರೇಟಿಂಗ್ ಪಡೆದಿದೆ. ಹಾಗೆಯೇ ಮಳೆ ನೀರಿನ ಟಚ್ ವೈಶಿಷ್ಟ್ಯ ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ವೈ-ಫೈ, ಬ್ಲೂಟೂತ್ 5.4, ಡ್ಯುಯಲ್ ಸ್ಟಿರಿಯೊ, ಸ್ಪೀಕರ್, ಏರ್ ಮತ್ತು ಗೆಸ್ಚರ್, ಫ್ಲ್ಯಾಷ್ ಕ್ಯಾಪ್ಸುಲ್, ರೀಡಿಂಗ್ ಮೋಡ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
Realme NARZO 70 Turbo 5G Available With Rs 2000 discount in India: check new price, offers, availability, specs and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+