ಸ್ಪೆಷಲ್ ಆಫರ್: 4000 ರಿಯಾಯಿತಿ ಘೋಷಣೆ.. 6000mAh ಬ್ಯಾಟರಿ.. 512GB ಸ್ಟೋರೇಜ್; ಯಾವ ಫೋನ್?
ರಿಯಲ್‌ಮಿ ತನ್ನ ಅಭಿಮಾಮಿಗಳಿಗೆ ಹೊಸ ಆಫರ್ ಘೋಷಿಸಿದೆ. ಕಂಪನಿಯು ರಿಯಲ್‌ಮಿ ಪಿ-ಸೀರೀಸ್ ಕಾರ್ನಿವಲ್ ಸೇಲ್ (realme P-Series Carnival sale) ಅನ್ನು ಪ್ರಾರಂಭಿಸಿದೆ. ಈ ಮಾರಾಟದಲ್ಲಿ ಕಂಪನಿಯ ಬಣ್ಣ ಬದಲಾಯಿಸುವ 5G ಫೋನನ್ನು 4 ಸಾವಿರ ರೂ.ಗಳ ರಿಯಾಯಿತಿಯಲ್ಲಿ ಖರೀದಿಸಬಹುದು. ಹೌದು, ರಿಯಲ್‌ಮಿ P3 ಪ್ರೊ 5G (realme P3 Pro 5G) ಬಿಡುಗಡೆ ಬೆಲೆಗಿಂತ ಕಡಿಮೆಗೆ ಮಾರಾಟವಾಗುತ್ತಿದೆ. ಬನ್ನಿ, ಈ ರಿಯಲ್‌ಮಿ P3 ಪ್ರೊ 5G ಫೋನಿನ ಮೂಲ ಬೆಲೆ, ಆಫರ್ ಮತ್ತು ವೈಶಿಷ್ಟ್ಯಗಳ ಬಗ್ಗೆ ತಿಳಿಯೋಣ.
ರಿಯಲ್‌ಮಿ P3 ಪ್ರೊ 5G ಸ್ಮಾರ್ಟ್‌ಫೋನ್ ಬೆಲೆ 20 ಸಾವಿರ ರೂ.ಗಳಿಗಿಂತ ಕಡಿಮೆ ಇದೆ. ನೀವು ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಖರೀದಿಸಬಹುದು. ಈ ಫೋನಿನ ವಿಶೇಷತೆಗಳೆಂದರೆ, ಈ ಮೊಬೈಲ್ 6.83 ಡಿಸ್ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸರ್ ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 6000mAh ಬ್ಯಾಟರಿ ಮತ್ತು 80W ವೇಗದ ಚಾರ್ಜಿಂಗ್, 12GB RAM + 256GB ಸ್ಟೋರೇಜ್ ಆಯ್ಕೆ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ರಿಯಲ್‌ಮಿ P3 ಪ್ರೊ 5G ಆಫರ್ ಬೆಲೆ
8GB RAM + 128GB ಸ್ಟೋರೇಜ್ ಬೆಲೆ = 23,999 ರೂ.
ಹೊಸ ಬೆಲೆ = 19,999 ರೂ.
8GB RAM + 256GB ಸ್ಟೋರೇಜ್ ಬೆಲೆ = 24,999 ರೂ.
ಹೊಸ ಬೆಲೆ = 20,999 ರೂ.
12GB RAM + 512GB ಸ್ಟೋರೇಜ್ ಬೆಲೆ = 26,999 ರೂ.
ಹೊಸ ಬೆಲೆ = 22,999 ರೂ.
ರಿಯಲ್‌ಮಿ P3 ಪ್ರೊ 5G ಫೋನಿಗೆ ಕಂಪನಿಯು 4,000 ರೂ.ಗಳ ಬ್ಯಾಂಕ್ ಆಫರ್ ನೀಡುತ್ತಿದೆ. ರಿಯಲ್‌ಮಿ ಪಿ-ಸೀರೀಸ್ ಕಾರ್ನಿವಲ್ (realme P-Series Carnival sale) ಕಂಪನಿಯು ಆಯೋಜಿಸಿರುವ ಸೀಮಿತ ಅವಧಿಯ ಸೇಲ್ ಆಗಿದೆ. ಇದು ಏಪ್ರಿಲ್ 24 ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ, ಫೋನಿನ ಎಲ್ಲಾ 8GB ಮತ್ತು 12GB RAM ರೂಪಾಂತರಗಳನ್ನು ರಿಯಾಯಿತಿಯೊಂದಿಗೆ ಖರೀದಿಸಬಹುದು. ಈ ಆಫರ್ ಕಂಪನಿಯ ವೆಬ್‌ಸೈಟ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಿದೆ.
ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೇಲೆ 4,000 ರೂ. ಡಿಸ್ಕೌಂಟ್ ಲಭ್ಯವಿದೆ. ಫೆಡರಲ್ ಬ್ಯಾಂಕ್, ಬ್ಯಾಂಕ್ ಆಫರ್ ಬರೋಡಾ, ಡಿಬಿಎಸ್, ಐಡಿಎಫ್‌ಸಿ, ಎಚ್‌ಡಿಎಫ್‌ಸಿ, ಎಸ್‌ಬಿಐ, ಐಸಿಐಸಿಐ, ಆಕ್ಸಿಸ್ ಬ್ಯಾಂಕ್ ಗ್ರಾಹಕರು ಈ ರಿಯಾಯಿತಿ ಪಡೆಯಬಹುದು. ಇದರೊಂದಿಗೆ 3 ತಿಂಗಳ ನೋ ಕಾಸ್ಟ್ ಇಎಂಐ ಸಹ ಲಭ್ಯವಿದೆ. ಇನ್ನು 3,000 ರೂ.ಗಳ ಎಕ್ಸ್‌ಚೇಂಜ್ ಆಫರ್ ಸಹ ಪಡೆಯಬಹುದು. ಈ ಮೊಬೈಲ್ ನೆಬ್ಯುಲಾ ಗ್ಲೋ, ಗ್ಯಾಲಕ್ಸಿ ಪರ್ಪಲ್ ಮತ್ತು ಸ್ಯಾಟರ್ನ್ ಬ್ರೌನ್ ಬಣ್ಣಗಳಲ್ಲಿ ಖರೀದಿಸಬಹುದು.

ರಿಯಲ್‌ಮಿ P3 ಪ್ರೊ 5G ವೈಶಿಷ್ಟ್ಯಗಳು
ರಿಯಲ್‌ಮಿ P3 ಪ್ರೊ 5G ಸ್ಮಾರ್ಟ್‌ಫೋನ್ 6.83 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ ಮತ್ತು 1,500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಮೊಬೈಲ್ ವೆಟ್ ಟಚ್ ತಂತ್ರಜ್ಞಾನ ಹೊಂದಿದ್ದು, ನೀವು ಒದ್ದೆಯಾದ ಕೈಗಳಿಂದಲೂ ಫೋನನ್ನು ಬಳಸಬಹುದು. ಈ ರಿಯಲ್‌ಮಿ ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7S Gen 3 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಓಎಸ್‌ನೊಂದಿಗೆ ಕೆಲಸ ನಿರ್ವಹಿಸುತ್ತದೆ. ಈ ರಿಯಲ್‌ಮಿ 5G ಸ್ಮಾರ್ಟ್‌ಫೋನ್ ಎರಡು RAM ರೂಪಾಂತರಗಳನ್ನು ಹೊಂದಿದೆ. ಇದು 8GB RAM ಮತ್ತು 12GB RAM ಹೊಂದಿದೆ. ಈ ಫೋನ್ 128GB ಮತ್ತು 256GB ಸ್ಟೋರೇಜ್ ಆಯ್ಕೆ ಒಳಗೊಂಡಿದೆ.
ರಿಯಲ್‌ಮಿ P3 ಪ್ರೊ 5G ಮೊಬೈಲ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ. ಈ ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬರುತ್ತದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 80W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ. ಈ ಫೋನ್ 39 ನಿಮಿಷಗಳನ್ನು ಶೇ.20 ರಿಂದ ಶೇ.100 ರಷ್ಟು ಸಂಪೂರ್ಣ ಚಾರ್ಜ್ ಆಗುತ್ತದೆ.
ರಿಯಲ್‌ಮಿ P3 ಪ್ರೊ 5G ಫೋನ್ ನೀರು ಮತ್ತು ಧೂಳಿನಿಂದ ರಕ್ಷಣೆಗಾಗಿ IP66, IP68 ಮತ್ತು IP69 ರೇಟಿಂಗ್ ಪಡೆದಿದೆ. ಈ ಸ್ಮಾರ್ಟ್‌ಫೋನ್ ಹಲವು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಹೊಂದಿದೆ. ಇದು ಎಐ (AI) ಎರೇಸ್, ಬೆಸ್ಟ್ ಫೇಸ್, ಮೋಷನ್ ಡಿಬಲ್ರ್, ಎಐ ರೆಕಾರ್ಡಿಂಗ್ ಸಾರಾಂಶ, ಎಐ ರೈಟರ್, ಗೂಗಲ್ ಸರ್ಕಲ್ ಟು ಸರ್ಚ್ ಮತ್ತು ಎಐ ರಿಪ್ಲೈ ಸೇರಿದಂತೆ ಮುಂತಾದ ಫೀಚರ್ಸ್ ಒಳಗೊಂಡಿದೆ.
ರಿಯಲ್‌ಮಿ P3x 5G ಬೆಲೆ
ರಿಯಲ್‌ಮಿ P3x 5G ಫೋನಿನ 6GB RAM + 128GB ಸ್ಟೋರೇಜ್ ರೂಪಾಂತರವು 13,999 ರೂ.ಗೆ ಬಿಡುಗಡೆಯಾಗಿದೆ. ಹಾಗೆಯೇ 8GB RAM + 128GB ಸ್ಟೋರೇಜ್ ಮಾದರಿಯ ಬೆಲೆ 14,999 ರೂ. ಆಗಿದೆ. ಇದು ಅತ್ಯಂತ ಕೈಗೆಟುಕುವ 5G ಫೋನ್ ಆಗಿದೆ. ಇದು ಮಿಡ್‌ನೈಟ್ ಬ್ಲೂ, ಲೂನಾರ್ ಸಿಲ್ವರ್ ಮತ್ತು ಸ್ಟೆಲ್ಲರ್ ಪಿಂಕ್ ಬಣ್ಣಗಳಲ್ಲಿ ಬಿಡುಗಡೆಯಾಗಿದೆ.

ರಿಯಲ್‌ಮಿ P3x 5G ವೈಶಿಷ್ಟ್ಯಗಳು
ರಿಯಲ್‌ಮಿ P3x 5G ಫೋನ್ 6.83 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ ಮತ್ತು 1500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಮೊಬೈಲ್ ವೆಟ್ ಟಚ್ ತಂತ್ರಜ್ಞಾನ ಹೊಂದಿದೆ. ಈ ಫೋನ್ ಮೀಡಿಯಾಟೆಕ್‌ನ ಡೈಮೆನ್ಸಿಟಿ 6400 ಪ್ರೊಸೆಸರ್ ಹೊಂದಿದೆ. ಇದು ಪ್ರೊಸೆಸರ್‌ನಲ್ಲಿ ಬಿಡುಗಡೆಯಾದ ವಿಶ್ವದ ಮೊದಲ ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನ್ 6GB RAM ಮತ್ತು 8GB RAM ಹೊಂದಿದೆ.
ರಿಯಲ್‌ಮಿ P3x 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದು ಎಲ್‌ಇಡಿ ಫ್ಲ್ಯಾಷ್‌ನೊಂದಿಗೆ ಬರುತ್ತದೆ. ಹಾಗೆಯೇ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಇದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಸಹ ಹೊಂದಿದೆ. ಈ 5G ಮೊಬೈಲ್ 6000mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆಯಾಗಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯವನ್ನು ಒದಗಿಸಲಾಗಿದೆ. ಈ ಫೋನ್ OTG ಮತ್ತು ರಿವರ್ಸ್ ಚಾರ್ಜಿಂಗ್ ತಂತ್ರಜ್ಞಾನ ಸಹ ಹೊಂದಿದೆ.
ವಿಶೇಷ ಪ್ರಕಟಣೆ
ಈ ವೆಬ್‌ಸೈಟ್‌ನಲ್ಲಿ ಅಂಗಸಂಸ್ಥೆ ಲಿಂಕ್‌ಗಳ ಮೂಲಕ ಮಾಡಿದ ಖರೀದಿಗಳಿಂದ ಗಿಜ್‌ಬಾಟ್ ಸಣ್ಣ ಕಮಿಷನ್ ಗಳಿಸುತ್ತದೆ. ಆದರೆ, ನಮ್ಮ ಉತ್ಪನ್ನಗಳ ಶಿಫಾರಸುಗಳು ಪ್ರಾಮಾಣಿಕ ಅಭಿಪ್ರಾಯಗಳು ಮತ್ತು ವೈಯಕ್ತಿಕ ಅನುಭವವನ್ನು ಆಧರಿಸಿವೆ. ಇದಕ್ಕಾಗಿ ನೀವು ಯಾವುದೇ ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಿಲ್ಲ.


Click it and Unblock the Notifications








