2500 ಅಗ್ಗ! 5000mAh ಬ್ಯಾಟರಿ.. 50MP ಕ್ಯಾಮೆರಾ.. ಈ 5G ಗೇಮಿಂಗ್ ಫೋನಿನ ಬೆಲೆ ಇಳಿಕೆ
ಗಣರಾಜ್ಯೋತ್ಸವದ ಪ್ರಯುಕ್ತ ರಿಯಲ್‌ಮಿ ವಿಶೇಷ ಮಾರಾಟವನ್ನು ಪ್ರಾರಂಭಿಸಿದೆ. ಈ ಸೇಲ್‌ನಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳ ಮೇಲೆ ರಿಯಾಯಿತಿ ನೀಡಲಾಗುತ್ತಿದೆ. ಈ ಮಾರಾಟದ ಭಾಗವಾಗಿ, ರಿಯಲ್‌ಮಿನ ಅಧಿಕೃತ ವೆಬ್‌ಸೈಟ್, ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲಿ ಡಿಸ್ಕೌಂಟ್ ಬೆಲೆಯಲ್ಲಿ ರಿಯಲ್‌ಮಿ ಮೊಬೈಲ್‌ಗಳನ್ನು ಮತ್ತು ಇತರೆ ಉತ್ಪನ್ನಗಳನ್ನು ಖರದಿಸಬಹುದು. ನೀವು ಸ್ಮಾರ್ಟ್‌ಫೋನ್‌ಗಳ ಮೇಲೆ 10,000 ರೂ. ರಿಯಾಯಿತಿ ಪಡೆಯಬಹುದು. ಈ ರಿಯಲ್‌ಮಿ ವಿಶೇಷ ಮಾರಾಟದ ಪ್ರಯುಕ್ತ (Realme Republic Day Sale 2025) ರಿಯಲ್‌ಮಿ ನಾರ್ಜೊ 70 ಟರ್ಬೊ 5G (Realme Narzo 70 Turbo 5G) ಫೋನನ್ನು ಭಾರೀ ರಿಯಾಯಿತಿ ಬೆಲೆಯಲ್ಲಿ ಖರೀದಿಸಬಹುದು.
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು. ಇದು ಕಂಪನಿಯ Narzo ಸರಣಿಯ ಹೊಸ 5G ಫೋನ್ ಆಗಿದೆ. ಇದು ಮಿಡಿಯಾಟೆಕ್ ಡೈಮೆನ್ಸಿಟಿ 7300 ಎನರ್ಜಿ ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಲಭ್ಯವಿದೆ. ಜೊತೆಗೆ 5000mAh ಬ್ಯಾಟರಿ ಹೊಂದಿದೆ. ಈ ಮೊಬೈಲ್ 6.67 ಇಂಚಿನ ಡಿಸ್ಪ್ಲೇ ಮತ್ತು 45W ಫಾಸ್ಟ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬನ್ನಿ, ಈ ಫೋನಿನ ಹೊಸ ಬೆಲೆ ಮತ್ತು ಆಫರ್‌ಗಳನ್ನು ತಿಳಿಯೋಣ.

ರಿಯಲ್‌ಮಿ ನಾರ್ಜೊ 70 ಟರ್ಬೊ 5G ಬೆಲೆ
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನ್ ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ 6GB RAM + 128GB ಸ್ಟೋರೇಜ್ ಆಯ್ಕೆ ಬೆಲೆ 16,999 ರೂ. ಆಗಿದೆ. 8GB RAM + 128GB ಸ್ಟೋರೇಜ್ ರೂಪಾಂತರವು 17,998 ರೂ.ಗೆ ಲಭ್ಯವಿದೆ. ಮತ್ತು 12GB RAM + 256GB ಸ್ಟೋರೇಜ್ ಮಾದರಿಯನ್ನು 20,998 ರೂ.ಗೆ ಮಾರಾಟ ಮಾಡಲಾಗುತ್ತಿದೆ. ರಿಯಲ್‌ಮಿ ರಿಪಬ್ಲಿಕ್ ಡೇ ಮಾರಾಟದಲ್ಲಿ 2,500 ರಿಯಾಯಿತಿ ಪಡೆಯಬಹುದು. ಇದು ಟರ್ಬೊ ಗ್ರೀನ್, ಟರ್ಬೊ ಹಳದಿ ಮತ್ತು ಟರ್ಬೊ ಪರ್ಪಲ್ ಬಣ್ಣಗಳಲ್ಲಿ ಲಭ್ಯವಿದೆ.
ರಿಯಲ್‌ಮಿ ನಾರ್ಜೊ 70 ಟರ್ಬೊ 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನ್ 6.67 ಇಂಚಿನ ಓಎಲ್‌ಇಡಿ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ, 180Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 1200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಹಾಗೆಯೇ ಈ ಡಿಸ್ಪ್ಲೇಯು AG DT Star 2 ಗಾಜಿನ ರಕ್ಷಣೆಯನ್ನು ಹೊಂದಿದೆ.
ಪ್ರೊಸೆಸರ್ ಯಾವುದು?
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 7300 ಎನರ್ಜಿ 5G ಪ್ರೊಸೆಸರ್ ಹೊಂದಿದೆ. ಈ ಫೋನ್ ಆಂಡ್ರಾಯ್ಡ್ 14 ಆಧಾರಿತ ರಿಯಲ್‌ಮಿ ಯುಐ 5.0 ನಲ್ಲಿ ಕೆಲಸ ಮಾಡುತ್ತದೆ. ಇದು 6GB RAM, 8GB RAM ಮತ್ತು 12GB RAM ಹೊಂದಿದೆ. ಜೊತೆಗೆ 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.

ಡ್ಯುಯಲ್ ಕ್ಯಾಮೆರಾ ಸೆಟಪ್
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಈ ಫೊನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.
ಪವರ್ ಫುಲ್ ಬ್ಯಾಟರಿ
ರಿಯಲ್‌ಮಿ ನಾರ್ಜೊ 70 ಟರ್ಬೊ 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ವೇಗವಾಗಿ ಚಾರ್ಜ್ ಮಾಡಲು, 45W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಮೊಬೈಲ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP65 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ವೈ-ಫೈ, ಬ್ಲೂಟೂತ್ 5.4, ಡ್ಯುಯಲ್ ಸ್ಟಿರಿಯೊ, ಸ್ಪೀಕರ್, ಏರ್ ಮತ್ತು ಗೆಸ್ಚರ್, ಫ್ಲ್ಯಾಷ್ ಕ್ಯಾಪ್ಸುಲ್, ರೀಡಿಂಗ್ ಮೋಡ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








