ರೆಡ್ಮಿಯ ಈ ಜನಪ್ರಿಯ 5G ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಭಾರೀ ಉಳಿತಾಯ!
ಅಮೆಜಾನ್ ಇ ಕಾಮರ್ಸ್ ವೆಬ್‌ಸೈಟ್ ಸ್ಪೆಷಲ್ ಮಾರಾಟ ಮೇಳ ಆಯೋಜಿಸುವ ಮೂಲಕ ಹೆಚ್ಚಿನ ಗ್ರಾಹಕರನ್ನು ಸೆಳೆಯುವ ಪ್ರಯತ್ನ ಮಾಡುತ್ತದೆ. ಮಾರಾಟದಲ್ಲಿ ಕೆಲವು ಇತ್ತೀಚಿನ ಮೊಬೈಲ್‌ಗಳು ಹಾಗೂ ಜನಪ್ರಿಯ ಮೊಬೈಲ್‌ಗಳು ಆಕರ್ಷಕ ರಿಯಾಯತಿ ದರದಲ್ಲಿ ಕಾಣಿಸಿಕೊಂಡಿವೆ. ಸದ್ಯ ಅಮೆಜಾನ್ ತಾಣದಲ್ಲಿ ರೆಡ್ಮಿ 13C 5G (Redmi 13C 5G) ಮೊಬೈಲ್ ಆಕರ್ಷಕ ಡಿಸ್ಕೌಂಟ್ ಪಡೆದುಕೊಂಡಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಇದೀಗ ರೆಡ್ಮಿ 13C 5G (Redmi 13C 5G) ಮೊಬೈಲ್ ಶೇ. 35% ರಷ್ಟು ಡಿಸ್ಕೌಂಟ್ ದರದಲ್ಲಿ ಪಡೆದುಕೊಂಡಿದೆ. ಇನ್ನು ಈ ಮೊಬೈಲ್‌ನ 4GB RAM + 128GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 9,099ರೂ. ಗಳ ಬೆಲೆಯಲ್ಲಿ ಖರೀದಿಗೆ ಸಿಗಲಿದೆ. ಹಾಗೆಯೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್ ಕೂಡಾ ಪಡೆಯಬಹುದಾಗಿದೆ.

ಇನ್ನು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ಅಲ್ಲದೇ 5000 mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಅಮೆಜಾನ್‌ನಲ್ಲಿ Redmi 13C 5G ಫೋನ್ ಅನ್ನು ಡಿಸ್ಕೌಂಟ್‌ನಲ್ಲಿ ಖರೀದಿಸಬಹುದು. ಹಾಗಾದರೇ ರೆಡ್ಮಿ 13C 5G ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ವಿನ್ಯಾಸ ಹೇಗಿದೆ
ರೆಡ್ಮಿ 13 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಇನ್ನು ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದು 120Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿದೆ. ಇದರೊಂದಿಗೆ ಡಿಸ್‌ಪ್ಲೇಯು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದ್ದು, 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಅನ್ನು ಸಪೋರ್ಟ್ ಮಾಡುತ್ತದೆ.
ಪ್ರೊಸೆಸರ್ ಸಾಮರ್ಥ್ಯ
ರೆಡ್ಮಿ 13 5G ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080SoC ಪ್ರೊಸೆಸರ್ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಸಪೋರ್ಟ್ ನೊಂದಿಗೆ ರನ್ ಆಗಲಿದೆ. ಹಾಗೆಯೇ 6 GB RAM + 128 GB ಮತ್ತು 8 GB RAM + 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯ. ಇದರೊಂದಿಗೆ ಮೆಮೊರಿ ಕಾರ್ಡ್ ಸಪೋರ್ಟ್ ಜೊತೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು.
ಟ್ರಿಪಲ್ ಕ್ಯಾಮೆರಾ
ರೆಡ್ಮಿ 13 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದ್ದು. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಬ್ಯಾಟರಿ ಬ್ಯಾಕ್‌ಅಪ್
ರೆಡ್ಮಿ 13 5G ಮೊಬೈಲ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಈ ಮೊಬೈಲ್ 18W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಕೂಡಾ ಸಪೋರ್ಟ್ ಮಾಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5 ಎಂಎಂ ಆಡಿಯೊ ಜಾಕ್, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್ C ಚಾರ್ಜಿಂಗ್ ಸಪೋರ್ಟ್ ಒದಗಿಸುತ್ತದೆ.


Click it and Unblock the Notifications








