ರೆಡ್ಮಿ ನೋಟ್ 13 5G ಫೋನ್ ಖರೀದಿಸೋಕೆ ಇದಕ್ಕಿಂತ ಒಳ್ಳೆಯ ಡಿಸ್ಕೌಂಟ್ ಬೇಕೆ?
ಜನಪ್ರಿಯ ಶಿಯೋಮಿ ಸಂಸ್ಥೆಯು ಹಲವು ಮೊಬೈಲ್‌ಗಳು ಮಾರುಕಟ್ಟೆಯಲ್ಲಿ ಭಾರೀ ಡಿಮ್ಯಾಂಡ್‌ನಲ್ಲಿ ಕಾಣಿಸಿಕೊಂಡಿವೆ. ಆ ಪೈಕಿ ಸಂಸ್ಥೆಯ ರೆಡ್ಮಿ ನೋಟ್ ಸರಣಿಯ ಮೊಬೈಲ್‌ಗಳು ಕ್ಯಾಮೆರಾ ಸೆನ್ಸಾರ್, ಪ್ರೊಸೆಸರ್ ಹಾಗೂ ಇತರೆ ಆಯ್ಕೆಗಳ ಮೂಲಕ ಹೆಚ್ಚಿನ ಅಧಿಕ ಬೇಡಿಕೆಯಲ್ಲಿವೆ. ಸದ್ಯ ರೆಡ್ಮಿ ನೋಟ್ 13 5G (Redmi Note 13 5G) ಫೋನ್ ದೈತ್ಯ ಇ ಕಾಮರ್ಸ್ ವೆಬ್‌ಸೈಟ್ ಅಮೆಜಾನ್‌ನಲ್ಲಿ ಅತ್ಯುತ್ತಮ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರು ಹುಬ್ಬೇರಿಸುವಂತೆ ಮಾಡಿದೆ.
ಹೌದು, ಅಮೆಜಾನ್ ತಾಣದಲ್ಲಿ ರೆಡ್ಮಿ ನೋಟ್ 13 5G (Redmi Note 13 5G) ಮೊಬೈಲ್ ಶೇ. 27% ರಷ್ಟು ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 6GB RAM + 128GB ವೇರಿಯಂಟ್ ಅನ್ನು ಗ್ರಾಹಕರು 15,298ರೂ. ಗಳ ಆಫರ್ ದರದಲ್ಲಿ ಖರೀದಿಗೆ ಲಭ್ಯ ಇದೆ. ಇನ್ನು ಗ್ರಾಹಕರು ಲಭ್ಯ ಇರುವ ಬ್ಯಾಂಕ್ ಆಫರ್ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಪಡೆದುಕೊಂಡರೆ, ಇನ್ನಷ್ಟು ಡಿಸ್ಕೌಂಟ್ ಪಡೆಯುವ ಚಾನ್ಸ್ ಇದೆ.

ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಇದು 108 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದಿರುವುದು ಪ್ಲಸ್ ಪಾಯಿಂಟ್ ಎನಿಸಿದೆ. ಅಮೆಜಾನ್ ವೆಬ್‌ಸೈಟ್‌ನಲ್ಲಿ ರೆಡ್ಮಿ ನೋಟ್ 13 5G ಅನ್ನು ಅತ್ಯುತ್ತಮ ಆಫರ್‌ನಲ್ಲಿ ಖರೀದಿಸಬಹುದು. ಇನ್ನುಳಿದಂತೆ ರೆಡ್ಮಿ ನೋಟ್ 13 5G ಫೋನಿನ ಇತರೆ ಯಾವೆಲ್ಲಾ ಫೀಚರ್ಸ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.
ಆಕರ್ಷಕ ಡಿಸ್‌ಪ್ಲೇ ಡಿಸೈನ್
ರೆಡ್ಮಿ ನೋಟ್ 13 5G ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1080×2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಸಪೋರ್ಟ್ ಪಡೆದಿದ್ದು, ಇದು 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಸಹ ಹೊಂದಿದೆ. ಇದಲ್ಲದೆ 1920Hz ಹೈ-ಫ್ರೀಕ್ವೆನ್ಸಿ PWM ಡಿಮ್ಮಿಂಗ್ ಆಯ್ಕೆ ಪಡೆದುಕೊಂಡಿದೆ.
ವೇಗದ ಪ್ರೊಸೆಸರ್ ಪವರ್
ರೆಡ್ಮಿ ನೋಟ್ 13 ಮೊಬೈಲ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6080 SoC ಪ್ರೊಸೆಸರ್ ಸಾಮರ್ಥ್ಯ ಪವರ್ ಅನ್ನು ಹೊಂದಿದ್ದು, ಇದು ಆಂಡ್ರಾಯ್ಡ್ 13 ಓಎಸ್ ಸಪೋರ್ಟ್‌ನಲ್ಲಿ ಕಾರ್ಯ ಮಾಡಲಿದೆ. ಅದೇ ರೀತಿ 6GB RAM + 128 GB ಮತ್ತು 8GB RAM+ 256 GB ಆಂತರೀಕ ಸ್ಟೋರೇಜ್ ವೇರಿಯಂಟ್ ಕೂಡಾ ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಸಪೋರ್ಟ್ ಜೊತೆಗೆ ಹೆಚ್ಚುವರಿ ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಒದಗಿಸಲಾಗಿದೆ.
ಅತ್ಯುತ್ತಮ ಕ್ಯಾಮೆರಾ ಸೌಲಭ್ಯ
ರೆಡ್ಮಿ ನೋಟ್ 13 ಫೋನ್ ಹಿಂಭಾಗದಲ್ಲಿ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಮೊದಲ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಆಗಿದ್ದು, ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಅಲ್ಲದೇ ಮುಂಭಾಗದಲ್ಲಿ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.
ಬ್ಯಾಟರಿ ಬಲ ಹಾಗೂ ಇತರೆ
ರೆಡ್ಮಿ ನೋಟ್ 13 ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 33W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 3.5 ಎಂಎಂ ಆಡಿಯೊ ಜಾಕ್, 5G SA, NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.3, GPS + GLONASS, USB ಟೈಪ್-C ಚಾರ್ಜಿಂಗ್ ಅನ್ನು ಇದು ಸಪೋರ್ಟ್ ಮಾಡುತ್ತದೆ.


Click it and Unblock the Notifications








