ರೆಡ್ಮಿ ನೋಟ್‌ ಸರಣಿಯ ಫೋನ್‌ಗಳಿಗೆ ಭಾರೀ ಡಿಸ್ಕೌಂಟ್‌!..ಸೀಮಿತ ಅವಧಿಯ ಕೊಡುಗೆ!

ಮಂತ್‌ ಎಂಡ್‌ ಹಾಗೂ ವಿಶೇಷ ದಿನಗಂದು ಇ ಕಾಮರ್ಸ್ ದಿಗ್ಗಜ ಅಮೆಜಾನ್ ಮಾರಾಟ ಮೇಳಗಳನ್ನು ಆಯೋಜಿಸಿ ಗ್ರಾಹಕರನ್ನು ಸೆಳೆಯುತ್ತವೆ. ಅಮೆಜಾನ್ ಮುಖ್ಯವಾಗಿ ಗ್ಯಾಡ್ಜೆಟ್ಸ್ ಉತ್ಪನ್ನಗಳಿಗೆ ಭರ್ಜರಿ ರಿಯಾಯಿತಿ ಕೊಡುಗೆ ಘೋಷಿಸುತ್ತದೆ. ಇದೀಗ ಅಮೆಜಾನ್ ತಾಣವು 'ರೆಡ್ಮಿ ಎಕ್ಸ್‌ಚೇಂಜ್‌ ಡೇಸ್‌' ಸೇಲ್ ಮೇಳ ವನ್ನು ಆಯೋಜಿಸಿ ಗ್ರಾಹಕರನ್ನು ತನ್ನತ್ತ ಸೆಳೆದಿದೆ.

ರೆಡ್ಮಿ ನೋಟ್‌ ಸರಣಿಯ ಫೋನ್‌ಗಳಿಗೆ ಭಾರೀ ಡಿಸ್ಕೌಂಟ್‌!..ಸೀಮಿತ ಅವಧಿಯ ಕೊಡುಗೆ!

ಅಮೆಜಾನ್ ಪ್ಲಾಟ್‌ಫಾರ್ಮ್ ಈಗ 'ರೆಡ್ಮಿ ಎಕ್ಸ್‌ಚೇಂಜ್‌ ಡೇಸ್‌' ಸೇಲ್ ಆಯೋಜಿಸಿದ್ದು, ಈಗ ಲೈವ್ ಇದೆ. ಈ ಮಾರಾಟ ಮೇಳವು ಏ. 16 ರಿಂದ ಪ್ರಾರಂಭವಾಗಿದ್ದು, ಏ. 20ರ ವರೆಗೂ ಚಾಲ್ತಿ ಇರಲಿದೆ. ಈ ವೇಳೆ ರೆಡ್ಮಿ ನೋಟ್ ಸರಣಿಯ ಕೆಲವು ಆಯ್ದ ಮೊಬೈಲ್‌ಗಳಿಗೆ ಭಾರೀ ವಿನಿಮಯ ಡಿಸ್ಕೌಂಟ್ ಸಿಗಲಿದೆ. ಹೊಸದಾಗಿ ರೆಡ್ಮಿ ಫೋನ್ ಖರೀದಿ ಮಾಡುವ ಗ್ರಾಹಕರಿಗೆ ಈ ಸೇಲ್ ಆಕರ್ಷಕ ಆಗಿದೆ. ಹಾಗಾದರೇ ಅಮೆಜಾನ್ ತಾಣವು ಆಯೋಜಿಸಿರುವ 'ರೆಡ್ಮಿ ಎಕ್ಸ್‌ಚೇಂಜ್‌ ಡೇಸ್‌' ಸೇಲ್ ನಲ್ಲಿ ಕೊಡುಗೆ ಪಡೆದ ರೆಡ್ಮಿ ನೋಟ್ ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ರೆಡ್ಮಿ ನೋಟ್‌ 11 ಪ್ರೊ + 5G ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್‌ 11 ಪ್ರೊ + 5G ಸ್ಮಾರ್ಟ್‌ಫೋನ್‌ 6.67 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಒಳಗೊಂಡಿರಲಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾ ವನ್ನು ಹೊಂದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು 67 W ವೇಗದ ಚಾರ್ಜಿಂಗ್ ಬೆಂಬಲಿಸುತ್ತದೆ.

Redmi Note 11 Pro + 5G (Mirage Blue, 6GB RAM, 128GB Storage) | 67W Turbo Charge | 120Hz Super AMOLED Display | Additional Exchange Offers Available
₹20,999.00
₹24,999.00
16%

ರೆಡ್ಮಿ ನೋಟ್‌ 11 ಪ್ರೊ ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್‌ 11 ಪ್ರೊ ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 1,200 ವರೆಗೆ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದು ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ.

Redmi Note 11 Pro (Phantom White, 8GB RAM, 128GB Storage) | 67W Turbo Charge | 120Hz Super AMOLED Display
₹19,999.00
₹24,999.00
20%

ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್
ಶಿಯೋಮಿ ಮಿ 11 ಲೈಟ್ NE 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಬೆಂಬಲವನ್ನು ಒಳಗೊಂಡಿದೆ. ಹಾಗೆಯೇ 6 GB RAM ಮತ್ತು 128GB ಹಾಗೂ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆ ಯನ್ನು ಹೊಂದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿವೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್ ಒಳಗೊಂಡಿದೆ.

Xiaomi 11 Lite NE 5G (Vinyl Black 6GB RAM 128 GB Storage) | Slimmest (6.81mm) & Lightest (158g) 5G Smartphone | 10-bit AMOLED with Dolby Vision | 6 Months Free Screen Replacement for Prime
₹26,999.00
₹31,999.00
16%

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 64 GB ಮತ್ತು 6GB RAM + 128 GB ಆಂತರಿಕ ಸ್ಟೋರೇಜ್‌ ಆಯ್ಕೆಯಗಳನ್ನು ಹೊಂದಿದೆ. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಹಾಗೆಯೇ ಇದು 5,000 mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ.

Redmi Note 10T 5G (Graphite Black, 4GB RAM, 64GB Storage) | Dual5G | 90Hz Adaptive Refresh Rate | MediaTek Dimensity 700 7nm Processor
₹14,999.00
₹16,999.00
12%

ರೆಡ್ಮಿ ನೋಟ್ 10S ಸ್ಮಾರ್ಟ್‌ಫೋನ್‌
ರೆಡ್ಮಿ ನೋಟ್ 10s ಸ್ಮಾರ್ಟ್‌ ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20: 9 ರಚನೆಯ ಅನುಪಾತ ವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಅಪ್‌ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Redmi Note 10S (Deep Sea Blue, 6GB RAM, 64GB Storage) -Super Amoled Display | 64 MP Quad Camera | Alexa Built in
₹12,999.00
₹16,999.00
24%

Disclaimer: This site contains affiliate links to products. We may receive a commission for purchases made through these links. However, this does not influence or impact any of our articles, such as reviews, comparisons, opinion pieces and verdicts.

Best Deals and Discounts
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X