Home
Deal of the day

3500 ಅಗ್ಗ! 108MP ಕ್ಯಾಮೆರಾ.. 5030mAh ಬ್ಯಾಟರಿ.. ಈ Redmi 5G ಫೋನಿನ ಬೆಲೆ ಭಾರೀ ಇಳಿಕೆ

ರೆಡ್ಮಿ ಪ್ರಿಯರಿಗೆ ಇಲ್ಲಿದೆ ಖುಷಿ ಸುದ್ದಿ. ಬಹುನಿರೀಕ್ಷಿತ ರೆಡ್ಮಿ ನೋಟ್‌ 14 5G (Redmi Note 14) ಸರಣಿ ಭಾರತದಲ್ಲಿ ಬಿಡುಗಡೆಯಾಗಿದೆ. ಇದರಲ್ಲಿ ಮೂರು ಹೊಸ ಮೊಬೈಲ್‌ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಮತ್ತೊಂದೆಡೆ, ರೆಡ್ಮಿ 13 5G (Redmi 13 5G) ಫೋನಿನ ಬೆಲೆ ದಿಢೀರ್ ಇಳಿಕೆಯಾಗಿದೆ. ಕಂಪನಿಯು ಶೇ.31 ರಷ್ಟು ರಿಯಾಯಿತಿ ಘೋಷಿಸಿದೆ. ನೀವು ಈ ಸ್ಮಾರ್ಟ್‌ಫೋನ್‌ ಖರೀದಿಸಿದರೆ, ಹೆಚ್ಚು ಹಣ ಉಳಿತಾಯ ಮಾಡಬಹುದು. ಬನ್ನಿ, ಈ ಫೋನಿನ ಹೊಸ ಬೆಲೆ, ಆಫರ್‌ಗಳು ಮತ್ತು ವಿಶೇಷತೆಗಳನ್ನು ತಿಳಿಯೋಣ.

ರೆಡ್ಮಿ 13 5G ಫೋನ್ ಎರಡು ಸ್ಟೋರೇಜ್‌ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ನೀವು, ಹವಾಯಿಯನ್ ಬ್ಲೂ, ಬ್ಲ್ಯಾಕ್ ಡೈಮಂಡ್ ಮತ್ತು ಸ್ಟೈಲಿಶ್ ಆರ್ಕಿಡ್ ಪಿಂಕ್ ಬಣ್ಣಗಳಲ್ಲಿ ಕೊಳ್ಳಬಹುದು. ಈ ಫೋನ್ 108 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಫೋನಿನಲ್ಲಿ 6.79 ಇಂಚಿನ ಡಿಸ್ಪ್ಲೇ ಲಭ್ಯವಿದೆ. ಜೊತೆಗೆ 128GB ಸ್ಟೋರೇಜ್‌, 5030mAh ಬ್ಯಾಟರಿ ಮತ್ತು 33W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

3500 ಅಗ್ಗ! 108MP ಕ್ಯಾಮೆರಾ.. 5030mAh ಬ್ಯಾಟರಿ.. ಯಾವ ಫೋನ್?

ರೆಡ್ಮಿ 13 5G ಬೆಲೆ ಮತ್ತು ಆಫರ್‌ಗಳು

6GB RAM + 128GB ಸ್ಟೋರೇಜ್‌ = 13,999 ರೂ.
ಆಫರ್‌ ಬೆಲೆ = 12,283 ರೂ.

8GB RAM + 128GB ಸ್ಟೋರೇಜ್ = 15,499 ರೂ.
ಆಫರ್‌ ಬೆಲೆ = 13,299 ರೂ.

ರೆಡ್ಮಿ 13 5G ಫೋನಿನ ಆರಂಭಿಕ ಬೆಲೆ 13,999 ರೂ. ಆಗಿದೆ. ಪ್ರಸ್ತುತ, ಆನ್‌ಲೈನ್ ಶಾಪಿಂಗ್ ಸೈಟ್ ಫ್ಲಿಪ್‌ಕಾರ್ಟ್‌ನಲ್ಲಿ 2,200 ರೂ.ಗಿಂತ ಹೆಚ್ಚು ಫ್ಲಾಟ್ ರಿಯಾಯಿತಿ ನೀಡಲಾಗುತ್ತಿದೆ. ಆಯ್ದ ಬ್ಯಾಂಕ್‌ ಕಾರ್ಡ್‌ಗಳ ಮೇಲೆ 1,500 ರೂ. ಡಿಸ್ಕೌಂಟ್ ಸಿಗುತ್ತದೆ. ಇದಲ್ಲದೆ ಶೇ.5 ರಷ್ಟು ಕ್ಯಾಶ್‌ಬ್ಯಾಕ್ ಲಭ್ಯವಿದೆ. ಜೊತೆಗೆ, 3 ರಿಂದ 24 ತಿಂಗಳ ನೋ ಕಾಸ್ಟ್‌ ಇಎಂಐ ಸಹ ಲಭ್ಯವಿದೆ. ನೀವು, ರಿಯಾಯಿತಿಯೊಂದಿಗೆ ಈ ಫೋನನ್ನು ಕ್ರಮವಾಗಿ 12,283 ರೂ. ಮತ್ತು 13,299 ರೂ. ಕೊಳ್ಳಬಹುದು.

ಈ ಸುದ್ದಿ ಓದಿದ್ದೀರಾ?: ಮೋದಿ ಖಡಕ್ ನಿರ್ಧಾರ: 28,000ಕ್ಕೂ ಹೆಚ್ಚು URL ಬ್ಲಾಕ್.. ಈ ರೀತಿ ಪೋಸ್ಟ್ ಮಾಡಿದ್ರೆ ನಿಮಗೂ ಇದೇ ಗತಿ!

ರೆಡ್ಮಿ 13 5G ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ರೆಡ್ಮಿ 13 5G ಮೊಬೈಲ್ 6.79 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಎಲ್‌ಸಿಡಿ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ ಮತ್ತು 450 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ 3 ರಕ್ಷಣೆ ಹೊಂದಿದೆ.

ಪ್ರೊಸೆಸರ್‌ ಸಾಮರ್ಥ್ಯ

ರೆಡ್ಮಿ 13 5G ಫೋನ್ ಕ್ವಾಲ್ಕಾಮ್‌ನ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಇದು ಗ್ರಾಫಿಕ್ಸ್‌ಗಾಗಿ, ಅಡ್ರಿನೊ 613 ಜಿಪಿಯು ಹೊಂದಿದೆ. ಈ ರೆಡ್ಮಿ 13 5G ಮೊಬೈಲ್ ಆಂಡ್ರಾಯ್ಡ್‌ 14 ಆಧಾರಿತ ಶಿಯೋಮಿ ಹೈಪರ್ ಓಎಸ್‌ನಲ್ಲಿ ಕಾರ್ಯ ನಿರ್ವಹಿಸುತ್ತದೆ.

ಕ್ಯಾಮೆರಾ ಸೆಟಪ್

ರೆಡ್ಮಿ 13 5G ಸ್ಮಾರ್ಟ್‌ಫೋನ್ 108 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಲಭ್ಯವಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 13 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್

ರೆಡ್ಮಿ 13 5G ಫೋನ್ 5030mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 33W ವೇಗದ ಚಾರ್ಜಿಂಗ್ ಒದಗಿಸಲಾಗಿದೆ.

ಇತರೆ ವೈಶಿಷ್ಟ್ಯಗಳು

ರೆಡ್ಮಿ 13 5G ಮೊಬೈಲ್ ಡ್ಯುಯಲ್ 5G ಸಿಮ್ ಬೆಂಬಲ, 3.5 ಎಂಎಂ ಹೆಡ್‌ಫೋನ್ ಜ್ಯಾಕ್, ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್‌ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಂದಿದೆ.

Best Mobiles in India

English summary
Redmi 13 5G with 6GB RAM gets 31 percent discount in flipkart: know offers
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+