Home
Deal of the day

Redmi: ಈ ಫೋನಿಗೆ ಭರ್ಜರಿ ಡಿಸ್ಕೌಂಟ್‌..5000mAh ಬ್ಯಾಟರಿ..50MP ಕ್ಯಾಮೆರಾ ಸೌಲಭ್ಯ!

ಜನಪ್ರಿಯ ಶಿಯೋಮಿ ಸಂಸ್ಥೆಯ ರೆಡ್ಮಿ ಸರಣಿಯ ಮೊಬೈಲ್‌ ಬಜೆಟ್‌ ದರದಲ್ಲಿ ಅಧಿಕ ಗ್ರಾಹಕರುನ್ನು ಗಮನ ಸೆಳದಿವೆ. ಸಂಸ್ಥೆಯ ರೆಡ್ಮಿ 13C 5G (Redmi 13C 5G) ಫೋನ್‌ ಆಕರ್ಷಕ ಲುಕ್‌ ಹಾಗೂ ಬೊಂಬಾಟ್‌ ಫೀಚರ್ಸ್‌ಗಳ ಮೂಲಕ ಸದ್ದು ಮಾಡಿದೆ. ಪ್ರಸ್ತುತ ಈ ಫೋನ್‌ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಬೊಂಬಾಟ್‌ ಇಳಿಕೆಯ ದರದಲ್ಲಿ ಕಾಣಿಸಿಕೊಂಡಿದ್ದು, ಖರೀದಿದಾರರಿಗೆ ಅಚ್ಚರಿ ಎನಿಸಿದೆ

ಹೌದು, ಇ ಕಾಮರ್ಸ್‌ ವೆಬ್‌ಸೈಟ್‌ ಅಮೆಜಾನ್‌ ತಾಣದಲ್ಲಿ ರೆಡ್ಮಿ 13C 5G (Redmi 13C 5G) ಸ್ಮಾರ್ಟ್‌ಫೋನ್‌ ಶೇ. 34% ರಷ್ಟು ನೇರ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 4GB RAM + 128GB ವೇರಿಯಂಟ್‌ 9,199ರೂ. ಗಳ ಆಫರ್‌ ದರದಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ ಖರೀದಿದಾರರು ಇನ್ನಷ್ಟು ರಿಯಾಯಿತಿ ಪಡೆಯಲು ಲಭ್ಯ ಇರುವ ಬ್ಯಾಂಕ್‌ ಆಫರ್‌ ಹಾಗೂ ಎಕ್ಸ್‌ಚೇಂಜ್ ಆಫರ್‌ ಸಹ ಪಡೆಯಬಹುದು.

Redmi: ಈ ಫೋನಿಗೆ ಭರ್ಜರಿ ಡಿಸ್ಕೌಂಟ್‌..5000mAh...50MP ಕ್ಯಾಮೆರಾ ಸೌಲಭ್ಯ!

ಅಂದಹಾಗೆ ರೆಡ್ಮಿ 13C 5G ಫೋನ್‌ 4G RAM + 128GB, 6GB + 128GB ಹಾಗೂ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ. ಈ ಮೊಬೈಲ್‌ 5,000 mAh ಬ್ಯಾಟರಿ ಸಾಮರ್ಥ್ಯದ ಸೌಲಭ್ಯ ಸಹ ಪಡೆದುಕೊಂಡಿದೆ. ಅಮೆಜಾನ್‌ ತಾಣದಲ್ಲಿ Redmi 13C 5G ಫೋನ್‌ ಅನ್ನು ಬಿಗ್ ಡಿಸ್ಕೌಂಟ್‌ನಲ್ಲಿ ಖರೀದಿ ಮಾಡಬಹುದು. ಇನ್ನುಳಿದಂತೆ ರೆಡ್ಮಿ 13C 5G ಫೋನಿನ ಇತರೆ ಫೀಚರ್ಸ್‌ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ 13C 5G - ಫೀಚರ್ಸ್‌ ಮಾಹಿತಿ

ರೆಡ್ಮಿ ನೋಟ್‌ 13 5G ಮೊಬೈಲ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಇನ್ನು ಡಿಸ್‌ಪ್ಲೇ 1080×2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಸಪೋರ್ಟ್‌ ಒಳಗೊಂಡಿದೆ. ಇದರ ಜೊತೆಗೆ ಡಿಸ್‌ಪ್ಲೇಯು 1000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದ್ದು, 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್‌ ಅನ್ನು ಸಪೋರ್ಟ್ ಮಾಡುತ್ತದೆ.

ರೆಡ್ಮಿ ನೋಟ್‌ 13 5G ಮೊಬೈಲ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಕೆಲಸ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ 6GB RAM + 128GB ಹಾಗೂ 8GB RAM+ 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆ ಪಡೆದಿದೆ. ಇದರ ಜೊತೆಗೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.

ರೆಡ್ಮಿ ನೋಟ್‌ 13 5G ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಪಡೆದಿದೆ. ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಸೌಲಭ್ಯ ಪಡೆದಿದೆ. ಹಾಗೆಯೇ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ರೆಡ್ಮಿ ನೋಟ್‌ 13 5G ಮೊಬೈಲ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದ್ದು, ಇದು 33W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 3.5 ಎಂಎಂ ಆಡಿಯೊ ಜಾಕ್, 5G SA, NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್‌ ಸಪೋರ್ಟ್‌ ಮಾಡುತ್ತದೆ.

Best Mobiles in India

English summary
Redmi 13C 5G Gets a Price Slash on Amazon India. Know about mobile discount price, offer price, other specifications and more. ಇ ಕಾಮರ್ಸ್‌ ವೆಬ್‌ಸೈಟ್‌ ಅಮೆಜಾನ್‌ ತಾಣದಲ್ಲಿ ರೆಡ್ಮಿ 13C 5G (Redmi 13C 5G) ಸ್ಮಾರ್ಟ್‌ಫೋನ್‌ ಶೇ. 34% ರಷ್ಟು ನೇರ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 4GB RAM + 128GB ವೇರಿಯಂಟ್‌ 9,199ರೂ. ಗಳ ಆಫರ್‌ ದರದಲ್ಲಿ ಖರೀದಿಗೆ ಲಭ್ಯ ಇದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+