Home
Deal of the day

ಬೊಂಬಾಟ್‌ ಆಫರ್‌! 50MP ಎಐ ಕ್ಯಾಮೆರಾ.. ಈ Realme ಫೋನಿನ ಬೆಲೆ ಭಾರೀ ಇಳಿಕೆ

ಪ್ರಮುಖ ಇ-ಕಾಮರ್ಸ್‌ ವೆಬ್‌ಸೈಟ್‌ಗಳ ಪೈಕಿ ಒಂದಾಗಿರುವ ಫ್ಲಿಪ್‌ಕಾರ್ಟ್‌ನಲ್ಲಿ ( Flipkart ) ಏನಾದರೊಂದು ಸೇಲ್‌ ಮೂಲಕ ಮೊಬೈಲ್‌ಗಳಿಗೆ ಡಿಸ್ಕೌಂಟ್‌ ಘೋಷಿಸುತ್ತಾ ಮುನ್ನಡೆದಿದೆ. ಆ ಪೈಕಿ ಸದ್ಯ ಬಿಗ್ ಸೇವಿಂಗ್‌ ಡೇಸ್‌ ಮಾರಾಟದಲ್ಲಿ ರಿಯಲ್‌ಮಿ P1 ಸ್ಪೀಡ್‌ 5G (realme P1 Speed 5G) ಮೊಬೈಲ್‌ ಬೆಲೆ ಇಳಿಕೆ ಮಾಡಿದೆ. ಇದು ಕಡಿಮೆ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರ ಮುಖದಲ್ಲಿ ಮಂದಹಾಸ ತಂದಿದೆ.

ಹೌದು, ಫ್ಲಿಪ್‌ಕಾರ್ಟ್‌ ನಲ್ಲಿ ರಿಯಲ್‌ಮಿ ಸಂಸ್ಥೆಯ ರಿಯಲ್‌ಮಿ P1 ಸ್ಪೀಡ್‌ 5G (realme P1 Speed 5G) ಮೊಬೈಲ್‌ ಶೇ. 14% ರಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಈ ಮೊಬೈಲ್‌ನ 8GB RAM + 128GB ಸ್ಟೋರೇಜ್‌ನ ವೇರಿಯಂಟ್‌ ಅನ್ನು ಖರೀದಿದಾರರು 14,999 ರೂ.ಗಳ ಕೊಡುಗೆಯ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿ ಮಾಡಬಹುದು. ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಸಾಮರ್ಥ್ಯದ ಪಡೆದಿದೆ.

ಬೊಂಬಾಟ್‌ ಆಫರ್‌! 50MP ಎಐ ಕ್ಯಾಮೆರಾ.. ಈ Realme ಫೋನಿನ ಬೆಲೆ ಭಾರೀ ಇಳಿಕೆ

ಇನ್ನು ರಿಯಲ್‌ಮಿಯ ಈ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಪ್ರೊಸೆಸರ್‌ ಪವರ್‌ ಪಡೆದಿದೆ. ಹಾಗೆಯೇ 8GB + 128GB ಮತ್ತು 12GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಹಾಗಾದರೆ ಈ ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ ಬ್ನನಿರಿ. ಮುಂದೆ ಓದಿರಿ.

ರಿಯಲ್‌ಮಿ P1 ಸ್ಪೀಡ್‌ 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ರಿಯಲ್‌ಮಿ P1 ಸ್ಪೀಡ್ 5G ಮೊಬೈಲ್ 6.67 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 2400 ×1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌, 120Hz ರಿಫ್ರೆಶ್‌ ದರ ರೇಟ್‌ ಮತ್ತು 2000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಜೊತೆಗೆ ರೇನ್ ವಾಟರ್‌ ಸ್ಮಾರ್ಟ್‌ ಟಚ್‌ ಹಾಗೂ ಪಾಂಡಾ ಗ್ಲಾಸ್‌ ರಕ್ಷಣೆ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ರಿಯಲ್‌ಮಿ P1 ಸ್ಪೀಡ್ 5G ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7300 ಆಕ್ಟಾಕೋರ್ ಪ್ರೊಸೆಸರ್‌ ಹೊಂದಿದೆ. ಈ ಪ್ರೊಸೆಸರ್‌ ಅನ್ನು 4 ನ್ಯಾನೋಮೀಟರ್‌ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಇದು ಗ್ರಾಫಿಕ್ಸ್‌ಗಾಗಿ, ಮಾಲಿ G615 MC2 ಜಿಪಿಯು ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್‌ 14 ಓಎಸ್‌ನೊಂದಿಗೆ ಕೆಲಸ ನಿರ್ವಹಿಸಲಿದೆ.

ಸ್ಟೋರೇಜ್‌ ಆಯ್ಕೆ

ರಿಯಲ್‌ಮಿ P1 ಸ್ಪೀಡ್ 5G ಸ್ಮಾರ್ಟ್‌ಫೋನ್ 26GB RAM ಹೊಂದಿದೆ. ಹಾಗೆಯೇ 256GB ಸ್ಟೋರೇಜ್‌ ಆಯ್ಕೆ ಹೊಂದಿದೆ. ಈ ಫೋನ್ 14GB ವರೆಗೆ ಡೈನಾಮಿಕ್ RAM ಬೆಂಬಲ ಸಹ ಹೊಂದಿದೆ. ಇದು 8GB + 128GB ಮತ್ತು 12GB + 256GB ಸ್ಟೋರೇಜ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.

ಬೊಂಬಾಟ್‌ ಆಫರ್‌! 50MP ಎಐ ಕ್ಯಾಮೆರಾ.. ಈ Realme ಫೋನಿನ ಬೆಲೆ ಭಾರೀ ಇಳಿಕೆ

ಕ್ಯಾಮೆರಾ ಸೆಟಪ್

ರಿಯಲ್‌ಮಿ P1 ಸ್ಪೀಡ್ 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ ಎಲ್ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ಎಐ ಪ್ರಾಥಮಿಕ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ಕಂಪನಿಯು ರಿಯಲ್‌ಮಿ P1 ಸ್ಪೀಡ್ 5G ಫೋನನ್ನು 5000mAh ಸಾಮರ್ಥ್ಯ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡಿದೆ. ಈ ಬ್ಯಾಟರಿಯನ್ನು ಚಾರ್ಜ್‌ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ರಿಯಲ್‌ಮಿ P1 ಸ್ಪೀಡ್ 5G ಫೋನ್ ನೀರು ಮತ್ತು ಧೂಳಿನಿಂದ ರಕ್ಷಣೆಗಾಗಿ IP65 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು ಡ್ಯುಯಲ್ ಸಿಮ್ 5G, ವೈ-ಫೈ 6, ಬ್ಲೂಟೂತ್ 5.4, 5G, 4G, ಜಿಪಿಎಸ್‌ ಮತ್ತು ಯುಎಸ್‌ಬಿ ಟೈಪ್ ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
realme P1 Speed 5G Available With 14 percent discount on Flipkart Big Saving Days 2024: Check offer Price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+