ನಿಮ್ಮ ಹೆಂಡತಿಗೆ ಗಿಫ್ಟ್ ಕೊಡಬಹುದು.. ಜಸ್ಟ್ 6,498 ರೂ.! ಬೊಂಬಾಟ್ ಆಫರ್.. ಯಾವ ಫೋನ್?
ರಿಯಲ್‌ಮಿ ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ತನ್ನ ಅಭಿಮಾನಿಗಳಿಗೆ ವಿಶೇಷ ಆಫರ್ ನೀಡಿದೆ. ನಿಮ್ಮ ಪತ್ನಿ ಅಥವಾ ಪ್ರೇಯಸಿಗೆ ಸ್ಮಾರ್ಟ್‌ಫೋನ್ ಗಿಫ್ಟ್ ನೀಡಲು ಬಯಸಿದರೆ, ಈ ಅವಕಾಶ ಮಿಸ್ ಮಾಡಿಕೊಳ್ಳಬೇಡಿ. ಹೌದು, ಕಂಪನಿಯು ರಿಯಲ್‌ಮಿ ನಾರ್ಜೊ N61 (Realme Narzo N61) ಫೋನಿನ ಮೇಲೆ ಆಕರ್ಷಕ ರಿಯಾಯಿತಿ ಘೋಷಿಸಿದೆ. ನೀವು 7,000 ರೂ.ಗಿಂತ ಕಡಿಮೆ ಬೆಲೆಗೆ ಹೊಸ ಮೊಬೈಲ್ ಖರೀದಿಸಲು ಬಯಸಿದರೆ, ರಿಯಲ್‌ಮಿ ನಾರ್ಜೊ N61 ಉತ್ತಮ ಆಯ್ಕೆಯಾಗಿದೆ. ಈ ಆಫರ್‌ಗಳ ಲಾಭ ಪಡೆಯಲು ಯಾವುದೇ ಬ್ಯಾಂಕ್, ಕ್ರೆಡಿಟ್ ಕಾರ್ಡ್ ಅಗತ್ಯವಿಲ್ಲ.
ಅಮೆಜಾನ್‌ನಲ್ಲಿ ರಿಯಲ್‌ಮಿ ನಾರ್ಜೊ N61 ಮೊಬೈಲ್ ಅಗ್ಗದ ಬೆಲೆಗೆ ಮಾರಾಟವಾಗುತ್ತಿದೆ. ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಮುಖ್ಯ ಮತ್ತು 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು ಯುನಿಸಾಕ್ T612 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.74 ಡಿಸ್ಪ್ಲೇ ಹೊಂದಿದೆ. ಜೊತೆಗೆ 6GB RAM + 128GB ಸ್ಟೊರೇಜ್, 5000mAh ಬ್ಯಾಟರಿ ಮತ್ತು 10W ಫಾಸ್ಟ್ ಚಾರ್ಜಿಂಗ್ ಒಳಗೊಂಡಿದೆ. ಈ ಫೋನನ್ನು 1,000 ರೂ.ಗಳ ಫ್ಲಾಟ್ ರಿಯಾಯಿತಿಯೊಂದಿಗೆ ಖರೀದಿಸಬಹುದು.

ರಿಯಲ್‌ಮಿ ನಾರ್ಜೊ N61 ರಿಯಾಯಿತಿ ಬೆಲೆ
ರಿಯಲ್‌ಮಿ ನಾರ್ಜೊ N61 ಸ್ಮಾರ್ಟ್‌ಫೋನ್ ಎರಡು ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ 4GB RAM + 64GB ಸ್ಟೋರೇಜ್ ವೇರಿಯಂಟ್ ಬೆಲೆ 7,499 ರೂ. ಆಗಿದೆ. ಹಾಗೆಯೇ 6GB RAM + 128GB ಸ್ಟೊರೇಜ್ ರೂಪಾಂತರವು 8,499 ರೂ.ಗೆ ಬಿಡುಗಡೆಯಾಗಿದೆ. ಪ್ರಸ್ತುತ, ಕಂಪನಿಯು ಎರಡು ಸ್ಟೋರೇಜ್ ಆಯ್ಕೆಗಳ ಮೇಲೆ ರಿಯಾಯಿತಿ ಘೋಷಿಸಿದೆ. ನೀವು 1,000 ರೂ.ಗಳ ಕೂಪನ್ ಡಿಸ್ಕೌಂಟ್ ಪಡೆಯಬಹುದು.
ಪ್ರಸ್ತುತ, ಈ ಫೋನಿನ 128GB ಸ್ಟೋರೇಜ್ ರೂಪಾಂತರವು ಕೇವಲ 7,499 ರೂ.ಗೆ ಲಭ್ಯವಿದೆ. 64GB ಸ್ಟೋರೇಜ್ ಹೊಂದಿರುವ ಮೊಬೈಲ್ ಖರೀದಿ ಮೇಲೆ 1,000 ರೂ. ಕೂಪನ್ ರಿಯಾಯಿತಿ ಸಿಗುತ್ತದೆ. ಇದು ಕೇವಲ 6,499 ರೂ.ಗೆ ಮಾರಾಟವಾಗುತ್ತಿದೆ. ವಿಷಯವೆಂದರೆ, ಅಮೆಜಾನ್‌ನಲ್ಲಿ ಈ ಫೋನ್ 1 ರೂ.ಗೆ ಕಡಿಮೆ ಬೆಲೆಗೆ ಮಾರಾಟವಾಗುತ್ತಿದೆ. ನೀವು ಕ್ರಮವಾಗಿ 6,498 ರೂ. ಮತ್ತು 7,498 ರೂ.ಗೆ ಖರೀದಿಸಬಹುದು. ಈ ಸ್ಮಾರ್ಟ್‌ಫೋನ್ ವಾಯೇಜ್ ಬ್ಲೂ ಮತ್ತು ಮಾರ್ಬಲ್ ಬ್ಲಾಕ್ ಬಣ್ಣಗಳಲ್ಲಿ ಮಾರಾಟವಾಗುತ್ತಿದೆ.
ರಿಯಲ್‌ಮಿ ನಾರ್ಜೊ N61 ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ರಿಯಲ್‌ಮಿ ನಾರ್ಜೊ N61 ಸ್ಮಾರ್ಟ್‌ಫೋನ್ 6.74 ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಎಚ್‌ಡಿ ಪ್ಲಸ್ ವಾಟರ್‌ಡ್ರಾಪ್ ನಾಚ್ ಡಿಸ್ಪ್ಲೇ ಆಗಿದೆ. 1600 x 720 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 90Hz ರಿಫ್ರೆಶ್ ದರ, 180Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 560 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ.
ಶಕ್ತಿಯುತ ಪ್ರೊಸೆಸರ್
ರಿಯಲ್‌ಮಿ ನಾರ್ಜೊ N61 ಮೊಬೈಲ್ ಯುನಿಸಾಕ್ T612 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 14 ಆಧಾರಿತ ರಿಯಲ್‌ಮಿ ಯುಐ (Realme UI) ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಈ ಫೋನ್ ಮಾಲಿ G57 ಜಿಪಿಯು ಸಹ ಹೊಂದಿದೆ.

RAM ಮತ್ತು ಸ್ಟೋರೇಜ್
ರಿಯಲ್‌ಮಿ ನಾರ್ಜೊ N61 ಫೋನ್ 6GB ಡೈನಾಮಿಕ್ RAM ತಂತ್ರಜ್ಞಾನ ಹೊಂದಿದೆ. ನೀವು 6GB ವರ್ಚುವಲ್ RAM ಅನ್ನು 6GB ಭೌತಿಕ RAMಗೆ ಸೇರಿಸುವ ಮೂಲಕ ಒಟ್ಟು 12GB RAM ಬಳಸಬಹುದು. ಹಾಗೆಯೇ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 2TB ವರೆಗೆ ಸ್ಟೋರೇಜ್ ಹೆಚ್ಚಿಸಬಹುದು.
32MP ಸೂಪರ್ ಕ್ಲಿಯರ್ ಕ್ಯಾಮೆರಾ
ರಿಯಲ್‌ಮಿ ನಾರ್ಜೊ N61 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 32 ಮೆಗಾಪಿಕ್ಸೆಲ್ ಸೂಪರ್ ಕ್ಲಿಯರ್ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಸ್ಮಾರ್ಟ್‌ಫೋನ್ 5 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ.
ಹೇಗಿದೆ ಬ್ಯಾಟರಿ ಬ್ಯಾಕಪ್ ಹೇಗಿದೆ
ರಿಯಲ್‌ಮಿ ನಾರ್ಜೊ N61 ಮೊಬೈಲ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದನ್ನು ಚಾರ್ಜ್ ಮಾಡಲು, 10W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಫೋನ್ ಎಐ (AI) ಬೂಸ್ಟ್ ಎಂಜಿನ್ ಹೊಂದಿದೆ. ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP54 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5mm ಹೆಡ್‌ಫೋನ್ ಜ್ಯಾಕ್, ಯುಎಸ್‌ಬಿ ಟೈಪ್ ಸಿ ಪೋರ್ಟ್, ಬ್ಲೂಟೂತ್ 5.0 ಮತ್ತು 5GHz ವೈ-ಫೈ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.


Click it and Unblock the Notifications








