ಯದ್ವಾತದ್ವಾ ಇಳಿಕೆ! 7000 ಡಿಸ್ಕೌಂಟ್.. ಕಮ್ಮಿ ಬೆಲೆಗೆ Realme 5G ಫೋನ್.. ಈಗ ಬಿಟ್ಟರೆ ಮತ್ತೆ ಸಿಗಲ್ಲ
ರಿಯಲ್‌ಮಿ ಪ್ರಿಯರೇ.. ಈ ಅದ್ಭುತ ಅವಕಾಶ ಬಿಡಬೇಡಿ! ಬರೋಬ್ಬರಿ 7,000 ರೂ. ರಿಯಾಯಿತಿ.. ಕಡಿಮೆ ಬೆಲೆಗೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿರುವ 5G ಮಾರಾಟ. ಹೌದು, ಕಂಪನಿಯು ರಿಯಲ್‌ಮಿ GT 6T 5G (Realme GT 6T 5G) ಫೋನಿನ ಬೆಲೆಯನ್ನು ಭಾರೀ ಇಳಿಕೆ ಮಾಡಿದೆ. ಪ್ರಸ್ತುತ ನಡೆಯುತ್ತಿರುವ ರಿಯಲ್‌ಮಿ ಪರ್ಫಾರ್ಮೆನ್ಸ್ ವೀಕ್ ಸೇಲ್‌ನಲ್ಲಿ (Realme Performance Week Sale) ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಬನ್ನಿ ಈ ಫೋನಿನ ಹೊಸ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ರಿಯಲ್‌ಮಿ GT 6T 5G ಮೊಬೈಲ್ ನಾಲ್ಕು ಸ್ಟೋರೇಜ್ ರೂಪಾಂತರಗಳಲ್ಲಿ ಖರೀದಿಗೆ ಲಭ್ಯವಿದೆ. ಪ್ರಸ್ತುತ, ಈ ಸ್ಮಾರ್ಟ್‌ಫೋನ್ ಬಿಡುಗಡೆ ಬೆಲೆಗಿಂತ ಮತ್ತಷ್ಟು ಅಗ್ಗವಾಗಿ ಮಾರಾಟವಾಗುತ್ತಿದೆ. ಇದು 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಹಾಗೆಯೇ ಸ್ನಾಪ್‌ಡ್ರಾಗನ್ 7+ ಜೆನ್ 3 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.78 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 256GB ಸ್ಟೋರೇಜ್, 5500mAh ಬ್ಯಾಟರಿ ಮತ್ತು 120W ಸ್ಪೀಡ್ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ರಿಯಲ್‌ಮಿ GT 6T 5G ಬೆಲೆ ಮತ್ತು ಆಫರ್‌ಗಳು
ಕಂಪನಿಯು ರಿಯಲ್‌ಮಿ GT 6T 5G ಫೋನಿನ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ರಿಯಾಯಿತಿ ಘೋಷಿಸಿದೆ. ಫೋನಿನ 8GB RAM + 128GB ಸ್ಟೋರೇಜ್ ಆಯ್ಕೆ ಮತ್ತು 12GB RAM + 512GB ಸ್ಟೋರೇಜ್ ವೇರಿಯಂಟ್ ಕಡಿಮೆ ಬೆಲೆಗೆ ಲಭ್ಯವಿದೆ. ನೀವು, 128GB ಸ್ಟೋರೇಜ್ ರೂಪಾಂತರವನ್ನು 27,999 ರೂ.ಗೆ ಮತ್ತು 512GB ಸ್ಟೋರೇಜ್ ರೂಪಾಂತರವನ್ನು 33,999 ರೂ. ಖರೀದಿಸಬಹುದು.
ಮತ್ತೊಂದೆಡೆ, ಫೋನಿನ 8GB RAM + 256GB ಸ್ಟೋರೇಜ್ ರೂಪಾಂತರವು 32,999 ರೂ.ಗೆ ಮಾರಾಟವಾಗುತ್ತಿದೆ. ಇನ್ನೂ 12GB RAM + 256GB ಸ್ಟೋರೇಜ್ ವೇರಿಯಂಟ್ 35,999 ರೂ.ಗೆ ಲಭ್ಯವಿದೆ. ಕಂಪನಿಯು ಎಕ್ಸ್‌ಚೇಂಜ್ ಆಫರ್ ಸಹ ನೀಡುತ್ತಿದೆ. ನೀವು, ಪ್ಲುಮಿಡ್ ಸಿಲ್ವರ್ ಮತ್ತು ರೇಜರ್ ಗ್ರೀನ್ ಬಣ್ಣಗಳಲ್ಲಿ ಈ ಫೋನನ್ನು ಖರೀದಿಸಬಹುದು.
ಈ ಸುದ್ದಿ ಓದಿದ್ದೀರಾ?: ಧೂಳೆಬ್ಬಿಸಲು ಬಂತು Vivo X200 Pro ಫೋನ್; 200MP ಕ್ಯಾಮೆರಾ.. 6000mAh ಬ್ಯಾಟರಿ.. ಬೆಲೆ ಇಷ್ಟೊಂದಾ!
ರಿಯಲ್‌ಮಿ GT 6T ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ರಿಯಲ್‌ಮಿ GT 6T ಮೊಬೈಲ್ 6.78 ಇಂಚಿನ 1.5K ಡಿಸ್ಪ್ಲೇ ಹೊಂದಿದೆ. ಇದು 8T LTPO ಅಮೋಲೆಡ್ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 120Hz ರಿಫ್ರೆಶ್ ದರ ಮತ್ತು 6000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಹಾಗೆಯೇ 3D ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಪಡೆದಿದೆ.
ಪ್ರೊಸೆಸರ್ ಯಾವುದು?
ರಿಯಲ್‌ಮಿ GT 6T ಫೋನನ್ನು ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 7+ ಜೆನ್ 3 ಆಕ್ಟಾಕೋರ್ ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗಿದೆ. ಈ ಫೋನ್ ಆಂಡ್ರಾಯ್ಡ್ ಆಧಾರಿತ ರಿಯಲ್‌ಮಿ ಯುಐ 5.0 ಓಎಸ್‌ನೊಂದಿಗೆ ಕೆಲಸ ಮಾಡುತ್ತದೆ.

32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ
ರಿಯಲ್‌ಮಿ GT 6T ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಸೋನಿ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 32 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
ದೊಡ್ಡ ಬ್ಯಾಟರಿ
ರಿಯಲ್‌ಮಿ GT 6T 5G ಮೊಬೈಲ್ 5500mAh ಸಾಮರ್ಥ್ಯದ ದೊಡ್ಡ ಬ್ಯಾಟರಿಯನ್ನು ಹೊಂದಿದೆ. ಇದನ್ನು ಚಾರ್ಜ್ ಮಾಡಲು, 120W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ರಿಯಲ್‌ಮಿ GT 6T 5G ಫೋನ್ 5G ಬ್ಯಾಂಡ್, ಬ್ಲೂಟೂತ್ 5.2, ವೈಫೈ 6, ಜಿಪಿಎಸ್, ಯುಎಸ್‌ಬಿ 2.0 ಸಿ ಚಾರ್ಜಿಂಗ್ ಪೋರ್ಟ್, IP65 ರೇಟಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








