ಜನ ಮೆಚ್ಚಿದ ಫೋನ್! ದಿಢೀರನೆ ಬೆಲೆ ಕುಸಿತ.. ಜೊತೆಗೆ 1,000 ಡಿಸ್ಕೌಂಟ್.. ಹೊಸ ಬೆಲೆ, ವಿಶೇಷತೆಗಳೇನು?
ರೆಡ್ಮಿ ತನ್ನ ಅಭಿಮಾನಿಗಳಿಗೆ ದೊಡ್ಡ ಉಡುಗೊರೆ ನೀಡುತ್ತಿದೆ. ಕಂಪನಿಯು ಕಳೆದ ವರ್ಷ ತನ್ನ Redmi Note 14 ಸರಣಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿತ್ತು. ಈ ಸರಣಿಯಲ್ಲಿ ರೆಡ್ಮಿ ನೋಟ್ 14 5G (Redmi Note 14 5G) ಫೋನ್ ಮಾರುಕಟ್ಟೆಗೆ ಲಗ್ಗೆ ಇಟ್ಟಿತ್ತು. ಪ್ರಸ್ತುತ, ಕಂಪನಿಯು ಈ ಮೊಬೈಲ್‌ನ ಬೆಲೆಯನ್ನು ದಿಢೀರನ್ ಕಡಿಮೆ ಮಾಡಿದೆ. ಈ ಫೋನಿನ ಎಲ್ಲಾ ರೂಪಾಂತರಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ನೀವು ಈ ರೆಡ್ಮಿ 5G ಫೋನನ್ನು ಕೇವಲ 17,999 ರೂ.ಗಳ ಆರಂಭಿಕ ಬೆಲೆಗೆ ಖರೀದಿಸಬಹುದು.
ರೆಡ್ಮಿ ನೋಟ್ 14 5G ಮೊಬೈಲ್ ಮೂರು ಸ್ಟೋರೇಜ್ ಆಯ್ಕೆಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7025 ಪ್ರೊಸೆಸರ್ ಹೊಂದಿದೆ. ಈ ಮೊಬೈಲ್‌ನಲ್ಲಿ 6.67 ಇಂಚಿನ ಡಿಸ್ಪ್ಲೇ ಇದೆ. ಜೊತೆಗೆ 8GB RAM + 256GB ಸ್ಟೋರೇಜ್, 5110mAh ಬ್ಯಾಟರಿ ಮತ್ತು 45W ಫಾಸ್ಟ್ ಚಾರ್ಜಿಂಗ್ ಒಳಗೊಂಡಿದೆ.

ರೆಡ್ಮಿ ನೋಟ್ 14 5G ಹೊಸ ಬೆಲೆ
6GB RAM + 128GB ಸ್ಟೋರೇಜ್ ಬೆಲೆ = 18,999 ರೂ.
ಹೊಸ ಬೆಲೆ = 17,999 ರೂ.
8GB RAM + 128GB ಸ್ಟೋರೇಜ್ ಬೆಲೆ = 19,999 ರೂ.
ಹೊಸ ಬೆಲೆ = 18,999 ರೂ.
8GB RAM + 256GB ಸ್ಟೋರೇಜ್ ಬೆಲೆ = 21,999 ರೂ.
ಹೊಸ ಬೆಲೆ = 20,999 ರೂ.
ರೆಡ್ಮಿ ನೋಟ್ 14 5G ಫೋನ್ 6GB RAM ಮತ್ತು 8GB RAM ರೂಪಾಂತರಗಳಲ್ಲಿ ಮಾರಾಟವಾಗುತ್ತಿದೆ. ಈ ಫೋನಿನ ಎಲ್ಲಾ ರೂಪಾಂತರಗಳ ಬೆಲೆಯನ್ನು 1,000 ರೂ. ಇಳಿಕೆ ಮಾಡಲಾಗಿದೆ. ಇದರ ಆರಂಭಿಕ ಬೆಲೆ 17,999 ರೂ. ಆಗಿದೆ. ಇದು 6GB RAM + 128GB ಸ್ಟೋರೇಜ್ ಬೆಲೆ ಆಗಿದೆ. 8GB RAM + 128GB ಸ್ಟೋರೇಜ್ ಹೊಂದಿರುವ ಫೋನನ್ನು 18,999 ರೂ. ಮತ್ತು 8GB RAM + 256GB ಸ್ಟೋರೇಜ್ ರೂಪಾಂತರವನ್ನು 20,999 ರೂ.ಗೆ ಖರೀದಿಸಬಹುದು. ಈ ಫೋನ್ ಫ್ಯಾಂಟಮ್ ಪರ್ಪಲ್, ಟೈಟಾನ್ ಬ್ಲಾಕ್, ಮಿಸ್ಟಿಕ್ ವೈಟ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.
ರೆಡ್ಮಿ ನೋಟ್ 14 5G ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ರೆಡ್ಮಿ ನೋಟ್ 14 5G ಫೋನ್ 6.67 ಇಂಚಿನ ಪೂರ್ಣ ಎಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1080 × 2400 ಪಿಕ್ಸೆಲ್ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 2100 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಇದರೊಂದಿಗೆ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ. ಇದು ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ.
ಪ್ರೊಸೆಸರ್ ಯಾವುದು?
ರೆಡ್ಮಿ ನೋಟ್ 14 5G ಮೊಬೈಲ್ ಮೀಡಿಯಾಟೆಕ್ ಡೈಮೆನ್ಸಿಟಿ 7025 ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 6 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ರೆಡ್ಮಿ ಫೋನ್ ಆಂಡ್ರಾಯ್ಡ್ 14 ಹೈಪರ್ ಓಎಸ್ ಜೊತೆಗೆ ಕೆಲಸ ಮಾಡುತ್ತದೆ.

ಡ್ಯುಯಲ್ ಕ್ಯಾಮೆರಾ ಸೆಟಪ್
ರೆಡ್ಮಿ ನೋಟ್ 14 5G ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಇದರೊಂದಿಗೆ 2 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ, ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ 16 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಲಭ್ಯವಿದೆ.
ಬ್ಯಾಟರಿ ಬ್ಯಾಕಪ್ ಹೀಗಿದೆ
ರೆಡ್ಮಿ ನೋಟ್ 14 5G ಫೋನ್ 5110mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ಈ ಮೊಬೈಲ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ.


Click it and Unblock the Notifications








