12,999 ಸಾಕು! 108MP ಕ್ಯಾಮೆರಾ.. 5030mAh ಬ್ಯಾಟರಿ.. Redmi 13 5G ಬೆಲೆ ಭರ್ಜರಿ ಇಳಿಕೆ
ರೆಡ್ಮಿ ಪ್ರಿಯರಿಗೆ ಇಲ್ಲಿದೆ ಡಬಲ್ ಖುಷಿ ಸುದ್ದಿ. ಬಹುನಿರೀಕ್ಷಿತ ರೆಡ್ಮಿ 14C 5G (Redmi 14C 5G) ಫೋನ್ ಇಂದು ಭಾರತದಲ್ಲಿ ಬಿಡುಗಡೆಯಾಗಲಿದೆ. ಮತ್ತೊಂದೆಡೆ, ರೆಡ್ಮಿ 13 5G (Redmi 13 5G) ಫೋನಿನ ಬೆಲೆ ದಿಢೀರ್ ಇಳಿಕೆಯಾಗಿದೆ. ಹೌದು, ಕಂಪನಿಯು ರೆಡ್ಮಿ 13 5G ಫೋನನ್ನು ಕಡಿಮೆ ಬೆಲೆ ಮಾರಾಟ ಮಾಡುತ್ತಿದೆ. ಈ ಸ್ಮಾರ್ಟ್‌ಫೋನ್ ಖರೀದಿಸಿದರೆ, ಹೆಚ್ಚು ಹಣ ಉಳಿತಾಯ ಗ್ಯಾರಂಟಿ. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.
ರೆಡ್ಮಿ 13 5G ಫೋನ್ 108 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 6.79 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 128GB ಸ್ಟೋರೇಜ್, 5030mAh ಬ್ಯಾಟರಿ ಮತ್ತು 33W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ನೀವು, ಹವಾಯಿಯನ್ ಬ್ಲೂ, ಬ್ಲ್ಯಾಕ್ ಡೈಮಂಡ್ ಮತ್ತು ಸ್ಟೈಲಿಶ್ ಆರ್ಕಿಡ್ ಪಿಂಕ್ ಬಣ್ಣಗಳಲ್ಲಿ ಕೊಳ್ಳಬಹುದು. ಈ ಫೋನಿನ ಹೊಸ ಬೆಲೆ ತಿಳಿಯಲು ಮುಂದೆ ಓದಿ.

ರೆಡ್ಮಿ 13 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ರೆಡ್ಮಿ 13 5G ಮೊಬೈಲ್ 6.79 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ ಮತ್ತು 450 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಹೊಂದಿದೆ.
ಪ್ರೊಸೆಸರ್ ಯಾವುದು
ರೆಡ್ಮಿ 13 5G ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್ ಹೊಂದಿದೆ. ಇದು ಗ್ರಾಫಿಕ್ಸ್‌ಗಾಗಿ, ಅಡ್ರಿನೊ 613 ಜಿಪಿಯು ಹೊಂದಿದೆ. ಈ ಮೊಬೈಲ್ ಆಂಡ್ರಾಯ್ಡ್ 14 ಆಧಾರಿತ ಶಿಯೋಮಿ ಹೈಪರ್ ಓಎಸ್‌ನಲ್ಲಿ ಕೆಲಸ ಮಾಡುತ್ತದೆ.
108 ಮೆಗಾಪಿಕ್ಸೆಲ್ ಕ್ಯಾಮೆರಾ
ರೆಡ್ಮಿ 13 5G ಸ್ಮಾರ್ಟ್‌ಫೋನ್ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ. ಹಾಗೆಯೇ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 13 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.

ಬಿಗ್ ಬ್ಯಾಟರಿ
ರೆಡ್ಮಿ 13 5G ಫೋನ್ 5030mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 33W ವೇಗದ ಚಾರ್ಜಿಂಗ್ ಒದಗಿಸಲಾಗಿದೆ.
ಇತರೆ ವೈಶಿಷ್ಟ್ಯಗಳು
ರೆಡ್ಮಿ 13 5G ಮೊಬೈಲ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಹಾಗೆಯೇ ಡ್ಯುಯಲ್ 5G ಸಿಮ್ ಬೆಂಬಲ, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.
ರೆಡ್ಮಿ 13 5G ಬೆಲೆ ಮತ್ತು ಆಫರ್
ರೆಡ್ಮಿ 13 5G ಫೋನಿನ ಆರಂಭಿಕ ಬೆಲೆ 13,999 ರೂ. ಆಗಿದೆ. ಪ್ರಸ್ತುತ, ಕಂಪನಿಯು ಎರಡು ರೂಪಾಂತರಗಳ ಬೆಲೆಯನ್ನು ಇಳಿಕೆ ಮಾಡಿದೆ. ನೀವು, 6GB RAM + 128GB ಸ್ಟೋರೇಜ್ ರೂಪಾಂತರವನ್ನು 12,999 ರೂ.ಗೆ ಖರೀದಿಸಬಹುದು. ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್‌ನಲ್ಲಿ ಶೇ.28 ರಷ್ಟು ಡಿಸ್ಕೌಂಟ್ ಲಭ್ಯವಿದೆ. ನೀವು 12,950 ರೂ.ಗೆ ಈ ಮೊಬೈಲ್ ಕೊಳ್ಳಬಹುದು.


Click it and Unblock the Notifications








