Home
Deal of the day

8,000ಕ್ಕಿಂತ ಕಡಿಮೆ! 50MP ಕ್ಯಾಮೆರಾ.. 5160mAh ಬ್ಯಾಟರಿ.. ಈ Redmi 5G ಫೋನಿನ ಬೆಲೆ ಭರ್ಜರಿ ಇಳಿಕೆ

ರೆಡ್ಮಿ ಮೊಬೈಲ್‌ ಖರೀದಿಸುವವರಿಗೆ ಇಲ್ಲಿದೆ ಸಿಹಿಸುದ್ದಿ. ಕಂಪನಿಯು ತನ್ನ ಎಂಟ್ರಿ ಲೆವೆಲ್‌ನ 5G ಫೋನಿನ ಬೆಲೆಯನ್ನು ಮತ್ತಷ್ಟು ಇಳಿಕೆ ಮಾಡಿದೆ. ಹೌದು, ರೆಡ್ಮಿ A4 5G (Redmi A4 5G) ಫೋನನ್ನು ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಪ್ರಸ್ತುತ, ಆನ್‌ಲೈನ್ ಶಾಪಿಂಗ್ ಸೈಟ್ ಅಮೆಜಾನ್‌ನಲ್ಲಿ (amazon) ಶೇ.23 ರಷ್ಟು ರಿಯಾಯಿತಿ ಲಭ್ಯವಿದೆ. 9,000ಕ್ಕಿಂತಲೂ ಕಡಿಮೆ ಬೆಲೆಗೆ ಹೊಸ ಮೊಬೈಲ್‌ ಹುಡುಕುತ್ತಿರುವವರಿಗೆ ಇದು ಉತ್ತಮ ಆಯ್ಕೆಯಾಗಿದೆ. ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯಲು ಮುಂದೆ ಓದಿ.

ರೆಡ್ಮಿ A4 5G ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಎಐ ಡ್ಯುಯಲ್ ಕ್ಯಾಮೆರಾ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 4s ಜೆನ್ 2 ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಈ ಪ್ರೊಸೆಸರ್‌ ಹೊಂದಿರುವ ವಿಶ್ವದ ಮೊದಲ ಅಗ್ಗದ ಮೊಬೈಲ್ ಇದಾಗಿದೆ. ಈ ಫೋನಿನಲ್ಲಿ 6.88 ಇಂಚಿನ ದೊಡ್ಡ ಡಿಸ್ಪ್ಲೇ ಲಭ್ಯವಿದೆ. ಇದು 5160mAh ಬ್ಯಾಟರಿ ಮತ್ತು 128GB ಸ್ಟೋರೇಜ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್ ರೆಡ್ಮಿ A3 5G ಫೋನಿನ ಉತ್ತರಾಧಿಕಾರಿಯಾಗಿದೆ. ಬನ್ನಿ, ಪ್ರಸ್ತುತ ಈ ಫೋನಿಗೆ ಯಾವೆಲ್ಲ ಆಫರ್‌ ಲಭ್ಯವಿದೆ ತಿಳಿಯೋಣ.

ಕೇವಲ 8,000 ರೂ.! 50MP ಕ್ಯಾಮೆರಾ, 5160mAh ಬ್ಯಾಟರಿ; Redmi A4 5G ಬೆಲೆ ಇಳಿಕೆ

ರೆಡ್ಮಿ A4 5G ವೈಶಿಷ್ಟ್ಯಗಳು

6.88 ಇಂಚಿನ ದೊಡ್ಡ ಡಿಸ್ಪ್ಲೇ

ರೆಡ್ಮಿ A4 5G ಸ್ಮಾರ್ಟ್‌ಫೋನ್ 6.88 ಇಂಚಿನ ಎಚ್‌ಡಿ ಪ್ಲಸ್ ಡಿಸ್ಪ್ಲೇ ಹೊಂದಿದೆ. ಇದು 1640 X 720 ಪಿಕ್ಸೆಲ್‌ಗಳ ರೆಸಲ್ಯೂಶನ್‌ನೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 240Hz ಸ್ಪರ್ಶ ಮಾದರಿ ದರ ಮತ್ತು 600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಬೆಂಬಲ ಹೊಂದಿದೆ.

ಸ್ನಾಪ್‌ಡ್ರಾಗನ್ ಪ್ರೊಸೆಸರ್‌

ರೆಡ್ಮಿ A4 5G ಮೊಬೈಲ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 4s ಜೆನ್ 2 ಪ್ರೊಸೆಸರ್‌ ಹೊಂದಿದೆ. ಈ ಪ್ರೊಸೆಸರ್ ಅನ್ನು 4 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ನಿರ್ಮಿಸಲಾಗಿದೆ. ಇದು ಗ್ರಾಫಿಕ್ಸ್‌ಗಾಗಿ, ಅಡ್ರಿನೊ ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್‌ 14 ಆಧಾರಿತ ಹೈಪರ್‌ ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ಮಾಡುತ್ತದೆ.

1TB ವರೆಗೆ ಸ್ಟೋರೇಜ್

ರೆಡ್ಮಿ A4 5G ಫೋನ್ 4GB RAM ಹೊಂದಿದೆ. 4GB ವರೆಗಿನ ವರ್ಚುವಲ್ RAM ಬೆಂಬಲವೂ ಲಭ್ಯವಿದೆ. ಈ ಫೋನಿನಲ್ಲಿ 64GB ಮತ್ತು 128GB ಸ್ಟೋರೇಜ್‌ ಆಯ್ಕೆ ಲಭ್ಯವಿದೆ. ನೀವು, ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸಬಹುದು.

ಡ್ಯುಯಲ್ ಕ್ಯಾಮೆರಾ ಸೆಟಪ್

ರೆಡ್ಮಿ A4 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಇದು ಎಲ್ಇಡಿ ಫ್ಲ್ಯಾಷ್ ಮತ್ತು ಸೆಕೆಂಡರಿ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, 5 ಮೆಗಾಪಿಕ್ಸೆಲ್ ಮುಂಭಾಗದ ಕ್ಯಾಮೆರಾ ಲಭ್ಯವಿದೆ.

5160mAh ಸಾಮರ್ಥ್ಯದ ಬ್ಯಾಟರಿ

ರೆಡ್ಮಿ A4 5G ಫೋನ್ 5160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 18W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಹಾಗೆಯೇ, 33W ಅಡಾಪ್ಟರ್ ಸಹ ಲಭ್ಯವಿದೆ.

ಇತರೆ ವೈಶಿಷ್ಟ್ಯಗಳು

ರೆಡ್ಮಿ A4 5G ಮೊಬೈಲ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕ ಹೊಂದಿದೆ. ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP52 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಫೋನ್ 5G, 4G LTE, ಡ್ಯುಯಲ್ ಬ್ಯಾಂಡ್ ವೈ-ಫೈ 5, ಬ್ಲೂಟೂತ್ 5, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಮತ್ತು 3.5 ಎಂಎಂ ಆಡಿಯೊ ಪೋರ್ಟ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

ರೆಡ್ಮಿ A4 5G ಬೆಲೆ ಮತ್ತು ಆಫರ್‌ಗಳು

ರೆಡ್ಮಿ A4 5G ಫೋನಿನ 4GB + 64GB ಸ್ಟೋರೇಜ್‌ ಆಯ್ಕೆಯನ್ನು 8,499 ರೂ.ಗೆ ಬಿಡುಗಡೆ ಮಾಡಲಾಗಿತ್ತು. 4GB + 128GB ಸ್ಟೋರೇಜ್‌ ರೂಪಾಂತರದ ಬೆಲೆ 9,499 ರೂ. ಆಗಿದೆ. ಈ ಮೊಬೈಲ್ ಸ್ಪಾರ್ಕಲ್ ಪರ್ಪಲ್ ಮತ್ತು ಸ್ಟಾರ್ರಿ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ನೀವು, ರಿಯಾಯಿತಿಯೊಂದಿಗೆ 64GB ಸ್ಟೋರೇಜ್‌ ಆಯ್ಕೆಯನ್ನು 7,999 ರೂ.ಗೆ ಮತ್ತು 128GB ಸ್ಟೋರೇಜ್‌ ಅನ್ನು 8,998 ರೂ.ಗೆ ಖರೀದಿಸಬಹುದು. ಅಮೆಜಾನ್‌ನಲ್ಲಿ ಈ ಎಲ್ಲಾ ಆಫರ್‌ಗಳ ಲಾಭ ಪಡೆಯಬಹುದು.

Best Mobiles in India

English summary
Redmi A4 5G Available With 23 percent discount on amazon: Check offer Price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+