Home
Deal of the day

ರಿಯಲ್‌ಮಿ ಸಂಸ್ಥೆಯ ಈ ಮೊಬೈಲ್‌ಗೆ ಶೇ 31% ರಷ್ಟು ನೇರ ಡಿಸ್ಕೌಂಟ್‌!

ಪ್ರಮುಖ ಇ ಕಾಮರ್ಸ್‌ ತಾಣ ಅಮೆಜಾನ್‌ (Amazon) ಈಗಾಗಲೇ ಆನ್‌ಲೈನ್ ಶಾಪಿಂಗ್‌ ಪ್ರಿಯ ಗ್ರಾಹಕರಿಗೆ ಹಾಟ್‌ ಫೇವರೇಟ್‌ ಆಗಿದೆ. ಪ್ರಮುಖವಾಗಿ ಈ ಆನ್‌ಲೈನ್‌ ಶಾಪಿಂಗ್ ತಾಣವು ಸ್ಮಾರ್ಟ್‌ಫೊನ್‌ಗಳಿಗೆ ಅಧಿಕ ರಿಯಾಯಿತಿ ಕೊಡುಗೆ ಘೋಷಿಸುವ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯುವ ಪ್ರಯತ್ನ ಮಾಡುತ್ತದೆ. ಸದ್ಯ ರಿಯಲ್‌ಮಿ ಸಂಸ್ಥೆಯು ರಿಯಲ್‌ಮಿ ನಾರ್ಜೊ N55 (realme narzo N55) ಫೋನ್‌ ಭಾರೀ ಬೆಲೆ ಇಳಿಕೆ ದರದಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಫೋನ್ ಮೀಡಿಯಾಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ ಸೌಲಭ್ಯ ಪಡೆದುಕೊಂಡಿದೆ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ರಿಯಲ್‌ಮಿ ನಾರ್ಜೊ N55 (realme narzo N55) ಫೋನ್‌ ಶೇ. 31% ರಷ್ಟು ನೇರ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 6GB + 128GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 10,380ರೂ. ಗಳ ಕೊಡುಗೆಯ ಪ್ರೈಸ್‌ ಟ್ಯಾಗ್‌ನಲ್ಲಿ ಖರೀದಿ ಮಾಡಲು ಅವಕಾಶ ಇದೆ. ಇದಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಮತ್ತಷ್ಟು ಡಿಸ್ಕೌಂಟ್‌ ಸಹ ಪಡೆದುಕೊಳ್ಳಬಹುದಾಗಿದೆ.

ಇನ್ನು ಈ ಫೋನ್‌ ಬ್ಲ್ಯಾಕ್‌ ಹಾಗೂ ಬ್ಲೂ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದ್ದು, ಈ ಫೋನಿನ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಅಲ್ಲದೇ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗಾದರೇ ರಿಯಲ್‌ಮಿ ನಾರ್ಜೊ N55 ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ರಿಯಲ್‌ಮಿ ಸಂಸ್ಥೆಯ ಈ ಮೊಬೈಲ್‌ಗೆ ಶೇ 31% ರಷ್ಟು ನೇರ ಡಿಸ್ಕೌಂಟ್‌!

ರಿಯಲ್‌ಮಿ ನಾರ್ಜೊ N55 ಫೀಚರ್ಸ್‌ ಹೀಗಿವೆ

ರಿಯಲ್‌ಮಿ ನಾರ್ಜೊ N55 ಮೊಬೈಲ್‌ 6.72 ಇಂಚಿನ IPS LCD ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಸಪೋರ್ಟ್‌ ಪಡೆದುಕೊಂಡಿದೆ. ಇನ್ನು ಸ್ಮಾರ್ಟ್‌ಫೋನ್‌ ಮಿನಿ ಕ್ಯಾಪ್ಸುಲ್‌ ಫೀಚರ್ಸ್‌ ಅನ್ನು ಹೊಂದಿದ್ದು, ಇದರ ಜೊತೆಗೆ ಕ್ಯಾಮರಾ ಪಂಚ್-ಹೋಲ್ ಕಟೌಟ್ ಸೌಲಭ್ಯ ಕಾಣಬಹುದಾಗಿದೆ.

ರಿಯಲ್‌ಮಿ ನಾರ್ಜೊ N55 ಮೊಬೈಲ್‌ ಮೀಡಿಯಾ ಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ ಪವರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಆಧಾರಿತ Realme UI ಔಟ್-ಆಫ್-ದಿ-ಬಾಕ್ಸ್ ನಲ್ಲಿ ರನ್‌ ಆಗಲಿದೆ. ಹಾಗೆಯೇ 4 GB + 64 GB ಮತ್ತು 6 GB RAM + 128 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ಎರಡು ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯ.

ರಿಯಲ್‌ಮಿ ನಾರ್ಜೊ N55 ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಇನ್ನು ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.

ರಿಯಲ್‌ಮಿ ನಾರ್ಜೊ N55 ಮೊಬೈಲ್‌ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಈ ಫೋನ್‌ ಇದು 33W ಸೂಪರ್‌ವೂಕ್‌ ವೇಗದ ಚಾರ್ಜಿಂಗ್‌ ಅನ್ನು ಸಪೋರ್ಟ್ ಮಾಡುತ್ತದೆ. ಇದರಿಂದ ಈ ಸ್ಮಾರ್ಟ್‌ಫೋನ್‌ ಕೇವಲ 29 ನಿಮಿಷಗಳಲ್ಲಿ 0 ದಿಂದ 50%ವರೆಗೆ ಚಾರ್ಜ್ ಮಾಡಬಹುದು ಎನ್ನಲಾಗಿದೆ.

Best Mobiles in India

English summary
Realme Narzo N55 received 31% discount in India. check out price, specifications, offer and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+