ಮೆಟಲ್ ಫ್ರೇಮ್ ಜೊತೆಗೆ 50MP OIS ಕ್ಯಾಮೆರಾ ಇರುವ ಈ ಫೋನ್ ಬೆಲೆ ಇಳಿಕೆ!
ದಕ್ಷಿಣ ಕೊರಿಯಾದ ಟೆಕ್ ದೊಡ್ಡಣ್ಣ ಸ್ಯಾಮ್‌ಸಂಗ್ ಸಂಸ್ಥೆಯು ಗ್ಯಾಲಕ್ಸಿ ಸರಣಿಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿದ್ದು, ಅವುಗಳಲ್ಲಿ ಗ್ಯಾಲಕ್ಸಿ A ಸರಣಿಯ ಸ್ಮಾರ್ಟ್‌ಫೋನ್‌ಗಳು ಪ್ರೀಮಿಯಂ ಮಾದರಿಯಲ್ಲಿ ಕಾಣಿಸಿಕೊಂಡಿವೆ. ಇನ್ನು ಗ್ಯಾಲಕ್ಸಿ A ಸರಣಿಯಲ್ಲಿಯೇ ಹೈ ಎಂಡ್ ಮಾದರಿಯ ಫೋನ್ ಎನಿಸಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G (Samsung Galaxy A55 5G) ಮೊಬೈಲ್ ಫೀಚರ್ಸ್ ಮೂಲಕ ಸದ್ದು ಮಾಡಿದೆ. ಸದ್ಯ ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಬೆಲೆ ಇಳಿಕೆ ಕಂಡಿದ್ದು, ಮತ್ತೆ ಗ್ರಾಹಕರು ಫೋನಿನತ್ತ ನೋಡುವಂತೆ ಆಗಿದೆ.
ಹೌದು, ಇ ಕಾಮರ್ಸ್ ವೆಬ್‌ಸೈಟ್ ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G (Samsung Galaxy A55 5G) ಮೊಬೈಲ್ ಶೇ. 7% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಈ ಮೊಬೈಲ್‌ನ 8GB RAM + 256GB ವೇರಿಯಂಟ್ 42,999ರೂ. ಗಳ ಆಫರ್ ಬೆಲೆಯಲ್ಲಿ ಖರೀದಿಗೆ ಸಿಗಲಿದೆ. ಅಲ್ಲದೇ ಗ್ರಾಹಕರು ಇನ್ನಷ್ಟು ರಿಯಾಯಿತಿ ಪಡೆಯಲು ಅಮೆಜಾನ್‌ನಲ್ಲಿ ಲಭ್ಯ ಇರುವ ಬ್ಯಾಂಕ್ ಆಫರ್ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಪಡೆಯಬಹುದು.

ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಮೊಬೈಲ್ 8GB RAM + 128GB, 8GB RAM + 256GB, ಮತ್ತು 12GB RAM + 256GB ಸ್ಟೋರೇಜ್ ಸಾಮರ್ಥ್ಯದ ವೇರಿಯಂಟ್ ಆಯ್ಕೆ ಪಡೆದಿದೆ. ಈ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯ ಸಹ ಪಡೆದುಕೊಂಡಿದೆ. ಅಮೆಜಾನ್ ತಾಣದಲ್ಲಿ Samsung Galaxy A55 5G ಫೋನ್ ಅನ್ನು ಭಾರೀ ಡಿಸ್ಕೌಂಟ್‌ನಲ್ಲಿ ಖರೀದಿ ಮಾಡಬಹುದು. ಇನ್ನುಳಿದಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಫೋನಿನ ಇತರೆ ಫೀಚರ್ಸ್ ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಮೊಬೈಲ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1,080x2,408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್, 1,000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಸಪೋರ್ಟ್ ಮಾಡುತ್ತದೆ. ಇನ್ನು ಸ್ಮಾರ್ಟ್‌ಫೋನ್ ಡಿಸ್‌ಪ್ಲೇಯು ವಿಷನ್ ಬೂಸ್ಟರ್ ಫೀಚರ್ಸ್ ಅನ್ನು ಪಡೆದುಕೊಂಡಿದೆ.
ಪ್ರೊಸೆಸರ್ ಸಾಮರ್ಥ್ಯ ಎಷ್ಟು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G (Samsung Galaxy A55 5G) ಮೊಬೈಲ್ Exynos 1480 SoC ಪ್ರೊಸೆಸರ್ ಪವರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 14 ಆಧಾರಿತ One UI 6.1 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 8GB RAM + 128GB, 8GB RAM + 256GB, ಮತ್ತು 12GB RAM + 256GB ಆಂತರೀಕ ಸ್ಟೋರೇಜ್ ಸಾಮರ್ಥ್ಯದಲ್ಲಿ ಲಭ್ಯ.
ಟ್ರಿಪಲ್ ಕ್ಯಾಮೆರಾ ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಲೆನ್ಸ್ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.
ಬ್ಯಾಟರಿ ಹಾಗೂ ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A55 5G ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 25W ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.


Click it and Unblock the Notifications








