Home
Deal of the day

108MP ಕ್ಯಾಮೆರಾ, ವೇಗದ ಪ್ರೊಸೆಸರ್‌ ಇರುವ ಈ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಜನಪ್ರಿಯ ಮೊಬೈಲ್‌ ಬ್ರ್ಯಾಂಡ್‌ ಎಂದು ಗುರುತಿಸಿಕೊಂಡಿರುವ ರೆಡ್ಮಿ ಕಂಪನಿಯ ಭಿನ್ನ ಶ್ರೇಣಿಯಲ್ಲಿ ಮೊಬೈಲ್‌ಗಳನ್ನು ಪರಿಚಯಿಸಿದೆ. ಆ ಪೈಕಿ ಸಂಸ್ಥೆಯ ರೆಡ್ಮಿ 13 5G ಫೋನ್‌ ಸ್ಟೈಲಿಶ್‌ ಲುಕ್‌ ಹಾಗೂ ಆಕರ್ಷಕ ಫೀಚರ್ಸ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಅಂದಹಾಗೆ ಈ ಮೊಬೈಲ್‌ ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ನಲ್ಲಿ ಭಾರೀ ಬೆಲೆ ಇಳಿಕೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರಿಗೆ ಫುಲ್‌ ಖುಷಿ ಎನಿಸಿದೆ

ಹೌದು, ಇ ಕಾಮರ್ಸ್‌ ವೆಬ್‌ಸೈಟ್‌ ಅಮೆಜಾನ್‌ ತಾಣದಲ್ಲಿ ರೆಡ್ಮಿ 13 5G ಮೊಬೈಲ್‌ ಶೇ. 29% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಫೋನಿನ 8 GB + 128 GB ವೇರಿಯಂಟ್‌ 12,739 ರೂ. ಗಳ ಆಫರ್‌ ದರದಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ ಗ್ರಾಹಕರು ಇನ್ನಷ್ಟು ರಿಯಾಯಿತಿ ಪಡೆಯಲು ಲಭ್ಯ ಇರುವ ಬ್ಯಾಂಕ್‌ ಆಫರ್‌ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಪಡೆದುಕೊಳ್ಳಬಹುದು.

108MP ಕ್ಯಾಮೆರಾ, ವೇಗದ ಪ್ರೊಸೆಸರ್‌ ಇರುವ ಈ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಈ ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, 33W ಫಾಸ್ಟ್‌ ಚಾರ್ಜಿಂಗ್‌ ಸೌಲಭ್ಯವನ್ನು ಪಡೆದುಕೊಂಡಿದೆ. ಇನ್ನು ಈ ಫೋನಿನ ಪ್ರಾಥಮಿಕ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಅಮೆಜಾನ್‌ ತಾಣದಲ್ಲಿ ರೆಡ್ಮಿ 13 5G ಫೋನ್‌ ಅನ್ನು ಆಕರ್ಷಕ ಆಫರ್‌ನಲ್ಲಿ ಖರೀದಿಸಬಹುದು. ಹಾಗಾದರೇ ರೆಡ್ಮಿ 13 5G ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.

ರೆಡ್ಮಿ 13 5G - ಫೀಚರ್ಸ್‌ ಹೀಗಿವೆ

ರೆಡ್ಮಿ 13 5G ಸ್ಮಾರ್ಟ್‌ಫೋನ್‌ 6.79 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1080 × 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಇದು 120 Hz ರಿಫ್ರೆಶ್ ರೇಟ್ ಬೆಂಬಲ ಪಡೆದಿದೆ. ಇದರೊಂದಿಗೆ ಡಿಸ್‌ಪ್ಲೇಯು 450 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ.

ರೆಡ್ಮಿ 13 5G ಮೊಬೈಲ್‌ ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 4 ಜೆನ್‌ 2 ಚಿಪ್‌ಸೆಟ್‌ ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 14 OS ಸಪೋರ್ಟ್‌ ನೊಂದಿಗೆ ರನ್‌ ಆಗಲಿದೆ. ಹಾಗೆಯೇ 6 GB RAM + 128 GB ಹಾಗೂ 8 GB RAM + 128 GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ರೆಡ್ಮಿ 13 5G ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಹಾಗೆಯೇ ಮುಂಭಾಗದಲ್ಲಿ 13 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ರೆಡ್ಮಿ 13 5G ಮೊಬೈಲ್‌ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಅನ್ನು ಒಳಗೊಂಡಿದ್ದು, ಇದು 33 W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಡ್ಯುಯಲ್ 5G SIM ಸಪೋರ್ಟ್‌, 3.5mm ಹೆಡ್‌ಫೋನ್ ಜ್ಯಾಕ್, ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು USB ಟೈಪ್ C ಪೋರ್ಟ್ ಪಡೆದಿದೆ.

Best Mobiles in India

English summary
Redmi 13 5G Price Drops Significantly on Amazon. Explore mobile discount price, offer price, other specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+